ಪ್ಯಾರಿಸ್ ಡೈಮಂಡ್ ಲೀಗ್‌ ಪ್ರಶಸ್ತಿಗೆ ಮುತ್ತಿಕ್ಕಿದ ಜಾವೆಲಿನ್ ತಾರೆ ನೀರಜ್ ಚೋಪ್ರಾ

Date:

ಭಾರತದ ಜಾವೆಲಿನ್ ತಾರೆ ನೀರಜ್ ಚೋಪ್ರಾ ಪ್ಯಾರಿಸ್ ಡೈಮಂಡ್ ಲೀಗ್‌ನಲ್ಲಿ ಪ್ರಶಸ್ತಿಗೆ ಮುತ್ತಿಕ್ಕಿದ್ದಾರೆ. 2023ರಲ್ಲಿ ಡೈಮಂಡ್ ಲೀಗ್​ನಲ್ಲಿ ಪ್ರಶಸ್ತಿ ಗೆದ್ದಿದ್ದ ನೀರಜ್ ಚೋಪ್ರಾ ಇದೀಗ ಮತ್ತೊಮ್ಮೆ ಡೈಮಂಡ್ ಲೀಗ್‌ನಲ್ಲಿ ಪ್ರಶಸ್ತಿ ಗೆದ್ದಿದ್ದಾರೆ.

ಜರ್ಮನಿಯ ಚಾಂಪಿಯನ್​ ಜಾವೆಲಿನ್ ಎಸೆತಗಾರ ಜೂಲಿಯನ್ ವೆಬರ್ ಅವರನ್ನು ಹಿಂದಿಕ್ಕುವ ಮೂಲಕ ನೀರಜ್ ಚೋಪ್ರಾ ಈ ಪ್ರಶಸ್ತಿ ತಮ್ಮದಾಗಿಸಿಕೊಂಡಿದ್ದಾರೆ.

ಪ್ಯಾರಿಸ್ ಡೈಮಂಡ್ ಲೀಗ್‌ನಲ್ಲಿ ನೀರಜ್ ಅವರು 8 ವರ್ಷಗಳ ಬಳಿಕ ಕಾಣಿಸಿಕೊಂಡಿದ್ದಾರೆ. ತಮ್ಮ ಮೊದಲ ಪ್ರಯತ್ನದಲ್ಲೇ 88.16 ಮೀಟರ್ ಎಸೆತದೊಂದಿಗೆ ಶುಭಾರಂಭ ಮಾಡಿದ್ದರು. ಈ ಎಸೆತವೇ ಇತರ ಸ್ಪರ್ಧಿಗಳಿಗೆ ಗುರಿಯಾಗಿ ಮಾರ್ಪಟ್ಟಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎರಡನೇ ಪ್ರಯತ್ನದಲ್ಲಿ 85.10 ಮೀಟರ್ ದೂರ ಎಸೆದಿದ್ದರು. ಆದರೆ ಕಠಿಣ ಪ್ರತಿ ಸ್ಪರ್ಧಿ ವೆಬರ್ ಈ ವೇಳೆ 87.88 ಮೀಟರ್ ತಲುಪಿದ್ದರು. ಇದಾದ ಬಳಿಕ ಲಯ ತಪ್ಪಿದ ನೀರಜ್ ಸತತ ಮೂರು ಫೌಲ್ ಎಸೆತಗಳನ್ನು ಎಸೆದರು.

ಮೌರಿಸಿಯೊ ಲೂಯಿಜ್ ಡ ಸಿಲ್ವಾ 86.62 ಮೀಟರ್ ದೂರಕ್ಕೆ ಎಸೆದು ಪೈಪೋಟಿಗೆ ಇಳಿದರು. ಅತ್ತ ಜೂಲಿಯನ್ ವೆಬರ್ ಸತತ ಪ್ರಯತ್ನ ನಡೆಸಿದರೂ, ನೀರಜ್ ಚೋಪ್ರಾ ಅವರ 88.16 ಮೀಟರ್ ಗುರಿಯನ್ನು ದಾಟಲು ಸಾಧ್ಯವಾಗಲಿಲ್ಲ. ಅಂತಿಮವಾಗಿ ನೀರಜ್ ಚೋಪ್ರಾ ಮೊದಲ ಎಸೆತದಲ್ಲಿ ಕ್ರಮಿಸಿದ 88.16 ಮೀಟರ್​ ಮೊದಲ ಸ್ಥಾನವನ್ನು ಪಡೆದುಕೊಂಡಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...