ಐಪಿಎಲ್ 2025 | ವಿಂಡೀಸ್‌ ಆಟಗಾರನ ದಾಖಲೆ ಸರಿಗಟ್ಟಿದ ಕನ್ನಡಿಗ ಕೆ ಎಲ್ ರಾಹುಲ್

Date:

ಐಪಿಎಲ್‌ 18ನೇ ಆವೃತ್ತಿಯ 17ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಚೆನ್ನೈ ಸೂಪರ್‌ ಕಿಂಗ್ಸ್‌ ವಿರುದ್ಧ ಭರ್ಜರಿ ಜಯಗಳಿಸಿದೆ. ಚೆನ್ನೈ ಕ್ರೀಡಾಂಗಣದಲ್ಲೇ ಅತಿಥೇಯ ತಂಡವನ್ನು ಸೋಲಿಸಿ ಪಾರಮ್ಯ ಮೆರೆದಿದೆ. ಈ ಪಂದ್ಯದಲ್ಲಿ ಡೆಲ್ಲಿಯ ಸ್ಫೋಟಕ ಅಟಗಾರ ಕನ್ನಡಿಗ ಕೆ ಎಲ್ ರಾಹುಲ್ ವಿಶೇಷ ದಾಖಲೆಯನ್ನು ಬರೆದರು.

ಎಂ ಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಅಕ್ಷರ್ ಪಟೇಲ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಕೆ ಎಲ್ ರಾಹುಲ್ ಉತ್ತಮ ಆರಂಭ ಒದಗಿಸಿದ್ದರು. ಬ್ಯಾಟಿಂಗ್​ಗೆ ಕಷ್ಟಕರವಾಗಿದ್ದ ಈ ಪಿಚ್​ನಲ್ಲಿ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದ ರಾಹುಲ್ 33 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಅಲ್ಲದೆ 51 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 6 ಬೌಂಡರಿಗಳೊಂದಿಗೆ 77 ರನ್ ಬಾರಿಸಿದರು. ಕೆ ಎಲ್ ರಾಹುಲ್​ ಅವರನ್ನು ಹೊರತುಪಡಿಸಿ ಡೆಲ್ಲಿ ಕ್ಯಾಪಿಟಲ್ಸ್ ಪರ ಯಾವುದೇ ಬ್ಯಾಟರ್​ 40 ರನ್​ಗಳ ಗಡಿದಾಟಿರಲಿಲ್ಲ.

ಈ ಸುದ್ದಿ ಓದಿದ್ದೀರಾ? ಗುವಾಹಟಿಯಲ್ಲಿ ಮೊದಲ ಅಂತಾರಾಷ್ಟ್ರೀಯ ಟೆಸ್ಟ್‌ ಪಂದ್ಯ ಆಯೋಜನೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೆ ಎಲ್ ರಾಹುಲ್ ಬಾರಿಸಿದ 77 ರನ್​ಗಳ ನೆರವಿನೊಂದಿಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡವು 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 183 ರನ್ ಕಲೆಹಾಕಿತು. 184 ರನ್​ಗಳ ಗುರಿಯನ್ನು ಬೆನ್ನಟ್ಟಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 158 ರನ್​ಗಳಿಸಲಷ್ಟೇ ಶಕ್ತರಾಗಿದ್ದಾರೆ. ಈ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ತಂಡ 25 ರನ್​ಗಳ ಜಯ ಸಾಧಿಸಿದೆ. ಈ ಪಂದ್ಯದಲ್ಲಿ 77 ರನ್ ಬಾರಿಸಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಬೃಹತ್ ಮೊತ್ತ ದಾಖಲಿಸುವಲ್ಲಿ ಪ್ರಮುಖ ಪಾತ್ರವಹಿಸಿದ ಕೆ ಎಲ್ ರಾಹುಲ್ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಇದರೊಂದಿಗೆ ಐಪಿಎಲ್ ಇತಿಹಾಸದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಅತೀ ಹೆಚ್ಚು ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಆಟಗಾರ ಎನಿಸಿಕೊಂಡರು. ಇದಕ್ಕೂ ಮುನ್ನ ಈ ದಾಖಲೆ ಮುಂಬೈ ಇಂಡಿಯನ್ಸ್ ತಂಡದ ಮಾಜಿ ಆಟಗಾರ ಕೀರನ್ ಪೊಲಾರ್ಡ್ ಹೆಸರಿನಲ್ಲಿತ್ತು. ಪೊಲಾರ್ಡ್ ಸಿಎಸ್​ಕೆ ವಿರುದ್ಧ ಒಟ್ಟು 4 ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದು ದಾಖಲೆ ನಿರ್ಮಿಸಿದ್ದರು. ಇದೀಗ ಈ ದಾಖಲೆಯನ್ನು ಕೆ ಎಲ್ ರಾಹುಲ್ ಸರಿಗಟ್ಟಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 15 ಇನಿಂಗ್ಸ್ ಆಡಿರುವ ರಾಹುಲ್ ಇದೀಗ 4ನೇ ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.

Kieron pollard
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...