WPL | ಹರಾಜಿನಲ್ಲಿ ದೆಹಲಿ ಪಾಲಾದ ಅತ್ಯಂತ ಕಿರಿಯ ಆಟಗಾರ್ತಿ ದಿಯಾ ಯಾದವ್

Date:

ದಿಯಾ ಯಾದವ್ ಐಪಿಎಲ್‌ನಲ್ಲಿ ಹರಾಜಾದ ಅತ್ಯಂತ ಕಿರಿಯ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಮೂಲಕ ಹೊಸ ದಾಖಲೆಯನ್ನು ನಿರ್ಮಿಸಿದ್ದಾರೆ. ಹಾಗೆಯೇ 16 ವರ್ಷದ ದಿಯಾ ಜತೆ ಒಪ್ಪಂದ ಮಾಡಿಕೊಳ್ಳುವ ಮೂಲಕ ಡೆಲ್ಲಿ ಕ್ಯಾಪಿಟಲ್ಸ್‌ ಇತಿಹಾಸ ನಿರ್ಮಿಸಿದೆ.

ಮುಂಬರುವ ಮಹಿಳಾ ಪ್ರೀಮಿಯರ್ ಲೀಗ್‌ನ(WPL) ಮೆಗಾ ಹರಾಜು ಪ್ರಕ್ರಿಯೆ ನವೆಂಬರ್ 27ರಂದು ದೆಹಲಿಯಲ್ಲಿ ನಡೆದಿದೆ. ಈ ಹರಾಜಿನಲ್ಲಿ ಅತ್ಯಂತ ಕಿರಿಯ ಕ್ರಿಕೆಟ್ ಆಟಗಾರ್ತಿ ದಿಯಾ ಯಾದವ್ ಡೆಲ್ಲಿ ಕ್ಯಾಪಿಟಲ್ಸ್‌ ತಂಡದ ಪಾಲಾಗಿದ್ದಾರೆ. 16 ವರ್ಷದ ದಿಯಾ ಜತೆ ಒಪ್ಪಂದ ಮಾಡಿಕೊಳ್ಳುವ ಮೂಲಕ ಡೆಲ್ಲಿ ಇತಿಹಾಸ ನಿರ್ಮಿಸಿದೆ.

ಹರಿಯಾಣ ಮೂಲಕ ಉದಯೋನ್ಮುಖ ಆರಂಭಿಕ ಬ್ಯಾಟ್ಸ್‌ಮನ್ ದಿಯಾ ಯಾದವ್ ಇದೇ ಮೊದಲ ಬಾರಿಗೆ WPLನಲ್ಲಿ ಆಡಲಿದ್ದಾರೆ. ಐಪಿಎಲ್‌ನಲ್ಲಿ ಹರಾಜಾದ ಅತ್ಯಂತ ಕಿರಿಯ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಮೂಲಕ ಹೊಸ ದಾಖಲೆಯನ್ನು ನಿರ್ಮಿಸಿದ್ದಾರೆ. ಈ ಹಿಂದೆ ವೈಭವ್ ಸೂರ್ಯವಂಶಿ 13ನೇ ವಯಸ್ಸಿನಲ್ಲಿಯೇ ಇಂಡಿಯನ್ ಪ್ರೀಮಿಯರ್ ಲೀಗ್ (IPL)ನಲ್ಲಿ ಆಯ್ಕೆಯಾಗುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಇದೀಗ WPLನಲ್ಲಿ ದಿಯಾ ಇತಿಹಾಸ ಬರೆದಿದ್ದಾರೆ.

ಇದನ್ನು ಓದಿದ್ದೀರಾ? ಚುನಾವಣಾ ಫಲಿತಾಂಶದ ಭಯದಿಂದ ಬಿಜೆಪಿ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಪರಿಕಲ್ಪನೆ ಮುಂದಿಡುತ್ತಿದೆ: ಯೋಗೇಂದ್ರ ಯಾದವ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೆಹಲಿ ತಂಡವು ದಿಯಾ ಯಾದವ್ ಅವರನ್ನು 10 ಲಕ್ಷ ರೂಪಾಯಿ ಮೂಲ ಬೆಲೆಗೆ ಖರೀದಿಸಿದೆ. ದಿಯಾ ಅವರನ್ನು ತಂಡದ ಆರನೇ ಆಟಗಾರ್ತಿಯಾಗಿ ಆಯ್ಕೆ ಮಾಡಲಾಗಿದ್ದು, ಲಾರಾ ವೋಲ್ವಾರ್ಡ್ ಮತ್ತು ಸ್ನೇಹ ರಾಣಾ ಅವರಂತಹ ಅನುಭವಿ ಕ್ರಿಕೆಟಿಗರೊಂದಿಗೆ ದಿಯಾ ಸೇರಿಕೊಂಡಿದ್ದಾರೆ.

16 ವಯಸ್ಸಿನ ದಿಯಾ ಯಾದವ್ ಯಾರು?

ಹರಿಯಾಣದ ದೇಶೀಯ ತಂಡ ಮತ್ತು ಮಹಿಳಾ ಪ್ರೀಮಿಯರ್ ಲೀಗ್‌ನಲ್ಲಿ ದೆಹಲಿ ಕ್ಯಾಪಿಟಲ್ಸ್ (Delhi Capitals) ತಂಡವನ್ನು ಪ್ರತಿನಿಧಿಸುತ್ತಿರುವ ದಿಯಾ ಯಾದವ್ ತಮ್ಮ ಆಕ್ರಮಣಕಾರಿ ಆರಂಭಿಕ ಬ್ಯಾಟಿಂಗ್‌ಗೆ ಹೆಸರುವಾಸಿಯಾಗಿದ್ದಾರೆ.

15 ವರ್ಷದೊಳಗಿನವರ (U-15) ಪಂದ್ಯಾವಳಿಯು ದಿಯಾ ಅವರ ವೃತ್ತಿ ಜೀವನದ ಪ್ರಮುಖ ತಿರುವಾಗಿದೆ. ಚಿಕ್ಕ ವಯಸ್ಸಿನಲ್ಲಿಯೇ ದಿಯಾ ಅವರ ‘ಸ್ಟ್ರೋಕ್-ಪ್ಲೇಯಿಂಗ್’ ಮತ್ತು ‘ಪವರ್-ಹಿಟ್ಟಿಂಗ್’ ಅನೇಕ ಅನುಭವಿ ಬೌಲರ್‌ಗಳನ್ನು ದಂಗಾಗಿಸಿದೆ. ಕೇವಲ 14 ವರ್ಷ ವಯಸ್ಸಿನಲ್ಲಿಯೇ ದಿಯಾ ಮಹಿಳಾ ಅಂಡರ್-15 ಏಕದಿನ ಕಪ್‌ನಲ್ಲಿ ದೆಹಲಿ ವಿರುದ್ಧ ಅಜೇಯ 124 ರನ್ ಗಳಿಸುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.

ಇತ್ತೀಚೆಗೆ, ದಿಯಾ ಸೀನಿಯರ್ ಮಹಿಳಾ ಅಂತರ-ವಲಯ ಟಿ20 ಟ್ರೋಫಿಯಲ್ಲಿ ಉತ್ತರ ವಲಯದ ಪರ ಆಡಿದ್ದು ಐದು ಇನ್ನಿಂಗ್ಸ್‌ಗಳಲ್ಲಿ 151 ರನ್ ಗಳಿಸಿದರು. ಅವರ ಸರಾಸರಿ 30.20 ಮತ್ತು ಅವರ ಸ್ಟ್ರೈಕ್ ರೇಟ್ ಸುಮಾರು 150 ಆಗಿತ್ತು. ಹಾಗೆಯೇ ಈ ಟೂರ್ನಮೆಂಟ್‌ನಲ್ಲಿ ಅತ್ಯುತ್ತಮ ಸ್ಟ್ರೈಕ್ ರೇಟ್‌ ಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆದ ಅವರು, ಬೌಂಡರಿಗಳ ಸಂಖ್ಯೆಯಲ್ಲಿ ಎರಡನೇ ಸ್ಥಾನ ಪಡೆದರು. ತಮ್ಮ ಟಿ20 ವೃತ್ತಿಜೀವನದಲ್ಲಿ, ದಿಯಾ 19 ಇನ್ನಿಂಗ್ಸ್‌ಗಳಲ್ಲಿ ನಾಲ್ಕು ಅರ್ಧಶತಕಗಳು ಸೇರಿದಂತೆ ಸುಮಾರು 590 ರನ್ ಗಳಿಸಿದ್ದಾರೆ.

ಭಾರತದ ಆರಂಭಿಕ ಆಟಗಾರ್ತಿ ಶಫಾಲಿ ವರ್ಮಾ ಜತೆ ಹರಿಯಾಣ ತಂಡದಲ್ಲಿ ಆಡಿರುವ ದಿಯಾ, ತಂಡದ ನಾಯಕಿ ಶಫಾಲಿ ವರ್ಮಾ ಅವರಿಂದಲೇ ಆಕ್ರಮಣಕಾರಿ ಆಟದ ಶೈಲಿಯನ್ನು ಕಲಿತಿರುವುದಾಗಿ ಈ ಹಿಂದೆ ಹೇಳಿಕೊಂಡಿದ್ದಾರೆ.

ಶಫಾಲಿ ತಮ್ಮ ‘ರೋಲ್ ಮಾಡೆಲ್’ ಎಂದು ಪರಿಗಣಿಸುವ ದಿಯಾ ಅವರು, “ಶಫಾಲಿ ಅವರ ಬ್ಯಾಟಿಂಗ್ ಶೈಲಿ ಮತ್ತು ಒತ್ತಡದ ಪರಿಸ್ಥಿತಿಗಳನ್ನು ನಿಭಾಯಿಸುವ ಸಾಮರ್ಥ್ಯ ನನಗೆ ಸ್ಫೂರ್ತಿಯಾಗಿದೆ” ಎಂದಿದ್ದಾರೆ. ಇದೀಗ ಮಹಿಳಾ ಪ್ರೀಮಿಯರ್ ಲೀಗ್‌ನಲ್ಲಿಯೂ ಶಫಾಲಿ, ದಿಯಾ ಒಂದೇ ತಂಡದಲ್ಲಿ ಆಡಲಿದ್ದಾರೆ.

WhatsApp Image 2025 11 17 at 4.20.34 PM
+ posts

ಪತ್ರಕರ್ತೆ, 2019ರಿಂದ ಪತ್ರಿಕೋದ್ಯಮವೇ ಬದುಕು. ರಾಜಕೀಯ, ಬ್ಯುಜಿನೆಸ್‌ ಸುದ್ದಿಗಳಲ್ಲಿ ಆಸಕ್ತಿ.

ಪೋಸ್ಟ್ ಹಂಚಿಕೊಳ್ಳಿ:

ಮಯೂರಿ ಬೋಳಾರ್
ಮಯೂರಿ ಬೋಳಾರ್
ಪತ್ರಕರ್ತೆ, 2019ರಿಂದ ಪತ್ರಿಕೋದ್ಯಮವೇ ಬದುಕು. ರಾಜಕೀಯ, ಬ್ಯುಜಿನೆಸ್‌ ಸುದ್ದಿಗಳಲ್ಲಿ ಆಸಕ್ತಿ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಮಾನತುಗೊಂಡಿದ್ದ ಇನ್‌ಸ್ಪೆಕ್ಟರ್ ಸಂದೇಶ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು

ಈ ಹಿಂದೆ ಇಬ್ಬರು ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಅಮಾನತುಗೊಂಡಿದ್ದ...

​‘ಮುಂದಿನ ದಿನಗಳಲ್ಲಿ ಸವಾಲು ಇನ್ನಷ್ಟು ಕಠಿಣವಾಗಲಿದೆ’: ವಿರಾಟ್ ಕೊಹ್ಲಿ ಸಂದೇಶ ಯಾರಿಗೆ?

ಐಪಿಎಲ್ 2026ರ ಆವೃತ್ತಿಯು ಮಾರ್ಚ್ 28 ರಂದು ಆರಂಭವಾಗಲಿದ್ದು, ಉದ್ಘಾಟನಾ ಪಂದ್ಯದಲ್ಲಿ...

ಐಪಿಎಲ್ | 16 ವರ್ಷಗಳಲ್ಲೇ ಕಳಪೆ ಸಾಧನೆ: ಮೌನ ಮುರಿದ ಕೆಕೆಆರ್ ನಾಯಕ

2025ರ ಆವೃತ್ತಿಯಲ್ಲಿ ಅತ್ಯಂತ ಕಳಪೆ ಪ್ರದರ್ಶನ ನೀಡಿದ್ದ ಕೋಲ್ಕತ್ತಾ ನೈಟ್‌ ರೈಡರ್ಸ್...

‘ಪತ್ನಿ ಕೆಲಸದಾಳಲ್ಲ, ಗಂಡನೂ ಮನೆಗೆಲಸಗಳಲ್ಲಿ ನೆರವಾಗಬೇಕು’ – ಸುಪ್ರೀಂ ಕೋರ್ಟ್‌

ಪತ್ನಿ ಅಡುಗೆ, ಇತ್ಯಾದಿ ಮನೆಗೆಲಸಗಳನ್ನು ಸರಿಯಾಗಿ ಮಾಡುತ್ತಿಲ್ಲ. ಇದು ಕ್ರೌರ್ಯ ಎಂದು...