ಟೆಸ್ಟ್ ಕ್ರಿಕೆಟ್ | 700 ವಿಕೆಟ್‌ಗಳ ಮೈಲುಗಲ್ಲು ತಲುಪಿದ ಮೊದಲ ವೇಗಿ ಜೇಮ್ಸ್ ಆ‌್ಯಂಡರ್‌ಸನ್

Date:

ಇಂಗ್ಲೆಂಡ್‌ನ ವೇಗದ ಬೌಲರ್ ಜೇಮ್ಸ್ ಆ‌್ಯಂಡರ್‌ಸನ್ ಟೆಸ್ಟ್ ಕ್ರಿಕೆಟ್‌ನಲ್ಲಿ 700 ವಿಕೆಟ್‌ಗಳನ್ನು ಪೂರೈಸಿದ್ದಾರೆ ಮತ್ತು ಕ್ರೀಡಾ ಇತಿಹಾಸದಲ್ಲಿ ಈ ಸಾಧನೆ ಮಾಡಿದ ವಿಶ್ವದ ಮೊದಲ ವೇಗದ ಬೌಲರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

ಮುತ್ತಯ್ಯ ಮುರಳೀಧರನ್ ಮತ್ತು ಶೇನ್ ವಾರ್ನ್ ಅವರ ಬಳಿಕ 700 ವಿಕೆಟ್ ಗಟಿ ದಾಟಿದ ಮೂರನೇ ಬೌಲರ್ ಆಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಧರ್ಮಶಾಲಾದಲ್ಲಿ ಭಾರತ ವಿರುದ್ದ ನಡೆಯುತ್ತಿರುವ ಐದನೇ ಮತ್ತು ಅಂತಿಮ ಟೆಸ್ಟ್‌ನಲ್ಲಿ ಈ ಸಾಧನೆ ಮಾಡಿದ್ದಾರೆ. ಈ ಸಾಧನೆಗೆ ಆ‌್ಯಂಡರ್‌ಸನ್‌ಗೆ ಎರಡು ವಿಕೆಟ್‌ಗಳ ಅಗತ್ಯವಿತ್ತು. ಪಂದ್ಯದ ಮೂರನೇ ದಿನದಂದು ಅವರು ಕುಲದೀಪ್ ಯಾದವ್ ಅವರ ವಿಕೆಟ್ ಪಡೆಯುವ ಮೂಲಕ ಈ ಸಾಧನೆಯನ್ನು ಮಾಡಿದ್ದಾರೆ. ಎರಡನೇ ದಿನ ಶುಭ್‌ಮನ್ ಗಿಲ್ ವಿಕೆಟ್ ಪಡೆದಿದ್ದರು.

500ಕ್ಕೂ ಹೆಚ್ಚು ವಿಕೆಟ್ ಪಡೆದವರ ಪಟ್ಟಿಯಲ್ಲಿ ಟೀಮ್ ಇಂಡಿಯಾದ ರವಿಚಂದ್ರನ್ ಅಶ್ವಿನ್ ಇತ್ತೀಚಿಗೆ ಸ್ಥಾನ ಪಡೆದಿದ್ದರು. ಜೇಮ್ಸ್ ಆ್ಯಂಡರ್‌ಸನ್ ತನ್ನ ವೃತ್ತಿ ಜೀವನದ 187ನೇ ಟೆಸ್ಟ್ ಪಂದ್ಯದಲ್ಲಿ ಈ ಸಾಧನೆ ಮಾಡಿದ್ದಾರೆ.

500ಕ್ಕೂ ಹೆಚ್ಚು ವಿಕೆಟ್ ಪಡೆದವರು

500ಕ್ಕಿಂತಲೂ ಹೆಚ್ಚು ಟೆಸ್ಟ್‌ ವಿಕೆಟ್ ಪಡೆದ ಪಟ್ಟಿಯಲ್ಲಿ ಶ್ರೀಲಂಕಾದ ಸ್ಪಿನ್ ಮಾಂತ್ರಿಕ ಮುತ್ತಯ್ಯ ಮುರಳೀಧರನ್ 800 ವಿಕೆಟ್ ಪಡೆದು ಮೊದಲ ಸ್ಥಾನದಲ್ಲಿದ್ದಾರೆ. ಉಳಿದಂತೆ ಕ್ರಮವಾಗಿ ಆಸೀಸ್‌ನ ಶೇನ್ ವಾರ್ನ್(708), ಇಂಗ್ಲೆಂಡ್‌ನ ಜೇಮ್ಸ್‌ ಆ್ಯಂಡರ್‌ಸನ್ 700, ಭಾರತದ ಸ್ಪಿನ್ ಮಾಂತ್ರಿಕ ಅನಿಲ್ ಕುಂಬ್ಳೆ 619, ಇಂಗ್ಲೆಂಡ್‌ನ ಸ್ಟುವರ್ಟ್‌ ಬ್ರಾಡ್ 604, ಆಸೀಸ್‌ನ ಗ್ಲೆನ್ ಮೆಕ್‌ಗ್ರಾಥ್ 563, ಆಸ್ಟ್ರೇಲಿಯಾದ ಸ್ಪಿನ್ನರ್ ನಾಥನ್ ಲಿಯಾನ್ 527, ವೆಸ್ಟ್‌ ಇಂಡೀಸ್ ಕರ್ಟ್ನಿ ವಾಲ್ಶ್ 519, ರವಿಚಂದ್ರನ್ ಅಶ್ವಿನ್ 513 ವಿಕೆಟ್ ಪಡೆದಿದ್ದು, ಅಗ್ರ 10ರೊಳಗಿನ ಸ್ಥಾನದಲ್ಲಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...