ಐಪಿಎಲ್ | 16 ವರ್ಷಗಳಲ್ಲೇ ಕಳಪೆ ಸಾಧನೆ: ಮೌನ ಮುರಿದ ಕೆಕೆಆರ್ ನಾಯಕ

Date:

2025ರ ಆವೃತ್ತಿಯಲ್ಲಿ ಅತ್ಯಂತ ಕಳಪೆ ಪ್ರದರ್ಶನ ನೀಡಿದ್ದ ಕೋಲ್ಕತ್ತಾ ನೈಟ್‌ ರೈಡರ್ಸ್ ತಂಡವು, 2026ರ ಐಪಿಎಲ್ ಋತುವಿನಲ್ಲಿ ಬಲಿಷ್ಠವಾಗಿ ವಾಪಸಾತಿ ಮಾಡುವ ವಿಶ್ವಾಸದಲ್ಲಿದೆ. ಕಳೆದ ಬಾರಿ ಅಜಿಂಕ್ಯ ರಹಾನೆ ನಾಯಕತ್ವದಲ್ಲಿ ಕೆಕೆಆರ್ ತಂಡ ಪ್ಲೇ ಆಫ್ ತಲುಪುವಲ್ಲಿ ವಿಫಲವಾಗಿ, ಅಂಕಪಟ್ಟಿಯಲ್ಲಿ 8ನೇ ಸ್ಥಾನಕ್ಕೆ ಕುಸಿದಿತ್ತು ಎಂದು ಎನ್‌ಡಿ ಟಿವಿ ವರದಿ ಮಾಡಿದೆ.

​​ಇದೀಗ 37 ವರ್ಷದ ರಹಾನೆ ಅವರನ್ನು ಮೂರು ಬಾರಿಯ ಚಾಂಪಿಯನ್ಸ್ ಕೆಕೆಆರ್, ಸತತ ಎರಡನೇ ಋತುವಿಗೂ ನಾಯಕರನ್ನಾಗಿ ಉಳಿಸಿಕೊಂಡಿದೆ. ಕಳೆದ ಬಾರಿಯ ವೈಫಲ್ಯದ ಬಳಿಕ ತಂಡವನ್ನು ಮುನ್ನಡೆಸುವ ಒತ್ತಡದ ಕುರಿತು ರಹಾನೆ ಇದೀಗ ಮನಬಿಚ್ಚಿ ಮಾತನಾಡಿದ್ದಾರೆ.

ಮಾಧ್ಯಮವೊಂದು ಏರ್ಪಡಿಸಿದ್ದ ವಿಶೇಷ ಸಂವಾದದಲ್ಲಿ ಮಾತನಾಡಿದ ರಹಾನೆ, “ಒಬ್ಬ ಆಟಗಾರನಾಗಿ ಮತ್ತು ನಾಯಕನಾಗಿ ಪ್ರತಿ ವರ್ಷವೂ ವಿಭಿನ್ನ ಸವಾಲುಗಳಿರುತ್ತವೆ. ಆದರೆ, ಪ್ರತಿಯೊಂದು ಬಾರಿಯೂ ಸಕಾರಾತ್ಮಕವಾಗಿರಬೇಕು ಎಂಬುದನ್ನು ನಾನು ಕಲಿತಿದ್ದೇನೆ. ತಂಡವನ್ನು ಮುನ್ನಡೆಸುವ ಈ ಜವಾಬ್ದಾರಿಯನ್ನು ನನಗೆ ನೀಡಿದ ಫ್ರಾಂಚೈಸಿಗೆ ನಾನು ನಿಜಕ್ಕೂ ಆಭಾರಿಯಾಗಿದ್ದೇನೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

​”ಎಲ್ಲವನ್ನೂ ನಾನು ಸಮಾನವಾಗಿ ಸ್ವೀಕರಿಸುತ್ತೇನೆ. ಸವಾಲುಗಳು ಎದುರಾದಾಗ, ಅದರಲ್ಲಿರುವ ಅವಕಾಶಗಳನ್ನು ನಾವು ಹುಡುಕಬೇಕು. ನನ್ನ ವೃತ್ತಿಜೀವನದುದ್ದಕ್ಕೂ ನನ್ನ ಮನಸ್ಥಿತಿ ಹೀಗೆಯೇ ಇದೆ. ಸವಾಲುಗಳು ಅಥವಾ ಕಷ್ಟಗಳನ್ನು ಎದುರಿಸುವಾಗ, ಆಟಗಾರನಾಗಿ ಹಾಗೂ ನಾಯಕನಾಗಿ ಅವುಗಳನ್ನು ಧನಾತ್ಮಕ ದೃಷ್ಟಿಯಿಂದ ನೋಡಲು ನಾನು ಪ್ರಯತ್ನಿಸುತ್ತೇನೆ” ಎಂದು ಅವರು ತಿಳಿಸಿದರು.

ಇದನ್ನು ಓದಿದ್ದೀರಾ? ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

2025ರ ಐಪಿಎಲ್‌ನಲ್ಲಿ ರಹಾನೆ 390 ರನ್ ಗಳಿಸುವ ಮೂಲಕ ಕೆಕೆಆರ್ ಪರ ಅತಿ ಹೆಚ್ಚು ರನ್ ಗಳಿಸಿದ ಆಟಗಾರನಾಗಿ ಹೊರಹೊಮ್ಮಿದ್ದರು. ಆದರೆ, ಕೆಕೆಆರ್ ಆಡಿದ 14 ಪಂದ್ಯಗಳಲ್ಲಿ ಕೇವಲ ಐದರಲ್ಲಿ ಮಾತ್ರ ಗೆಲುವು ಸಾಧಿಸಿತ್ತು (ಮಳೆಯಿಂದಾಗಿ ಎರಡು ಪಂದ್ಯಗಳು ರದ್ದಾಗಿದ್ದವು). ಇದು 2009ರ ಋತುವಿನ ಬಳಿಕ, ಅಂದರೆ ಕಳೆದ 16 ವರ್ಷಗಳಲ್ಲಿ ತಂಡದ ಅತ್ಯಂತ ಕಳಪೆ ಸಾಧನೆಯಾಗಿದೆ.

ಐಪಿಎಲ್ 2026ರ ಆರಂಭಕ್ಕೂ ಮುನ್ನವೇ ಕೆಕೆಆರ್ ತಂಡಕ್ಕೆ ಬೌಲಿಂಗ್ ವಿಭಾಗವು ದೊಡ್ಡ ತಲೆನೋವಾಗಿ ಪರಿಣಮಿಸಿದೆ. ತಂಡದ ಪ್ರಮುಖ ಭಾರತೀಯ ವೇಗಿ ಹರ್ಷಿತ್ ರಾಣಾ ಮಂಡಿ ನೋವಿನ ಕಾರಣದಿಂದ ಈ ಋತುವಿನಿಂದಲೇ ಹೊರಬಿದ್ದಿದ್ದಾರೆ.

​ಇದರ ಜೊತೆಗೆ, ಬರೋಬ್ಬರಿ 18 ಕೋಟಿ ರೂ. ನೀಡಿ ಖರೀದಿಸಲಾದ ಶ್ರೀಲಂಕಾದ ವೇಗಿ ಮತೀಶ ಪತಿರಾಣ, 2026ರ ಟಿ20 ವಿಶ್ವಕಪ್‌ ವೇಳೆ ಮಂಡಿರಜ್ಜು (ಹ್ಯಾಮ್‌ಸ್ಟ್ರಿಂಗ್) ಗಾಯಕ್ಕೆ ತುತ್ತಾಗಿದ್ದು, ಅವರಿನ್ನೂ ನಿರಾಕ್ಷೇಪಣಾ ಪ್ರಮಾಣಪತ್ರ ಪಡೆದಿಲ್ಲ. ಅತ್ತ, ಭಾರತ ಮತ್ತು ಬಾಂಗ್ಲಾದೇಶದ ನಡುವಿನ ರಾಜತಾಂತ್ರಿಕ ಉದ್ವಿಗ್ನತೆಯ ಹಿನ್ನೆಲೆಯಲ್ಲಿ ಬಿಸಿಸಿಐ ನಿರ್ದೇಶನದ ಮೇರೆಗೆ ಬಾಂಗ್ಲಾ ವೇಗಿ ಮುಸ್ತಾಫಿಜುರ್ ರೆಹಮಾನ್ ಅವರನ್ನು ಕೆಕೆಆರ್ ತಂಡದಿಂದ ಕೈಬಿಡಲಾಗಿದೆ.

2026ರ ಐಪಿಎಲ್‌ನಲ್ಲಿ ರಹಾನೆ ಯಾವ ಕ್ರಮಾಂಕದಲ್ಲಿ ಬ್ಯಾಟ್ ಮಾಡಲಿದ್ದಾರೆ ಎಂಬುದು ಕೂಡ ಕುತೂಹಲ ಕೆರಳಿಸಿದೆ. 2025ರ ಆವೃತ್ತಿಯಲ್ಲಿ ರಹಾನೆ ಹೆಚ್ಚಾಗಿ 3ನೇ ಕ್ರಮಾಂಕದಲ್ಲಿ ಆಡಿದ್ದರು. ಆದರೆ ಈ ಬಾರಿ ನ್ಯೂಜಿಲೆಂಡ್‌ನ ಫಿನ್ ಅಲೆನ್ ಅಥವಾ ಟಿಮ್ ಸೈಫರ್ಟ್ ಅವರ ಜೊತೆ ಇನಿಂಗ್ಸ್ ಆರಂಭಿಸುವ ಸಾಧ್ಯತೆಯೂ ದಟ್ಟವಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....