ಕೈಕೊಟ್ಟ ಬೌಲಿಂಗ್ | ತವರಲ್ಲಿ ಆರ್‌‌ಸಿಬಿಗೆ ಕೆಕೆಆರ್ ವಿರುದ್ಧ 7 ವಿಕೆಟ್‌ಗಳ ಸೋಲು

Date:

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್) 10ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ವಿರುದ್ಧ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡವು 7 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ.

ಆರ್‌ಸಿಬಿ ವಿರುದ್ಧದ ಈ ಗೆಲುವಿನೊಂದಿಗೆ ಕೆಕೆಆರ್ ತಂಡವು ಪ್ರಸಕ್ತ ಐಪಿಎಲ್ 2024ರಲ್ಲಿ ತವರಿನ ಹೊರಗೆ ಮೊದಲ ತಂಡ ಎನಿಸಿತು ಮತ್ತು ಈ ಪಂದ್ಯಾವಳಿಯಲ್ಲಿ ತನ್ನ ಎರಡನೇ ಗೆಲುವು ಕಂಡಿತು. ಇತ್ತ ಆರ್‌ಸಿಬಿ ಆಡಿದ ಮೂರು ಪಂದ್ಯಗಳಲ್ಲಿ ಎರಡು ಸೋಲು ಮತ್ತು ಒಂದು ಗೆಲುವು ಮಾತ್ರ ಪಡೆದಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ ತಂಡ ವಿರಾಟ್ ಕೊಹ್ಲಿ ಅವರ ಭರ್ಜರಿ ಅರ್ಧಶತಕದ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 182 ರನ್‌ ಗಳಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರ್‌ಸಿಬಿ ನೀಡಿದ್ದ 183 ರನ್‌ಗಳ ಸವಾಲಿನ ಗುರಿ ಬೆನ್ನಟ್ಟಿದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಸುನಿಲ್ ನರೈನ್ ಮತ್ತು ವೆಂಕಟೇಶ್ ಅಯ್ಯರ್ ಅವರ ಸ್ಫೋಟಕ ಬ್ಯಾಟಿಂಗ್‌ನ ನೆರವಿನಿಂದ 16.5 ಓವರ್‌ಗಳಲ್ಲಿ ಕೇವಲ 3 ವಿಕೆಟ್ ಕಳೆದುಕೊಂಡು ಗೆಲುವಿನ ಗುರಿ ತಲುಪಿತು.

ತೀರಾ ಕೆಟ್ಟ ಬೌಲಿಂಗ್ ಪ್ರದರ್ಶನ ನೀಡಿದ ಆರ್‌ಸಿಬಿ ತಂಡ ಆರಂಭದಿಂದಲೇ ರನ್‌ಗಳನ್ನು ಬಿಟ್ಟುಕೊಟ್ಟಿತು. ಕೆಕೆಆರ್ ತಂಡದ ಬ್ಯಾಟರ್‌ಗಳು ಆರ್‌ಸಿಬಿ ಬೌಲರ್‌ಗಳ ಮೇಲೆ ಸವಾರಿಗೈದರು.

ಕೆಕೆಆರ್ ಆರಂಭಿಕ ಬ್ಯಾಟರ್‌ಗಳಾದ ಸುನಿಲ್ ನರೈನ್ ಮತ್ತು ಫಿಲ್ ಸಾಲ್ಟ್ ಉತ್ತಮ ಆರಂಭ ನೀಡಿದರು ಮತ್ತು ಈ ಜೋಡಿ ಮೊದಲ ವಿಕೆಟ್‌ಗೆ 6.3 ಓವರ್‌ಗಳಲ್ಲಿ 86 ರನ್‌ಗಳ ಜೊತೆಯಾಟ ನಿರ್ಮಿಸಿತು. ಸುನಿಲ್ ನರೈನ್ 22 ಎಸೆತಗಳಲ್ಲಿ 2 ಬೌಂಡರಿ ಹಾಗೂ 5 ಸಿಕ್ಸರ್‌ಗಳ ಮೂಲಕ 47 ರನ್ ಬಾರಿಸಿದರೆ, ಫಿಲ್ ಸಾಲ್ಟ್ 20 ಎಸೆತಗಳಲ್ಲಿ 2 ಬೌಂಡರಿ ಹಾಗೂ 2 ಸಿಕ್ಸರ್ ಸಮೇತ 30 ರನ್ ಗಳಿಸಿದರು.

ನಂತರ ಬಂದ ವೆಂಕಟೇಶ್ ಅಯ್ಯರ್ ಆರ್‌ಸಿಬಿ ಬೌಲರ್‌ಗಳನ್ನು ದಂಡಿಸಿದರು. ಇವರು 30 ಎಸೆತಗಳಲ್ಲಿ 3 ಬೌಂಡರಿ ಹಾಗೂ 4 ಸಿಕ್ಸರ್‌ಗಳ ನೆರವಿನಿಂದ 50 ರನ್ ಬಾರಿಸಿದರು. ಶ್ರೇಯಸ್ ಅಯ್ಯರ್ 24 ಎಸೆತಗಳನ್ನು ಎದುರಿಸಿ 2 ಬೌಂಡರಿ ಮತ್ತು 2 ಸಿಕ್ಸರ್ ಮೂಲಕ ಅಜೇಯ 39 ರನ್ ಗಳಿಸಿದರೆ, ರಿಂಕು ಸಿಂಗ್ ಅಜೇಯ 5 ರನ್ ಗಳಿಸಿ ಕೆಕೆಆರ್ ಗೆಲುವಿಗೆ ನೆರವಾದರು. ಸುನಿಲ್ ನರೈನ್ ಪಂದ್ಯಶ್ರೇಷ್ಢ ಪ್ರಶಸ್ತಿಗೆ ಭಾಜನರಾದರು.

ಬೌಲಿಂಗ್‌ನಲ್ಲಿ ಆರ್‌ಸಿಬಿ ತಂಡದ ಪರ ವಿಜಯ್‌ಕುಮಾರ್ ವೈಶಾಕ್ 4 ಓವರ್‌ಗಳಲ್ಲಿ 23 ರನ್ ನೀಡಿ 1 ವಿಕೆಟ್ ಪಡೆದರೆ, ಯಶ್ ದಯಾಳ್ 4 ಓವರ್‌ಗಳಲ್ಲಿ 46 ರನ್ ನೀಡಿ 1 ವಿಕೆಟ್ ಪಡೆದರು. ಮಯಾಂಕ್ ಡಾಗರ್ 2.5 ಓವರ್‌ಗಳಲ್ಲಿ 23 ರನ್ ನೀಡಿ 1 ವಿಕೆಟ್ ತಮ್ಮದಾಗಿಸಿಕೊಂಡರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...