ಐಪಿಎಲ್ | ತವರಲ್ಲೇ ಬೃಹತ್ ಗುರಿ ಬೆನ್ನಟ್ಟಲು ಲಕ್ನೋ ವಿಫಲ: ಕೆಕೆಆರ್‌ಗೆ ಭರ್ಜರಿ ಜಯ

Date:

ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಏಕನಾ ಸ್ಟೇಡಿಯಂನಲ್ಲಿ ಇಂದು ನಡೆದ ಐಪಿಎಲ್‌ನ 54ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವು ತವರಲ್ಲೇ ಮುಗ್ಗರಿಸಿದ್ದು, ಕೆಕೆಆರ್ ವಿರುದ್ಧ ಹೀನಾಯ ಸೋಲು ಅನುಭವಿಸಿದೆ.

ಮೊದಲು ಬ್ಯಾಟಿಂಗ್ ಮಾಡಿದ್ದ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡ, ಸುನಿಲ್ ನರೇನ್ ಅವರ ಸ್ಫೋಟಕ ಅರ್ಧಶತಕದ ನೆರವಿನಿಂದ 6 ವಿಕೆಟ್ ಕಳೆದುಕೊಂಡು 236 ರನ್‌ಗಳ ಬೃಹತ್ ಗುರಿ‌ ನೀಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಗುರಿಯನ್ನು ಬೆನ್ನಟ್ಟುವಲ್ಲಿ ವಿಫಲವಾದ ಕನ್ನಡಿಗ ಕೆ ಎಲ್ ರಾಹುಲ್‌ ನೇತೃತ್ವದ ಲಕ್ನೋ ತಂಡವು, 16.1 ಓವರ್‌ಗಳಲ್ಲಿ ಕೇವಲ 138 ರನ್‌ಗಳು ಗಳಿಸುವಷ್ಟರಲ್ಲೇ ಆಲೌಟ್ ಆಯಿತು. ಆ ಮೂಲಕ 98 ರನ್‌ಗಳಿಂದ ಹೀನಾಯವಾಗಿ ಸೋಲು ಕಂಡಿತು.

ಬ್ಯಾಟಿಂಗ್‌ನಲ್ಲಿ ಲಕ್ನೋ ಪರ ಮಾರ್ಕ್ ಸ್ಟೋಯ್ನಿಸ್ 36 ಹಾಗೂ ನಾಯಕ ಕೆ ಎಲ್ ರಾಹುಲ್‌ 25 ರನ್ ಗಳಿಸಿದ್ದು ಬಿಟ್ಟರೆ, ಬೇರೆ ಯಾವ ಬ್ಯಾಟರ್‌ಗಳು ಕೆಕೆಆರ್ ಬೌಲಿಂಗ್ ದಾಳಿಯನ್ನು ಮೆಟ್ಟಿ, ರನ್ ಗಳಿಸಲು ಪರದಾಡಿದರು.

ಅರ್ಶಿನ್ ಕುಲಕರ್ಣಿ 9, ದೀಪಕ್ ಹೂಡಾ 5, ನಿಕೊಲಸ್ ಪೂರನ್ 10, ಆಯುಷ್ ಬದೌನಿ 15, ಟರ್ನರ್ 16, ಕೃನಾಲ್ ಪಾಂಡ್ಯಾ 5 ರನ್ ಗಳಿಸಿ, ವಿಕೆಟ್ ಒಪ್ಪಿಸಿದರು.

ಕೆಕೆಆರ್ ತಂಡದ ಪರವಾಗಿ ಮಾರಕ ಬೌಲಿಂಗ್‌ ದಾಳಿ ನಡೆಸಿದ ವರಣ್ ಚಕ್ರವರ್ತಿ ಹಾಗೂ ಹರ್ಷಿತ್ ರಾಣಾ ತಲಾ ಮೂರು ವಿಕೆಟ್, ಆ್ಯಂಡ್ರೆ ರಸ್ಸೆಲ್ 2 ವಿಕೆಟ್ ಗಳಿಸಿದರು. ಸುನಿಲ್ ನರೇನ್ ಹಾಗೂ ಮಿಚೆಲ್ ಸ್ಟಾರ್ಕ್ ತಲಾ ಒಂದೊಂದು ವಿಕೆಟ್ ಪಡೆಯುವಲ್ಲಿ ಸಫಲರಾದರು.

ಲಕ್ನೋ ವಿರುದ್ಧದ ಇಂದಿನ ಗೆಲುವಿನೊಂದಿಗೆ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೆ ಜಿಗಿದಿದೆ. ಕೆಕೆಆರ್ ಒಟ್ಟು 11 ಪಂದ್ಯದಲ್ಲಿ ಎಂಟು ಗೆಲುವು ಹಾಗೂ ಮೂರು ಸೋಲಿನೊಂದಿಗೆ ಒಟ್ಟು ಸರಾಸರಿ 1.45 ನೆಟ್ ರನ್‌ರೇಟ್ ಗಳಿಸಿದೆ. ಆ ಮೂಲಕ ರಾಜಸ್ಥಾನ ತಂಡವನ್ನು ಹಿಂದಿಕ್ಕಿ, ಮೊದಲ ಸ್ಥಾನಕ್ಕೆ ಲಗ್ಗೆ ಇಟ್ಟಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...