Wimbledon 2025: 23 ವರ್ಷದ ಯಾನಿಕ್ ಸಿನರ್ ಚೊಚ್ಚಲ ವಿಂಬಲ್ಡನ್ ಚಾಂಪಿಯನ್

Date:

ಲಂಡನ್​ ಸೆಂಟರ್​ ಕೋರ್ಟ್​​ನಲ್ಲಿ ನಡೆದ ವಿಂಬಲ್ಡನ್ ಟೆನಿಸ್ 2025ರ ಪುರುಷರ ಫೈನಲ್​ನಲ್ಲಿ ಇಟಲಿಯ 23 ವರ್ಷದ ಯಾನಿಕ್ ಸಿನ್ನರ್ ಭರ್ಜರಿ ಜಯ ಸಾಧಿಸಿದ್ದಾರೆ. ಈ ಗೆಲುವಿನೊಂದಿಗೆ ಚೊಚ್ಚಲ ವಿಂಬಲ್ಡನ್ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ. ಸ್ಪೇನ್​ನ ಯುವ ಟೆನಿಸ್ ಸೆನ್ಸೇಷನ್ ಕಾರ್ಲೋಸ್ ಅಲ್ಕರಾಜ್‌ ನಡುವಣ ಈ ಮುಖಾಮುಖಿಯ ಮೊದಲ ಸೆಟ್​ನಲ್ಲಿ ಸಿನರ್ ಹಿನ್ನಡೆ ಹೊಂದಿದ್ದರು.

ಆರಂಭದಿಂದಲೇ ರಣರೋಚಕ ಪೈಪೋಟಿಗೆ ಸಾಕ್ಷಿಯಾಗಿದ್ದ ಈ ಪಂದ್ಯದಲ್ಲಿ ಮೊದಲ ಸೆಟ್​ ಅನ್ನು ಕಾರ್ಲೋಸ್ ಅಲ್ಕರಾಜ್‌ 6-4 ಅಂತರದಿಂದ ಗೆದ್ದುಕೊಂಡರು. ಆದರೆ ಆ ಬಳಿಕ ವಾಪಸಾತಿ ಮಾಡಿದ ಯಾನಿಕ್ ಸಿನರ್ ಸತತ ಮೂರು ಸೆಟ್​ಗಳನ್ನು 6-4, 6-4 6-4 ಅಂತರದಿಂದ ಗೆದ್ದು ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡರು.

ಈ ಮೂಲಕ 23ನೇ ವಯಸ್ಸಿನಲ್ಲಿ 4ನೇ ಗ್ರ್ಯಾಂಡ್ ಸ್ಲಾಮ್ ಕಿರೀಟವನ್ನು ತನ್ನದಾಗಿಸಿಕೊಂಡರು. ಇದಕ್ಕೂ ಮುನ್ನ ಯಾನಿಕ್ ಸಿನರ್ ಆಸ್ಟ್ರೇಲಿಯನ್ ಓಪನ್ 2024, ಯುಎಸ್ ಓಪನ್ 2024, ಆಸ್ಟ್ರೇಲಿಯನ್ ಓಪನ್ 2025 ರಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದ್ದರು. ಇದೀಗ ಪ್ರತಿಷ್ಠಿತ ವಿಂಬಲ್ಡನ್​ನಲ್ಲೂ ಚಾಂಪಿಯನ್ ಪಟ್ಟ ಅಲಂಕರಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹ್ಯಾಟ್ರಿಕ್ ಪ್ರಶಸ್ತಿ ಗೆಲುವಿನ ನಿರೀಕ್ಷೆಯಲ್ಲಿದ್ದ ಎರಡನೇ ಶ್ರೇಯಾಂಕದ ಕಾರ್ಲೋಸ್‌ ಅಲ್ಕರಾಜ್, ರನ್ನರ್‌ ಅಪ್‌ ಸ್ಥಾನಕ್ಕೆ ತೃಪ್ತಿ ಪಟ್ಟುಕೊಳ್ಳಬೇಕಾಯಿತು. ಅಲ್ಕರಾಜ್‌ ಈಗಾಗಲೇ ಎರಡು ಬಾರಿ ವಿಂಬಲ್ಡನ್‌ ಚಾಂಪಿಯನ್‌ ಆಗಿದ್ದಾರೆ.

ಇದನ್ನು ಓದಿದ್ದೀರಾ? ಇಂಗ್ಲೆಂಡ್‌ ನೆಲದಲ್ಲಿ ಹೊಸ ದಾಖಲೆ ಬರೆದ ಭಾರತದ ಮಹಿಳಾ ಕ್ರಿಕೆಟ್ ತಂಡ

ಕೇವಲ ಐದು ವಾರಗಳ ಹಿಂದೆ ನಡೆದ ಫ್ರೆಂಚ್‌ ಓಪನ್‌ ಪಂದ್ಯಾವಳಿಯ ಫೈನಲ್‌ ಪಂದ್ಯದಲ್ಲಿ, ಕಾರ್ಲೋಸ್‌ ಅಲ್ಕರಾಜ್ ಅವರು ಯಾನಿಕ್‌ ಸಿನರ್ ಅವರನ್ನು ಐದು ಸೆಟ್‌ಗಳಲ್ಲಿ ಮಣಿಸಿದ್ದರು. ಇದೀಗ ಸಿನ್ನರ್‌ ವಿಂಬಲ್ಡನ್‌ ಫೈನಲ್‌ ಪಂದ್ಯದಲ್ಲಿ ಸೋಲಿಸಿ ಸೇಡು ತೀರಿಸಿಕೊಂಡರು.

ಏಪ್ರಿಲ್‌ನಿಂದ ಇದುವರೆಗೆ ಸತತ 24 ಪಂದ್ಯಗಳನ್ನು ಗೆದ್ದಿದ್ದ ಕಾರ್ಲೋಸ್ ಅಲ್ಕರಾಜ್‌, ವಿಂಬಲ್ಡನ್‌ ಫೈನಲ್‌ ಪಂದ್ಯವನ್ನು ಸೋಲುವ ಮೂಲಕ ತಮ್ಮ ಗೆಲುವಿನ ನಾಗಾಲೋಟವನ್ನು ಕೊನೆಗೊಳಿಸಿದ್ದಾರೆ. ಯಾನಿಕ್‌ ಸಿನರ್ ಅವರ ಗೆಲುವು, ಕಾರ್ಲೋಸ್‌ ಅಲ್ಕರಾಜ್‌ ಅವರ ಆಲ್ ಇಂಗ್ಲೆಂಡ್ ಕ್ಲಬ್‌ನಲ್ಲಿನ ಸತತ 20 ಪಂದ್ಯಗಳ ಗೆಲುವಿನ ನಾಗಾಲೋಟಕ್ಕೂ ಪೂರ್ಣ ವಿರಾಮ ನೀಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...