ಐಪಿಎಲ್ | ಕೆಕೆಆರ್ ವಿರುದ್ಧದ ಉದ್ಘಾಟನಾ ಪಂದ್ಯದಲ್ಲಿ ವಿಶಿಷ್ಟ ಸಾಧನೆಗೈದ ವಿರಾಟ್ ಕೊಹ್ಲಿ

Date:

ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್‌ಸಿಬಿ) ತಂಡದ ಸ್ಟಾರ್ ಆಟಗಾರ, ಕಿಂಗ್ ಎಂದೇ ಖ್ಯಾತಿ ಪಡೆದಿರುವ ವಿರಾಟ್ ಕೊಹ್ಲಿ ಐಪಿಎಲ್ 2025ರ ಉದ್ಘಾಟನಾ ಪಂದ್ಯದಲ್ಲೇ ದಾಖಲೆ ನಿರ್ಮಿಸುವ ಮೂಲಕ ಸುದ್ದಿಯಾಗಿದ್ದಾರೆ.

ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಕೆಕೆಆರ್ ವಿರುದ್ಧ ಶನಿವಾರ ನಡೆದ ಉದ್ಘಾಟನಾ ಪಂದ್ಯದಲ್ಲಿ ಕೆಕೆಆರ್ ತಂಡದ ವಿರುದ್ಧ 1,000 ರನ್ ಗಡಿ ದಾಟಿದ್ದಾರೆ. ಪಂದ್ಯದಲ್ಲಿ ಕೊಹ್ಲಿ 38 ರನ್ ಗಳಿಸುವುದರೊಂದಿಗೆ ಈ ದಾಖಲೆಯನ್ನು ನಿರ್ಮಿಸಿದ್ದಾರೆ.

ಈವರೆಗಿನ ಐಪಿಎಲ್ ಟೂರ್ನಿಯ ಇತಿಹಾಸದಲ್ಲಿ ಯಾವುದೇ ಬ್ಯಾಟ್ಸ್‌ಮನ್ ಎರಡಕ್ಕಿಂತ ಹೆಚ್ಚು ತಂಡಗಳ ವಿರುದ್ಧ 1,000ಕ್ಕೂ ಹೆಚ್ಚು ರನ್ ಗಳಿಸಿಲ್ಲ. ವಿರಾಟ್ ಕೊಹ್ಲಿ ಮಾತ್ರ ಕೆಕೆಆರ್ ವಿರುದ್ಧ ಈ ಸಾಧನೆ ಮಾಡಿ, ಒಟ್ಟು 4 ತಂಡಗಳ ವಿರುದ್ಧ 1000ಕ್ಕೂ ಹೆಚ್ಚು ರನ್ ಗಳಿಸಿದ ಸಾಧನೆ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೊಹ್ಲಿ ಈಗಾಗಲೇ ಡೆಲ್ಲಿ ಕ್ಯಾಪಿಟಲ್ಸ್, ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಪಂಜಾಬ್ ಕಿಂಗ್ಸ್ ವಿರುದ್ಧ 1,000 ಅಥವಾ ಅದಕ್ಕಿಂತ ಹೆಚ್ಚು ರನ್ ಗಳಿಸಿದ್ದಾರೆ. ಇದೀಗ ಕೆಕೆಆರ್ ಸೇರಿ ನಾಲ್ಕು ತಂಡಗಳ ವಿರುದ್ಧ ಈ ಸಾಧನೆ ತಲುಪಿದ್ದಾರೆ. ಒಟ್ಟಾರೆಯಾಗಿ ವಿರಾಟ್ ಕೊಹ್ಲಿ, ತಮ್ಮ 400ನೇ ಟಿ20 ಪಂದ್ಯದಲ್ಲಿ ಈ ಕೀರ್ತಿಯನ್ನು ಗಳಿಸಿದ್ದಾರೆ.

ಈ ಪಂದ್ಯಕ್ಕೂ ಮುನ್ನ ಕೆಕೆಆರ್ ವಿರುದ್ಧ ಕೊಹ್ಲಿ 31 ಇನ್ನಿಂಗ್ಸ್‌ಗಳಿಂದ 38.48 ಸರಾಸರಿಯಲ್ಲಿ 962 ರನ್ ಗಳಿಸಿದ್ದರು. ಇದರಲ್ಲಿ ಒಂದು ಶತಕ ಮತ್ತು ಆರು ಅರ್ಧಶತಕಗಳು ಸೇರಿದ್ದವು. ಶನಿವಾರ ನಡೆದ ಪಂದ್ಯದ 38 ರನ್ ಗಳಿಸುವ ಮೂಲಕ 1000 ರನ್ ಗಡಿ ದಾಟಿದ್ದಾರೆ. ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮಾಡಿದ್ದ ಕಿಂಗ್ ಕೊಹ್ಲಿ, ಆಕರ್ಷಕ ಅರ್ಧಶತಕ ಗಳಿಸುವ ಮೂಲಕ ಮಿಂಚಿದ್ದರು. ಪಂದ್ಯದಲ್ಲಿ ವಿರಾಟ್ 36 ಎಸೆತಗಳಲ್ಲಿ 59 ರನ್ ಬಾರಿಸಿ, ಅಜೇಯರಾಗಿ ಉಳಿದರು. ಇದರಲ್ಲಿ 4 ಬೌಂಡರಿ ಹಾಗೂ 3 ಸ್ಫೋಟಕ ಸಿಕ್ಸರ್‌ಗಳಿದ್ದವು.

36 ವರ್ಷದ ಕೊಹ್ಲಿ, ವಾರ್ನರ್, ರೋಹಿತ್ ಮತ್ತು ಸುರೇಶ್ ರೈನಾ ನಂತರ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಅತಿ ಹೆಚ್ಚು ರನ್ ಗಳಿಸಿದ ನಾಲ್ಕನೇ ಆಟಗಾರನಾಗಿದ್ದಾರೆ. ಆರಂಭಿಕ ಪಂದ್ಯದಲ್ಲೇ ಈ ಮೈಲಿಗಲ್ಲು ತಲುಪುವ ಮೂಲಕ ವಿರಾಟ್ ಕೊಹ್ಲಿ ಈ ಬಾರಿಯ ಸೀಸನ್‌ನಲ್ಲಿ ಮತ್ತೊಮ್ಮೆ ಮಿಂಚಲು ತಯಾರಾಗಿದ್ದಾರೆ. ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ 8,004 ರನ್ (252 ಪಂದ್ಯ) ಗಳಿಸುವ ಮೂಲಕ, ಇತಿಹಾಸದಲ್ಲಿ ಇದುವರೆಗೆ ಅತಿಹೆಚ್ಚು ರನ್ ಗಳಿಸಿದ ಆಟಗಾರ ಎನ್ನುವ ಖ್ಯಾತಿಯನ್ನೂ ಕೂಡ ಪಡೆದುಕೊಂಡಿದ್ದಾರೆ.

ಕೆಕೆಆರ್ ವಿರುದ್ಧ 28 ಇನ್ನಿಂಗ್ಸ್‌ಗಳಲ್ಲಿ 43.72ರ ಸರಾಸರಿಯಲ್ಲಿ 1,093 ರನ್ ಗಳಿಸಿರುವ ಡೇವಿಡ್ ವಾರ್ನರ್ ಅಗ್ರಸ್ಥಾನದಲ್ಲಿದ್ದಾರೆ. ವಾರ್ನರ್ ಎರಡು ಶತಕ ಮತ್ತು ಆರು ಅರ್ಧಶತಕಗಳನ್ನು ಸಿಡಿಸಿದ್ದಾರೆ.

ಡೇವಿಡ್ ವಾರ್ನರ್ ಕೆಕೆಆರ್ ಜೊತೆಗೆ ಪಂಜಾಬ್ ಕಿಂಗ್ಸ್ ವಿರುದ್ಧ ಈ ಸಾಧನೆ ಮಾಡಿದ್ದಾರೆ. ರೋಹಿತ್ ಶರ್ಮಾ ಕೆಕೆಆರ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಈ ಸಾಧನೆ ಮಾಡಿದ್ದಾರೆ.

ಮುಂಬೈ ಇಂಡಿಯನ್ಸ್ ತಂಡದ ರೋಹಿತ್ ಶರ್ಮಾ 34 ಇನ್ನಿಂಗ್ಸ್‌ಗಳಿಂದ 39.62ರ ಸರಾಸರಿಯಲ್ಲಿ 1,070 ರನ್ ಗಳಿಸಿದ್ದಾರೆ. ಇದರಲ್ಲಿ ಒಂದು ಶತಕ ಮತ್ತು ಆರು ಅರ್ಧಶತಕಗಳು ಸೇರಿವೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...