ಬಾಕ್ಸಿಂಗ್‌ ಡೇ ಟೆಸ್ಟ್ | ಮೊದಲ ದಿನ 300ರ ಗಡಿ ದಾಟಿದ ಆಸೀಸ್: ನಾಲ್ವರ ಅರ್ಧ ಶತಕ

Date:

ಮೆಲ್ಬೋರ್ನ್​ನಲ್ಲಿ ನಡೆಯುತ್ತಿರುವ ಬಾರ್ಡರ್ – ಗವಾಸ್ಕರ್ ಟ್ರೋಫಿ ಸರಣಿಯ ಬಾಕ್ಸಿಂಗ್ ಡೇ ಪಂದ್ಯದ ಮೊದಲ ದಿನದಾಟದ ಅಂತ್ಯಕ್ಕೆ ಆಸ್ಟ್ರೇಲಿಯಾ ಮೊದಲ ಇನಿಂಗ್ಸ್‌ನಲ್ಲಿ ಆರಂಭಿಕ ನಾಲ್ವರು ಬ್ಯಾಟರ್‌ಗಳ ಅರ್ಧ ಶತಕದ ನೆರವಿನಿಂದ 311/6 ರನ್‌ ಕಲೆ ಹಾಕಿದೆ.

ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಇನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ ತಂಡಕ್ಕೆ ಉಸ್ಮಾನ್ ಖ್ವಾಜಾ ಹಾಗೂ 19ರ ಯುವ ಯುವ ಆಟಗಾರ ಸ್ಯಾಮ್ ಕೊನ್‌ಸ್ಟಸ್ ಉತ್ತಮ ಆರಂಭ ಒದಗಿಸಿದ್ದರು. ಮೊದಲ ವಿಕೆಟ್​ಗೆ 89 ರನ್​ಗಳ ಜೊತೆಯಾಟವಾಡಿದ ಬಳಿಕ ಕೊನ್‌ಸ್ಟಸ್ ವಿಕೆಟ್ ಒಪ್ಪಿಸಿದರು. ಆದರೆ ಇದಕ್ಕೂ ಮುನ್ನ ಯುವ ದಾಂಡಿಗ ತನ್ನ ಪಾದಾರ್ಪಣೆ ಪಂದ್ಯದಲ್ಲಿಯೆ ಕೇವಲ 65 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 6 ಬೌಂಡರಿಗಳೊಂದಿಗೆ 60 ರನ್​ ಚಚ್ಚಿದ್ದರು.

ಇದಾದ ಬಳಿಕ ಜೊತೆಗೂಡಿದ ಉಸ್ಮಾನ್ ಖ್ವಾಜಾ ಹಾಗೂ ಮಾರ್ನಸ್ ಲಾಬುಶೇನ್ 2ನೇ ವಿಕೆಟ್‌ಗೆ ಅರ್ಧಶತಕದ ಜೊತೆಯಾಟವಾಡಿದರು. ಈ ಹಂತದಲ್ಲಿ 121 ಎಸೆತಗಳಲ್ಲಿ 57 ರನ್ ಬಾರಿಸಿದ್ದ ಖ್ವಾಜಾ ಬುಮ್ರಾ ಎಸೆತದಲ್ಲಿ ಸುಲಭ ಕ್ಯಾಚ್ ನೀಡಿ ಔಟಾದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? U19 ಮಹಿಳೆಯರ ಏಷ್ಯಾಕಪ್: ಭಾರತ ತಂಡ ಚಾಂಪಿಯನ್

ಮತ್ತೊಂದೆಡೆ ಉತ್ತಮ ಬ್ಯಾಟಿಂಗ್ ಮುಂದುವರೆಸಿದ ಮಾರ್ನಸ್ ಲಾಬುಶೇನ್ 145 ಎಸೆತಗಳಲ್ಲಿ 7 ಬೌಂಡರಿಗಳೊಂದಿಗೆ 72 ರನ್​ ಸಿಡಿಸಿದರು.

ಮಾರ್ನಸ್ ಲಾಬುಶೇನ್ (72) ಔಟಾದ ಬಳಿಕ ಆಗಮಿಸಿದ ಸ್ಪೋಟಕ ಆಟಗಾರ ಟ್ರಾವಿಸ್ ಹೆಡ್ (0) ಬುಮ್ರಾ ಎಸೆತದಲ್ಲಿ ಕ್ಲೀನ್ ಬೌಲ್ಡ್ ಆದರು. ಇದರ ಬೆನ್ನಲ್ಲೇ ಮಿಚೆಲ್ ಮಾರ್ಷ್ (4) ಕೂಡ ವಿಕೆಟ್ ಕೀಪರ್​ಗೆ ಕ್ಯಾಚ್ ನೀಡಿ ನಿರ್ಗಮಿಸಿದರು.

ಆದಾಗ್ಯೂ ಜವಾಬ್ದಾರಿಯುತ ಬ್ಯಾಟಿಂಗ್ ಮುಂದುವರೆಸಿದ ಅನುಭವಿ ಆಟಗಾರ ಸ್ಟೀವ್ ಸ್ಮಿತ್, ವಿಕೆಟ್ ಕೀಪರ್ ಬ್ಯಾಟರ್ ಅಲೆಕ್ಸ್ ಕ್ಯಾರಿ ಜೊತೆಗೂಡಿ ಇನಿಂಗ್ಸ್ ಕಟ್ಟಿದರು. ಪರಿಣಾಮ 6ನೇ ವಿಕೆಟ್​ಗೆ 53 ರನ್​ಗಳ ಜೊತೆಯಾಟ ಮೂಡಿಬಂತು. ಈ ಹಂತದಲ್ಲಿ ಆಕಾಶ್ ದೀಪ್ ಎಸೆದ ಎಸೆತದಲ್ಲಿ ಅಲೆಕ್ಸ್ ಕ್ಯಾರಿ (31) ಔಟಾದರು. ಆದರೆ ಮತ್ತೊಂದೆಡೆ ಬಿರುಸಿನ ಆಟವಾಡಿದ ಸ್ಟೀವ್ ಸ್ಮಿತ್ 68 ರನ್​ಗಳೊಂದಿಗೆ ಅಜೇಯರಾಗಿ ಉಳಿದರು.

ಟೀಂ ಇಂಡಿಯಾ ಪರ ಜಸ್‌ಪ್ರೀತ್ ಬುಮ್ರಾ ಮತ್ತೆ ತಮ್ಮ ಕರಾರುವಾಕ್ಕಾದ ಬೌಲಿಂಗ್ ಮೂಲಕ 3 ವಿಕೆಟ್ ಪಡೆದರೆ, ಆಕಾಶ್ ದೀಪ್, ವಾಷಿಂಗ್ಟನ್ ಸುಂದರ್ ಮತ್ತು ರವೀಂದ್ರ ಜಡೇಜಾ ತಲಾ 1 ವಿಕೆಟ್ ಪಡೆದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...