ಬೆಂಗಳೂರು ಕಾಲ್ತುಳಿತ ಪ್ರಕರಣ: ಆರ್​ಸಿಬಿ, ಕೆಎಸ್‌ಸಿಎಗೆ ಹೈಕೋರ್ಟ್​ ನೋಟಿಸ್

Date:

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನರು ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್​ನ ವಿಭಾಗೀಯ ಪೀಠ ಆರ್​ಸಿಬಿ, ಕೆಎಸ್‌ಸಿಎ, ಡಿಎನ್‌ಎ ಸಂಸ್ಥೆಗಳಿಗೆ ನೋಟಿಸ್ ಜಾರಿ ಮಾಡಿದೆ.

ಕಾಲ್ತುಳಿತ ಘಟನೆಗೆ ಸಂಬಂಧಿಸಿದಂತೆ ದಾಖಲಿಸಿಕೊಂಡಿದ್ದ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯನ್ನು ವಿಭಾಗೀಯ ಪೀಠ ಇಂದು (ಜೂ.17) ನಡೆಸಿತು. ರಾಜ್ಯ ಸರ್ಕಾರ ಘಟನೆಗೆ ಸಂಬಂಧಿಸಿದಂತೆ ಈವರೆಗೂ ಕೈಗೊಂಡ ಕ್ರಮದ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಹೈಕೋರ್ಟ್​ಗೆ ಸಲ್ಲಿಕೆ ಮಾಡಿತು.

ಸರ್ಕಾರದ ಪರ ಮಾದ ಮಂಡಿಸಿದ ಅಡ್ವೋಕೇಟ್​ ಜನರಲ್​ ಶಶಿಕಿರಣ್‌ ಶೆಟ್ಟಿ, ತನಿಖೆ ಇನ್ನೂ ಬಾಕಿಯಿರುವುದರಿಂದ ಪೂರ್ವಾಗ್ರಹವಿರಬಾರದು, ಮೂರನೇ ವ್ಯಕ್ತಿಗಳ ವಿರುದ್ಧ ಅಭಿಪ್ರಾಯವೆಂದು ಭಾವಿಸಬಾರದು. ಹೀಗಾಗಿ ಮುಚ್ಚಿದ ಲಕೋಟೆಯಲ್ಲಿ ವರದಿ ಸಲ್ಲಿಸಲಾಗಿದೆ. ದಾಖಲೆಗಳನ್ನು ಹಂಚಿಕೊಳ್ಳುವುದಕ್ಕೆ ಸರ್ಕಾರದ ಆಕ್ಷೇಪವಿಲ್ಲ. ಆದರೆ. ನ್ಯಾಯಾಂಗ ತನಿಖೆ ಬಾಕಿಯಿರುವುದರಿಂದ ವರದಿ ಬಹಿರಂಗ ಬೇಡ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮುಂಗಾರು ಮಳೆಗೆ ಸರ್ಕಾರ ಸಿದ್ಧವಿದೆಯೇ?

ಅರ್ಜಿದಾರರ ಪರ ವಾದ ಮಂಡಿಸಿದ ವಕೀಲರು, ಮುಚ್ಚಿದ ಲಗೋಟೆಯಲ್ಲಿ ಸರ್ಕಾರ ಸಲ್ಲಿಸಿರುವ ವರದಿಯನ್ನು ಬಹಿರಂಗಗೊಳಿಸಲು ಕೆಲ ಅರ್ಜಿದಾರರು ಮನವಿ ಮಾಡಿದ್ದಾರೆ. ಸರ್ಕಾರ ಪಾರದರ್ಶಕ, ಪ್ರಜಾಸತ್ತಾತ್ಮಕ ಪ್ರಕ್ರಿಯೆ ಅನುಸರಿಸಬೇಕು. ಮಾಹಿತಿಯ ಹಕ್ಕನ್ನು ಸರ್ಕಾರ ಗೌರವಿಸಬೇಕು. ಸರ್ಕಾರ ಯಾವುದೇ ಮಾಹಿತಿಯನ್ನೂ ಮುಚ್ಚಿಡಬಾರದು. ಸರ್ಕಾರ ಸಂಪೂರ್ಣ ತಪ್ಪು ವರದಿ ನೀಡಿದರೂ ತಿಳಿಯುವುದಿಲ್ಲ. ಸಾರ್ವಜನಿಕರ ಹಿತದೃಷ್ಟಿಯಿಂದ ವರದಿಯಲ್ಲಿನ ಅಂಶ ಬಹಿರಂಗವಾಗಬೇಕು. ಇಲಿ, ಬೆಕ್ಕಿನ ಆಟ ಸರಿಯಲ್ಲವೆಂದು ಹೇಳಿದರು.

ಬಳಿಕ ಹೈಕೋರ್ಟ್​ ಸರ್ಕಾರದ ವಾದ ಕೇಳಿದ ಬಳಿಕ ಮುಚ್ಚಿದ ಲಕೋಟೆ ಬಗ್ಗೆ ತೀರ್ಮಾನ ಮಾಡಲಾಗುವುದು ಎಂದು ವಿಚಾರಣೆಯನ್ನು ಜೂನ್ 23ಕ್ಕೆ ನಿಗದಿಪಡಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...