ಐಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಜಯ್‌ ಶಾ

Date:

ಅಂತಾರಾಷ್ಟ್ರೀಯ ಕ್ರಿಕೆಟ್‌ ಮಂಡಳಿಯ(ಐಸಿಸಿ) ನೂತನ ಅಧ್ಯಕ್ಷರಾಗಿ ಜಯ್‌ ಶಾ ಅಧಿಕಾರ ವಹಿಸಿಕೊಂಡಿದ್ದಾರೆ.

2024ರ ಆಗಸ್ಟ್‌ 27ರಂದು ಜಯ್ ಶಾ ಐಸಿಸಿ ಮುಖ್ಯಸ್ಥರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದರು. 2020ರಿಂದ ಅಧ್ಯಕ್ಷರಾಗಿದ್ದ ಗ್ರೆಗ್ ಬಾರ್ಕ್ಲೇ ಮೂರನೇ ಅವಧಿಯನ್ನು ಬಯಸದಿರಲು ನಿರ್ಧರಿಸಿದ ನಂತರ ಜಯ್‌ ಶಾ ಆ ಸ್ಥಾನಕ್ಕೆ ಏಕೈಕ ನಾಮನಿರ್ದೇಶಿತರಾಗಿದ್ದರು.

ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಭಾಷಣ ಮಾಡಿದ ಜಯ್‌ ಶಾ, ಲಾಸ್‌ ಏಂಜಲೀಸ್‌ನಲ್ಲಿ ನಡೆಯಲಿರುವ 2028ರ ಒಲಿಂಪಿಕ್ಸ್‌ ಕ್ರೀಡಾಕೂಟದಲ್ಲಿ ಕ್ರಿಕೆಟ್‌ ಸೇರ್ಪಡೆ, ಮಹಿಳಾ ಕ್ರಿಕೆಟ್‌ ಆಟದಲ್ಲಿ ಮತ್ತಷ್ಟು ಬೆಳವಣಿಗೆ ತರಬೇಕೆಂಬ ವಿಷಯಗಳ ಬಗ್ಗೆ ಬೆಳಕು ಚೆಲ್ಲಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಐಪಿಎಲ್ ಜನಪ್ರಿಯತೆ | ಮನರಂಜನೆ, ಬಹುಕೋಟಿ ಆದಾಯ ಹಾಗೂ ಕರಾಳ ಮುಖ

ಐಸಿಸಿ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಳ್ಳುತ್ತಿರುವುದು ನನಗೆ ಹೆಮ್ಮೆ. ಐಸಿಸಿ ನಿರ್ದೇಶಕರು ಹಾಗೂ ಸದ್ಯರ ಬೆಂಬಲ ಮತ್ತು ಅಪಾರವಾದ ನಂಬಿಕೆಗೆ ನಾನು ಕೃತಜ್ಞನಾಗಿದ್ದೇನೆ. 2028ರ ಒಲಿಂಪಿಕ್ಸ್‌ ಕ್ರೀಡಾಕೂಟಕ್ಕೆ ತಯಾರಿ ಮಾಡಿಕೊಳ್ಳಲು ಇದು ಉತ್ತಮ ಸಮಯವಾಗಿದೆ. ಇದರಿಂದ ಕ್ರಿಕೆಟ್‌ ವಿಶ್ವದಾದ್ಯಂತ ಇನ್ನೂ ಹೆಚ್ಚಿನ ಅಭಿಮಾನಿಗಳನ್ನು ಒಳಗೊಳ್ಳಲಿದೆ. ಮುಂದಿನ ಎಲ್ಲ ಅವಕಾಶಗಳನ್ನ ಬಳಸಿಕೊಂಡು ಕ್ರೀಡೆಯನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಲು ಐಸಿಸಿ ತಂಡ ಮತ್ತು ಸದಸ್ಯ ರಾಷ್ಟ್ರಗಳೊಂದಿಗೆ ನಿಕಟವಾಗಿ ಕೆಲಸ ಮಾಡಲು ನಾನು ಎದುರು ನೋಡುತ್ತಿದ್ದೇನೆ ಎಂದು ಹೇಳಿದರು.

2009ರಲ್ಲಿ ಗುಜರಾತ್ ಕ್ರಿಕೆಟ್ ಅಸೋಸಿಯೇಷನ್‌ ಸೇರಿದ ಜಯ್‌ ಶಾ 2019ರಲ್ಲಿ ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿಯ ಕಿರಿಯ ಗೌರವ ಕಾರ್ಯದರ್ಶಿಯಾಗಿ ಆಯ್ಕೆಯಾದರು. ಏಷ್ಯನ್ ಕ್ರಿಕೆಟ್ ಕೌನ್ಸಿಲ್‌ನ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಇದರೊಂದಿಗೆ ಐಸಿಸಿಯ ಹಣಕಾಸು ಮತ್ತು ವಾಣಿಜ್ಯ ವ್ಯವಹಾರಗಳ ಸಮಿತಿಯ ಅಧ್ಯಕ್ಷರಾಗಿ ಪ್ರಮುಖ ಕ್ರಿಕೆಟ್‌ ಸಂಸ್ಥೆಗಳನ್ನು ಮುನ್ನಡೆಸುವ ಸಾಮರ್ಥ್ಯ ತೋರಿದ್ದರು. ಇದೀಗ 2024ರಲ್ಲಿ ಐಸಿಸಿ ಮುಖ್ಯಸ್ಥರಾಗಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...