ಕೆ‌ಎಸ್‌ಸಿಎ ಚುನಾವಣೆ; ನಿವೃತ್ತ ನ್ಯಾ. ಸುಭಾಷ್‌ ಅಡಿ ಮೇಲ್ವಿಚಾರಣೆಯಲ್ಲಿ ಡಿ.7ರಂದು ಚುನಾವಣೆ ನಡೆಸಲು ಹೈಕೋರ್ಟ್ ಆದೇಶ

Date:

ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಗೆ (ಕೆಎಸ್‌ಸಿಎ) ಡಿಸೆಂಬರ್ 7ರಂದು ಚುನಾವಣೆ ನಡೆಸುವಂತೆ ಚುನಾವಣಾಧಿಕಾರಿಗೆ ನಿರ್ದೇಶಿಸಿರುವ ಹೈಕೋರ್ಟ್, ನಿವೃತ್ತ ನ್ಯಾಯಮೂರ್ತಿ ಹಾಗೂ ಮಾಜಿ ಉಪಲೋಕಾಯುಕ್ತ ಸುಭಾಷ್ ಬಿ. ಅಡಿ ಅವರನ್ನು ಚುನಾವಣಾ ಮೇಲ್ವಿಚಾರಕರನ್ನಾಗಿ ನೇಮಕ ಮಾಡಿದೆ.

ಕೆಎಸ್‌ಸಿಎ ವ್ಯವಸ್ಥಾಪನಾ ಸಮಿತಿಗೆ ನವೆಂಬರ್ 30ರಂದು ನಿಗದಿಯಾಗಿದ್ದ ಚುನಾವಣೆಯನ್ನು ಕೆಲವೊಂದು ಗೊಂದಲಗಳ ಹಿನ್ನೆಲೆಯಲ್ಲಿ ಡಿಸೆಂಬರ್ 30ರವರೆಗೆ ಮುಂದೂಡಿದ್ದ ಚುನಾವಣಾಧಿಕಾರಿಗಳ ಕ್ರಮ ಪ್ರಶ್ನಿಸಿ ಕೆಎಸ್‌ಸಿಎ ಮತ್ತು ಬಿ.ಕೆ. ರವಿ ಎಂಬವರು ಸಲ್ಲಿಸಿದ್ದ ಅರ್ಜಿಗಳನ್ನು ಶುಕ್ರವಾರ ಇತ್ಯರ್ಥಪಡಿಸಿದ ನ್ಯಾಯಮೂರ್ತಿ ಸೂರಜ್‌ ಗೋವಿಂದರಾಜ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ಮಾಡಿತು.

ಇದನ್ನು ಓದಿದ್ದೀರಾ? ಎಲ್ಲ 12 ದೇಶಗಳ ವಿರುದ್ಧವೂ ಶತಕ ಗಳಿಸಿ ವಿಶ್ವ ದಾಖಲೆ ನಿರ್ಮಿಸಿದ ವಿಂಡೀಸ್ ಬ್ಯಾಟರ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚುನಾವಣೆಯನ್ನು ಮುಂದೂಡಿ ನವೆಂಬರ್ 17ರಂದು ಚುನಾವಣಾಧಿಕಾರಿ ಹೊರಡಿಸಿದ್ದ ನೋಟಿಸ್‌ ರದ್ದುಪಡಿಸಲಾಗಿದೆ. ಕೆಎಸ್‌ಸಿಎ ಬೈಲಾ ಕುರಿತ ಯಾವುದೇ ವ್ಯಾಖ್ಯಾನದ ಪ್ರಭಾವಕ್ಕೆ ಒಳಗಾಗದೇ ಚುನಾವಣಾಧಿಕಾರಿ ಹಾಲಿ ಬೈಲಾ ಪ್ರಕಾರ ನ್ಯಾಯಯುತ ಮತ್ತು ಪಾರದರ್ಶಕವಾಗಿ ಚುನಾವಣೆ ನಡೆಸಬೇಕು. ಡಿಸೆಂಬರ್‌ 7ರಂದು ಬೆಳಗ್ಗೆ 11ರಿಂದ ಸಂಜೆ 7 ಗಂಟೆಯವರೆಗೆ ಮತದಾನವಾಗಬೇಕು. ಆನಂತರ, ಫಲಿತಾಂಶ ಪ್ರಕಟಿಸಬೇಕು. ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಸುಭಾಷ್‌ ಬಿ. ಅಡಿ ಅವರನ್ನು ಚುನಾವಣೆಯ ಉಸ್ತುವಾರಿ ವಹಿಸಲು ಮನವಿ ಮಾಡಲಾಗಿದೆ ಎಂದು ನ್ಯಾಯಾಲಯ ಆದೇಶಿಸಿತು.

ಈಗಾಗಲೇ ನಾಮಪತ್ರ ಸ್ವೀಕಾರವಾಗಿದ್ದು, ನವೆಂಬರ್ 24ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಅಂದು ಸಂಜೆ 6 ಗಂಟೆಯೊಳಗೆ ಅರ್ಹ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಬೇಕು. ನವೆಂಬರ್‌ 26ರಂದು ನಾಮಪತ್ರ ಹಿಂಪಡೆಯಲು ಕಾಲಾವಕಾಶ ನೀಡಬೇಕು. ಕಣದಲ್ಲಿರುವ ಅಭ್ಯರ್ಥಿಗಳ ಪಟ್ಟಿಯನ್ನು ನವೆಂಬರ್‌ 26ರಂದು ಪ್ರಕಟಿಸಬೇಕು ಎಂದು ನಿರ್ದೇಶಿಸಿದ ನ್ಯಾಯಪೀಠ, ಅರ್ಜಿಗಳನ್ನು ಇತ್ಯರ್ಥಪಡಿಸಿತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...