ಐಪಿಎಲ್ | ಪ್ಲೇ-ಆಫ್ ಟಿಕೆಟ್ ಗಿಟ್ಟಿಸಿಕೊಂಡ ಕೋಲ್ಕತ್ತಾ ನೈಟ್ ರೈಡರ್ಸ್

Date:

ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ ಮೈದಾನದಲ್ಲಿ ಮುಂಬೈ ಇಂಡಿಯನ್ಸ್ ತಂಡದ ವಿರುದ್ಧ ನಡೆದ ಐಪಿಎಲ್ ಪಂದ್ಯದಲ್ಲಿ ಗೆಲುವು ಸಾಧಿಸುವುದರೊಂದಿಗೆ ಕೆಕೆಆರ್ ತಂಡವು ಪ್ಲೇ ಆಫ್‌ಗೆ ಎಂಟ್ರಿ ಕೊಟ್ಟಿದೆ. ಆ ಮೂಲಕ 2024ರ ಐಪಿಎಲ್‌ ಸೀಸನ್‌ನ ಮೊದಲ ತಂಡವಾಗಿ ಪ್ಲೇ-ಆಫ್‌ಗೆ ಪ್ರವೇಶ ಪಡೆಯಿತು.

ಮಳೆಬಾಧಿತ ಇಂದಿನ ಪಂದ್ಯವನ್ನು 16 ಓವರ್‌ಗಳಿಗೆ ಮೀಸಲಿರಿಸಲಾಗಿತ್ತು. ಟಾಸ್ ಸೋತಿದ್ದ ಕೆಕೆಆರ್ ಮೊದಲು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟಿತ್ತು. ಮುಂಬೈ ಬೌಲಿಂಗ್‌ನ ಎದುರಲ್ಲಿ ರನ್ ಗಳಿಸಲು ಪರದಾಡಿದರಾದರೂ, 16 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 157 ರನ್ ಗಳಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಗುರಿಯನ್ನು ಬೆನ್ನಟ್ಟುವಲ್ಲಿ ವಿಫಲವಾದ ಮುಂಬೈ, ಕೋಲ್ಕತ್ತಾದ ಕರಾರುವಾಕ್ಕಾದ ಬೌಲಿಂಗ್‌ನಿಂದಾಗಿ 16 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 138 ರನ್ ಗಳಿಸಲಷ್ಟೇ ಶಕ್ತವಾಯಿತು. ಕೊನೆಯಲ್ಲಿ 18 ರನ್‌ಗಳಿಂದ ಸೋಲೊಪ್ಪಿತು.

ಮುಂಬೈ ಪರ ಬ್ಯಾಟಿಂಗ್‌ನಲ್ಲಿ ಇಶಾನ್ ಕಿಶನ್ 40, ತಿಲಕ್ ವರ್ಮಾ 32, ನಮನ್ ಧೀರ್ 17 ರನ್ ಗಳಿಸಿ, ಗರಿಷ್ಠ ಸ್ಕೋರರ್ ಎನಿಸಿಕೊಂಡರು.

ಕೆಕೆಆರ್ ಪರ ಬೌಲಿಂಗ್‌ನಲ್ಲಿ ನಿತೀಶ್ ರಾಣಾ, ಆ್ಯಂಡ್ರೂ ರಸೆಲ್ ಹಾಗೂ ವರುಣ್ ಚಕ್ರವರ್ತಿ ತಲಾ ಎರಡು ವಿಕೆಟ್ ಗಳಿಸಿದರೆ, ಸುನಿಲ್ ನರೇನ್ ಒಂದು ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು.

ಕೋಲ್ಕತ್ತಾ ನೈಟ್ ರೈಡರ್ಸ್ ಈವರೆಗೆ ಆಡಿರುವ 12 ಪಂದ್ಯಗಳಲ್ಲಿ 9 ಗೆಲುವು ಹಾಗೂ ಮೂರು ಸೋಲಿನೊಂದಿಗೆ ಪ್ಲೇ ಆಫ್ ಪ್ರವೇಶಿಸಿತು. ಶ್ರೇಯಸ್ ಅಯ್ಯರ್ ನೇತೃತ್ವದ ತಂಡವು ಸದ್ಯ 1.43 ನೆಟ್ ರನ್‌‌ರೇಟ್ ಹೊಂದಿದೆ‌. ಇನ್ನೂ ಎರಡು ಲೀಗ್ ಪಂದ್ಯಗಳು ಬಾಕಿ ಇವೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...