ಎಲ್ಲ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಟೀಮ್ ಇಂಡಿಯಾ ಕ್ರಿಕೆಟಿಗ ಕೇದಾರ್ ಜಾಧವ್

Date:

ಜೂನ್ 1ರಂದು ಎಲ್ಲ ಮಾದರಿಯ ಕ್ರಿಕೆಟ್‌ಗೆ ಟೀಮ್ ಇಂಡಿಯಾದ ಆಟಗಾರ ದಿನೇಶ್ ಕಾರ್ತಿಕ್ ನಿವೃತ್ತಿ ಘೋಷಿಸಿದ ಬೆನ್ನಲ್ಲೇ, ಟೀಮ್ ಇಂಡಿಯಾದ ಮತ್ತೋರ್ವ ಆಟಗಾರ ಕೇದಾರ್ ಜಾಧವ್ ಎಲ್ಲ ಮಾದರಿಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ.

ಈ ಬಗ್ಗೆ ತನ್ನ ಎಕ್ಸ್‌(ಟ್ವಿಟ್ಟರ್‌) ಖಾತೆಯಲ್ಲಿ ಟ್ವೀಟ್ ಮಾಡಿರುವ ಅವರು, “1500 ಗಂಟೆಗಳ ಕಾಲ ನನ್ನ ವೃತ್ತಿ ಜೀವನದುದ್ದಕ್ಕೂ ನೀವು ನೀಡಿದ ಪ್ರೀತಿ ಮತ್ತು ಬೆಂಬಲಕ್ಕಾಗಿ ಎಲ್ಲರಿಗೂ ಧನ್ಯವಾದಗಳು. ನಾನು ಎಲ್ಲಾ ರೀತಿಯ ಕ್ರಿಕೆಟ್‌ನಿಂದ ನಿವೃತ್ತನಾಗುತ್ತಿದ್ದೇನೆ” ಎಂದು ಕೇದಾರ್ ಜಾಧವ್ ಸೋಮವಾರ(ಜೂನ್ 3) ತಿಳಿಸಿದ್ದಾರೆ.

ಕೇದಾರ್ ಜಾಧವ್ 2014ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದರು. 2014ರ ನವೆಂಬರ್ 16ರಂದು ರಾಂಚಿಯಲ್ಲಿ ಶ್ರೀಲಂಕಾ ವಿರುದ್ಧ ತಮ್ಮ ಮೊದಲ ಏಕದಿನ ಪಂದ್ಯವನ್ನಾಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

73 ಏಕದಿನ ಪಂದ್ಯಗಳನ್ನಾಡಿರುವ ಜಾಧವ್ 42.09 ಸರಾಸರಿಯಲ್ಲಿ 1,389 ರನ್ ಗಳಿಸಿದ್ದಾರೆ. ಈ ಅವಧಿಯಲ್ಲಿ ಅವರು ಎರಡು ಶತಕ ಮತ್ತು ಆರು ಅರ್ಧ ಶತಕಗಳನ್ನು ಗಳಿಸಿದ್ದಾರೆ. ಅಲ್ಲದೆ, 27 ವಿಕೆಟ್‌ಗಳನ್ನು ಕೂಡ ಪಡೆದಿದ್ದಾರೆ.

9 ಅಂತಾರಾಷ್ಟ್ರೀಯ ಟಿ20 ಪಂದ್ಯಗಳಲ್ಲಿ 20.33ರ ಸರಾಸರಿಯಲ್ಲಿ 58 ರನ್ ಗಳಿಸಿದ್ದಾರೆ. ಐಪಿಎಲ್‌ನಲ್ಲಿ 93 ಪಂದ್ಯಗಳಲ್ಲಿ 22.15 ಸರಾಸರಿಯಲ್ಲಿ 1,196 ರನ್ ಗಳಿಸಿದ್ದಾರೆ. ನಾಲ್ಕು ಅರ್ಧಶತಕಗಳ ಇನ್ನಿಂಗ್ಸ್‌ಗಳನ್ನು ಆಡಿದ್ದಾರೆ.

ಜಾಧವ್ 2020ರಲ್ಲಿ ಕೊನೆಯ ಬಾರಿ ಟೀಮ್ ಇಂಡಿಯಾ ಜೆರ್ಸಿಯಲ್ಲಿ ಕಾಣಿಸಿಕೊಂಡಿದ್ದರು. ನ್ಯೂಝಿಲೆಂಡ್ ವಿರುದ್ಧದ ಏಕದಿನ ಪಂದ್ಯದಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದ ಬಳಿಕ ಅವರಿಗೆ ಟೀಮ್ ಇಂಡಿಯಾದಲ್ಲಿ ಸ್ಥಾನ ಸಿಕ್ಕಿರಲಿಲ್ಲ. ಇದರ ನಡುವೆ ದೇಶೀಯ ಕ್ರಿಕೆಟ್​ನಲ್ಲಿ ಉತ್ತಮ ಪ್ರದರ್ಶನ ನೀಡಿ, ಹಲವು ಬಾರಿ ಕಂಬ್ಯಾಕ್ ಮಾಡಲು ಯತ್ನಿಸಿದರೂ ಭಾರತ ತಂಡದಲ್ಲಿ ಅವಕಾಶ ಸಿಕ್ಕಿರಲಿಲ್ಲ. ಅದರಂತೆ ಇದೀಗ 10 ವರ್ಷಗಳ ತಮ್ಮ ಅಂತಾರಾಷ್ಟ್ರೀಯ ಕೆರಿಯರ್ ವಿದಾಯ ಹೇಳಲು ನಿರ್ಧರಿಸಿದ್ದಾರೆ. ಅಲ್ಲದೆ ಈ ವಿದಾಯದೊಂದಿಗೆ ಐಪಿಎಲ್ ಹಾಗೂ ದೇಶೀಯ ಕ್ರಿಕೆಟ್​ಗೂ ಕೇದಾರ್ ಜಾಧವ್ ನಿವೃತ್ತಿ ಘೋಷಿಸಿದ್ದಾರೆ.

ಐಪಿಎಲ್: ಆರ್​ಸಿಬಿ ಪರ ಚೊಚ್ಚಲ ಪಂದ್ಯವಾಡಿದ್ದ ಕೇದಾರ್ ಜಾಧವ್

2009ರಲ್ಲಿ ಐಪಿಎಲ್‌ನಲ್ಲಿ ಕ್ರಿಕೆಟ್‌ ಜೀವನ ಆರಂಭಿಸಿದ್ದ ಕೇದಾರ್ ಜಾಧವ್, ಆರ್​ಸಿಬಿ ಪರ ಚೊಚ್ಚಲ ಪಂದ್ಯವಾಡಿದ್ದರು. ಇದಾದ ಬಳಿಕ ಡೆಲ್ಲಿ ಡೇರ್​ ಡೆವಿಲ್ಸ್​ ತಂಡದ ಭಾಗವಾಗಿದ್ದರು. 2011ರಲ್ಲಿ ಕೊಚ್ಚಿ ಟಸ್ಕರ್ಸ್​ ತಂಡದ ಪರವಾಗಿ ಕಣಕ್ಕಿಳಿದಿದ್ದರು. ಆ ಬಳಿಕ ಮತ್ತೆ ಡೆಲ್ಲಿ ಡೇರ್ ಡೆವಿಲ್ಸ್ ತಂಡದಲ್ಲಿ ಮೂರು ಸೀಸನ್ ಆಡಿದ್ದರು.

2016 ಮತ್ತು 2017 ರಲ್ಲಿ ಮತ್ತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಕಾಣಿಸಿಕೊಂಡಿದ್ದ ಜಾಧವ್, 2018 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್​ ಪಾಲಾಗಿದ್ದರು. ಮೂರು ವರ್ಷಗಳ ಕಾಲ ಸಿಎಸ್​ಕೆ ತಂಡದಲ್ಲಿದ್ದ ಕೇದಾರ್ ಜಾಧವ್ ಅವರನ್ನು 2021ರ ಹರಾಜಿನಲ್ಲಿ ಸನ್​ರೈಸರ್ಸ್​ ಹೈದರಾಬಾದ್ ಫ್ರಾಂಚೈಸಿ 2 ಕೋಟಿ ರೂ.ಗೆ ಖರೀದಿಸಿತ್ತು.

ಇನ್ನು 2023 ರ ಐಪಿಎಲ್ ಆರ್​ಸಿಬಿ ಪರ ಬದಲಿ ಆಟಗಾರನಾಗಿ ಆಯ್ಕೆಯಾಗಿದ್ದ ಕೇದಾರ್ ಜಾಧವ್ 2 ಪಂದ್ಯಗಳಲ್ಲಿ ಒಟ್ಟು 12 ರನ್​ಗಳಿಸಲಷ್ಟೇ ಶಕ್ತರಾಗಿದ್ದರು. ಅದಾಗ್ಯೂ ಈ ಬಾರಿಯ ಹರಾಜಿಗಾಗಿ 2 ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದರು. ಆದರೆ, 38 ವರ್ಷ ಕೇದರ್ ಜಾಧವ್ ಅವರನ್ನು ಹರಾಜು ಪಟ್ಟಿಯಿಂದ ಕೈ ಬಿಡಲಾಗಿತ್ತು. ಇದರೊಂದಿಗೆ ಜಾಧವ್ ಅವರ ಐಪಿಎಲ್ ಕೆರಿಯರ್ ಕೂಡ ಮುಗಿದಿತ್ತು. ಇದೀಗ ಎಲ್ಲಾ ಮಾದರಿಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸುವ ಮೂಲಕ ಕೇದರ್ ಜಾಧವ್ ವೃತ್ತಿಜೀವನಕ್ಕೆ ವಿದಾಯ ಹೇಳಿದ್ದಾರೆ.

1985ರ ಮಾರ್ಚ್ 26ರಂದು ಮಹಾರಾಷ್ಟ್ರದ ಪುಣೆಯಲ್ಲಿ ಜನಿಸಿದ್ದ ಕೇದಾರ್ ಜಾಧವ್, 2024ರ ಐಪಿಎಲ್‌ನ ವೇಳೆ ಮರಾಠಿ ಭಾಷೆಯಲ್ಲಿ ಕಮೆಂಟರಿ ಕೂಡ ಮಾಡಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...