ಲಖನೌ ತಂಡದಿಂದ ಕೆ ಎಲ್ ರಾಹುಲ್ ಬಿಡುಗಡೆ: ವಿಂಡೀಸ್‌ ಆಟಗಾರನಿಗೆ ಮಣೆ?

Date:

ಐಪಿಎಲ್‌ ಪ್ರವೇಶಿಸಿದ ಮೊದಲ ಎರಡು ಆವೃತ್ತಿಗಳಲ್ಲಿ ತಂಡವನ್ನು ಪ್ಲೇ ಆಫ್ಸ್‌ಗೆ ಕೊಂಡೊಯ್ದಿದ್ದ ನಾಯಕ ಕೆ ಎಲ್ ರಾಹುಲ್‌ ಅವರನ್ನು ಬಿಡುಗಡೆಗೊಳಿಸಲು ಲಖನೌ ಸೂಪರ್‌ ಜೈಂಟ್ಸ್‌ ಫ್ರಾಂಚೈಸಿ ನಿರ್ಧರಿಸಿದೆ ಎಂದು ವರದಿಗಳು ತಿಳಿಸಿವೆ.

ಕೆ ಎಲ್ ರಾಹುಲ್‌ ಅವರನ್ನು ತೆಗೆದು ಹಾಕಲು ಮುಂದಾಗಿರುವ ಫ್ರಾಂಚೈಸಿಯು ಸ್ಫೋಟಕ ಬ್ಯಾಟರ್‌ ನಿಕೋಲಸ್ ಪೂರನ್ , ವೇಗಿ ಮಯಾಂಕ್ ಯಾದವ್ ಮತ್ತು ಸ್ಪಿನ್ನರ್‌ ರವಿ ಬಿಷ್ಣೋಯಿ ಅವರನ್ನು ಉಳಿಸಿಕೊಳ್ಳಲು ನಿರ್ಧರಿಸಿದೆ. ಮುಂದಿನ ಆವೃತ್ತಿಯಲ್ಲಿ ಕನ್ನಡಿಗ ಕೆ.ಎಲ್‌ ರಾಹುಲ್‌ ಅವರು ಆರ್‌ಸಿಬಿ ಸೇರ್ಪಡೆಯಾಗಲಿದ್ದಾರೆ ಎಂಬ ವದಂತಿಗಳ ನಡುವೆ ಅವರನ್ನು ಫ್ರಾಂಚೈಸಿ‌ ಬಿಡುಗಡೆ ಮಾಡಿದೆ ಎಂದು ವರದಿಗಳು ಹೇಳಿವೆ.

29 ವರ್ಷದ ನಿಕೋಲಸ್‌ ಪೂರನ್‌ 2017ರ ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್‌ ತಂಡಕ್ಕೆ 30 ಲಕ್ಷಕ್ಕೆ ಬಿಕರಿಯಾಗಿದ್ದರು. ಆ ಬಳಿಕ 2019ರ ಹರಾಜಿನಲ್ಲಿ ಪಂಜಾಬ್‌ ಕಿಂಗ್ಸ್‌ ಅವರನ್ನ 4.2 ಕೋಟಿ ರೂ.ಗೆ ಖರೀದಿಸಿತ್ತು. ಆದರೆ 2022ರ ಮೆಗಾ ಹರಾಜಿನಲ್ಲಿ 10.72 ಕೋಟಿ ರೂ.ಗೆ ಪೂರನ್‌ ಅವರನ್ನು ಖರೀದಿ ಮಾಡಿದ್ದ ಸನ್‌ ರೈಸರ್ಸ್‌ ಹೈದರಾಬಾದ್‌ ಫ್ರಾಂಚೈಸಿ 2023ರಲ್ಲಿ ತಂಡದಿಂದ ಬಿಡುಗಡೆ ಮಾಡಿತು. ನಂತರ ಲಖನೌ ತಂಡ 16 ಕೋಟಿ ರೂ.ಗೆ ಪೂರನ್‌ ಅವರನ್ನು ಖರೀದಿ ಮಾಡಿತು. ಇದೀಗ ರಾಹುಲ್‌ ಅವರನ್ನು ಬಿಡುಗಡೆಗೊಳಿಸಿದ್ದು, ಪೂರನ್‌ ತಂಡದ ನಾಯಕನಾಗಲಿದ್ದಾರೆ ಎಂದು ತಿಳಿದುಬಂದಿದೆ. 2019 ರಿಂದ 2024ರ ವರೆಗೆ 76 ಪಂದ್ಯಗಳನ್ನಾಡಿರುವ ನಿಕೋಲಸ್‌ ಪೂರನ್‌, 1,769 ರನ್‌ ಗಳಿಸಿದ್ದಾರೆ. ಇದರಲ್ಲಿ 9 ಅರ್ಧಶತಕ, 113 ಬೌಂಡರಿ, 127 ಭರ್ಜರಿ ಸಿಕ್ಸರ್‌ಗಳೂ ಸೇರಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಚೆಂಡು ವಿರೂಪ ಪ್ರಕರಣ: ಡೇವಿಡ್ ವಾರ್ನರ್ ಮೇಲಿನ ನಿಷೇಧ ರದ್ದು

2025 ರಿಂದ 2027ರ ಐಪಿಎಲ್‌ ಆವೃತ್ತಿಗಳಿಗೆ ಹೊಸ ನಿಯಮ ಘೋಷಣೆ ಮಾಡಿರುವ ಬಿಸಿಸಿಐ, ನವೆಂಬರ್ 24 ಮತ್ತು 25 ರಂದು ಸೌದಿ ಅರೇಬಿಯಾದ ರಿಯಾದ್‌ನಲ್ಲಿ ಮೆಗಾ ಹರಾಜು ನಡೆಸಲು ತೀರ್ಮಾನಿಸಿದೆ. ಅದಕ್ಕಾಗಿ ಅಕ್ಟೋಬರ್‌ 31ರ ಸಂಜೆ 4.30 ಗಂಟೆಗೆ ಉಳಿಸಿಕೊಳ್ಳುವ ಆಟಗಾರರ ಪಟ್ಟಿ ಬಿಡುಗಡೆಯಾಗಲಿದೆ.

2022ರಲ್ಲಿ ಐಪಿಎಲ್‌ಗೆ ಪದಾರ್ಪಣೆ ಮಾಡಿದ ಲಖನೌ ಸೂಪರ್‌ ಜೈಂಟ್ಸ್‌ ತಂಡದ ನಾಯಕನಾಗಿದ್ದ ಕೆ.ಎಲ್‌ ರಾಹುಲ್‌ ಸತತ 2 ಬಾರಿ ತಂಡವನ್ನು ಪ್ಲೇ ಆಫ್‌ ಪ್ರವೇಶಿಸುವಂತೆ ಮಾಡಿದ್ದರು. ಆದರೆ ಈ ಬಾರಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡವನ್ನು ಸೇರಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿವೆ.

2024ರ ಐಪಿಎಲ್‌ ಆವೃತ್ತಿಯಲ್ಲಿ ಸನ್‌ ರೈಸರ್ಸ್‌ ಹೈದರಾಬಾದ್‌ ವಿರುದ್ಧದ ಪಂದ್ಯದಲ್ಲಿ ಲಖನೌ ಹೀನಾಯವಾಗಿ ಸೋತಿತ್ತು. ಈ ವೇಳೆ ಲಖನೌ ಫ್ರಾಂಚೈಸಿ ಮಾಲೀಕರಾದ ಸಂಜೀವ್‌ ಗೋಯೆಂಕಾ ರಾಹುಲ್‌ ವಿರುದ್ಧ ಮೈದಾನದಲ್ಲೇ ರೇಗಾಡಿದ್ದರು. ಈ ವಿಡಿಯೋ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಈ ಘಟನೆಯಿಂದ ರಾಹುಲ್‌, ಲಖನೌ ತಂಡದಲ್ಲಿ ಮುಂದುವರಿಯುವ ಆಸಕ್ತಿ ಕಳೆದುಕೊಂಡಿದ್ದು, ಮೆಗಾ ಹರಾಜಿಗೂ ಮುನ್ನ ರಾಹುಲ್‌ ಆರ್‌ಸಿಬಿ ತಂಡ ಸೇರಲಿದ್ದಾರೆ ಎಂದು ಹೇಳಲಾಗುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...