ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್; ಟೂರ್ನಿಯ ವೇಳಾಪಟ್ಟಿ ಬಿಡುಗಡೆ

Date:

ಲಾಸ್ ಏಂಜಲೀಸ್​ನಲ್ಲಿ ನಡೆಯಲಿರುವ 2028ರ ಒಲಿಂಪಿಕ್ಸ್‌ ಕ್ರೀಡಾಕೂಟದಲ್ಲಿ ಕ್ರಿಕೆಟ್​ ಅನ್ನು ಸೇರ್ಪಡೆಗೊಳಿಸಲಾಗಿದೆ. ಒಲಂಪಿಕ್ಸ್‌ ಕ್ರೀಡಾಕೂಟದಲ್ಲಿ ಟಿ20 ಕ್ರಿಕೆಟ್‌ನ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಕ್ರಿಕೆಟ್‌ ಜುಲೈ 12 ರಿಂದ ಶುರುವಾಗಲಿದ್ದು, ಫೈನಲ್ ಪಂದ್ಯವು ಜುಲೈ 29 ರಂದು ನಡೆಯಲಿದೆ. ಕ್ಯಾಲಿಫೋರ್ನಿಯಾದ ಪೊಮೊನಾದಲ್ಲಿರುವ ಫೇರ್‌ಗ್ರೌಂಡ್ಸ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ಪಂದ್ಯಾವಳಿಯನ್ನು ಆಯೋಜಿಸಲು ನಿರ್ಧರಿಸಲಾಗಿದೆ.

ಮೊದಲ ಹಂತದ ಕ್ರಿಕೆಟ್ ಪಂದ್ಯಗಳು ಜುಲೈ 12 ರಿಂದ 18 ರವರೆಗೆ ನಡೆಯಲಿದ್ದು, ಇದಾದ ನಂತರ ಜುಲೈ 22 ರಿಂದ 28 ರವರೆಗೆ ಎರಡನೇ ಹಂತದ ಪಂದ್ಯಗಳು ನಡೆಯಲಿದೆ. ಇನ್ನು ಅಂತಿಮ ಪಂದ್ಯವು ಜುಲೈ 29 ರಂದು ಫೇರ್‌ಗ್ರೌಂಡ್ಸ್ ಕ್ರಿಕೆಟ್ ಕ್ರೀಡಾಂಗಣವು ಜರುಗಲಿದೆ.

ಒಲಿಂಪಿಕ್ಸ್​ ಕ್ರೀಡಾಕೂಟದಲ್ಲಿ ಕ್ರಿಕೆಟ್ ಅನ್ನು ಟಿ20 ಮಾದರಿಯಲ್ಲಿ ಆಯೋಜಿಸಲಾಗುತ್ತದೆ. ಹೀಗಾಗಿ ಐಸಿಸಿ ಟಿ20 ತಂಡಗಳ ಶ್ರೇಯಾಂಕಗಳ ಆಧಾರದ ಮೇಲೆ ತಂಡಗಳು ಅರ್ಹತೆ ಪಡೆಯಲಿವೆ. ಅಂದರೆ ಒಲಿಂಪಿಕ್ಸ್​ ಅರ್ಹತೆಗೆ ನಿಗದಿ ಮಾಡಲಾದ ಸಮಯದ ವೇಳೆ ಐಸಿಸಿ ತಂಡಗಳ ಶ್ರೇಯಾಂಕವನ್ನು ಪರಿಗಣಿಸಿ 6 ತಂಡಗಳನ್ನು ಆಯ್ಕೆ ಮಾಡಲಾಗುತ್ತದೆ ಎಂದು ತಿಳಿದು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ವಿಜೃಂಭಣೆಯ ಹೊಸ್ತಿಲಲ್ಲಿ ಟೆಸ್ಟ್‌ ಕ್ರಿಕೆಟ್: ಮತ್ತೆ ಮರುಕಳಿಸಲಿರುವ ಇತಿಹಾಸ

1900 ರಲ್ಲಿ ನಡೆದ ಬೇಸಿಗೆ ಒಲಿಂಪಿಕ್ಸ್‌ನಲ್ಲಿ ಒಮ್ಮೆ ಕ್ರಿಕೆಟ್ ಆಡಲಾಗಿತ್ತು. 128 ವರ್ಷಗಳ ಹಿಂದೆ ನಡೆದ ಈ ಪಂದ್ಯದಲ್ಲಿ ಗ್ರೇಟ್ ಬ್ರಿಟನ್ ಮತ್ತು ಫ್ರಾನ್ಸ್ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಫ್ರಾನ್ಸ್ ತಂಡವನ್ನು 185 ರನ್‌ಗಳಿಂದ ಸೋಲಿಸಿದ ಗ್ರೇಟ್ ಬ್ರಿಟನ್ ಚಿನ್ನದ ಪದಕ ಗೆದ್ದುಕೊಂಡಿತ್ತು. ಇದೀಗ 128 ವರ್ಷಗಳ ಬಳಿಕ ಮತ್ತೊಮ್ಮೆ ಒಲಿಂಪಿಕ್ಸ್​ನಲ್ಲಿ ಕ್ರಿಕೆಟ್ ಆಟಕ್ಕೆ ಅವಕಾಶ ದೊರೆಯುತ್ತಿದೆ.

ಇಂಗ್ಲೆಂಡ್‌ನ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆದ 22ನೇ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಮಹಿಳಾ ಕ್ರಿಕೆಟ್​ನ್ನು ಸೇರಿಸಲಾಗಿತ್ತು. ಈ ಆಟದಲ್ಲಿ ಆಸ್ಟ್ರೇಲಿಯಾ ತಂಡ ಚಿನ್ನದ ಪದಕ ಗೆದ್ದರೆ, ಭಾರತ ತಂಡ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಂಡಿತ್ತು. ಇದೀಗ ಒಲಿಂಪಿಕ್ಸ್​ ಅಂಗಳಕ್ಕೆ ಕ್ರಿಕೆಟ್ ಕಾಲಿಡುತ್ತಿರುವುದರಿಂದ ಭಾರತವು ಚಿನ್ನದ ಪದಕ ಗೆಲ್ಲುವ ನಿರೀಕ್ಷೆಯಿದೆ.

ಟೂರ್ನಿನಲ್ಲಿ ಒಟ್ಟು 6 ತಂಡಗಳು ಭಾಗವಹಿಸಲಿದ್ದು, ಆತಿಥ್ಯವಹಿಸಲಿರುವ ಅಮೆರಿಕ ತಂಡ ನೇರವಾಗಿ ಪ್ರವೇಶ ಪಡೆದರೆ, ಐಸಿಸಿ ಸದಸ್ಯತ್ವ ರಾಷ್ಟ್ರಗಳು ಅರ್ಹತಾ ಸುತ್ತಿನಲ್ಲಿ ಸ್ಪರ್ಧೆ ನಡೆಸಿ ಉಳಿದ 5 ತಂಡಗಳು ಭಾಗವಹಿಸಬೇಕಾಗುತ್ತದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...