ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

Date:

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ ಕರೆ ತರಲಾಗುವುದು ಎಂದು ಭಾರಿ ಪ್ರಚಾರ ನೀಡಿದ್ದ ಸಿಪಿಐ(ಎಂ) ನೇತೃತ್ವದ ಕೇರಳ ಸರ್ಕಾರಕ್ಕೆ ಭಾರಿ ಹಿನ್ನಡೆಯಾಗಿದ್ದು, ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ ತನ್ನ ಕೇರಳ ಭೇಟಿಯನ್ನು ರದ್ದುಗೊಳಿಸಿದೆ ಎಂದು ವರದಿಯಾಗಿದೆ.

ಆ ಮೂಲಕ, ವಿಶ್ವ ಚಾಂಪಿಯನ್ನರನ್ನು ಕರೆತರುವ ಪ್ರಯತ್ನ ಮಾತ್ರ ವಿಫಲವಾಗದೆ, ಈ ಪ್ರಯತ್ನಕ್ಕಾಗಿ ಈಗಾಗಲೇ ಹಣಕಾಸು ಮುಗ್ಗಟ್ಟು ಎದುರಿಸುತ್ತಿರುವ ರಾಜ್ಯದ ಬೊಕ್ಕಸಕ್ಕೆ ಇದರಿಂದ ಯಾವುದೇ ಹೊರೆಯಾಗುವುದಿಲ್ಲ ಎಂಬ ಸರ್ಕಾರದ ಪ್ರತಿಪಾದನೆಯೂ ಸುಳ್ಳು ಎಂಬ ಸಂಗತಿ ಬಯಲಾಗಿದೆ.

ಮಾಹಿತಿ ಹಕ್ಕು ಕಾಯ್ದೆ ಅರ್ಜಿಗೆ ನೀಡಿರುವ ಮಾಹಿತಿಯ ಪ್ರಕಾರ, ಅರ್ಜೆಂಟೀನಾ ಫುಟ್‌ಬಾಲ್ ತಂಡದ ಅಧಿಕಾರಿಗಳನ್ನು ಭೇಟಿ ಮಾಡಲು ಸ್ಪೇನ್‌ಗೆ ತೆರಳಿದ್ದ ಕ್ರೀಡಾ ಸಚಿವ ವಿ.ಅಬ್ದುರಹಿಮಾನ್ ನೇತೃತ್ವದ ನಿಯೋಗದ ಭೇಟಿಗಾಗಿ 13 ಲಕ್ಷ ರೂ. ವೆಚ್ಚ ಮಾಡಲಾಗಿದೆ ಎಂದು ಬಹಿರಂಗವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಟೆಸ್ಟ್ ಸರಣಿಯಲ್ಲಿ ವಿಶ್ವ ದಾಖಲೆ ಬರೆದ ಭಾರತ ತಂಡ

ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ ಕರೆತರಲಾಗುವುದು ಎಂದು ರಾಜ್ಯ ಸರಕಾರ ಕಳೆದ ವರ್ಷ ಘೋಷಿಸಿತ್ತು. ಇದು ಫುಟ್ ಬಾಲ್ ಹುಚ್ಚಿಗೆ ಹೆಸರುವಾಸಿವಾಗಿರುವ ಕೇರಳವನ್ನು ರೋಮಾಂಚನಗೊಳಿಸಿತ್ತು. ಆದರೆ, ಪ್ರಾಯೋಜಕರು ಅಗತ್ಯ ಮೊತ್ತವನ್ನು ಪಾವತಿಸಿದ್ದರೂ, ಅರ್ಜೆಂಟೀನಾ ತಂಡ ಕೇರಳಕ್ಕೆ ಭೇಟಿ ನೀಡುತ್ತಿಲ್ಲ ಎಂದು ಕೆಲ ದಿನಗಳ ಹಿಂದಷ್ಟೆ ಕ್ರೀಡಾ ಸಚಿವರು ಮಾಹಿತಿ ನೀಡಿದ್ದರು.

ಅರ್ಜೆಂಟೀನಾ ತಂಡದ ಭೇಟಿಯನ್ನು ತಾತ್ಕಾಲಿಕವಾಗಿ ಅಕ್ಟೋಬರ್ ತಿಂಗಳಲ್ಲಿ ಯೋಜಿಸಲಾಗಿತ್ತು. ಆದರೆ, ಈ ಯೋಜನೆಯನ್ನು ಮುಂದಿನ ವರ್ಷಕ್ಕೆ ಮುಂದೂಡಬೇಕು ಎಂದು ಅರ್ಜೆಂಟೀನಾ ತಂಡ ಬಯಸಿತ್ತು. ಅರ್ಜೆಂಟೀನಾ ತಂಡದ ಈ ಕೋರಿಕೆಗೆ ಸಮ್ಮತಿಸಲು ಪ್ರಾಯೋಜಕರು ಸಿದ್ಧರಿರಲಿಲ್ಲ ಎಂದು ಹೇಳಲಾಗಿದೆ.

ಉತ್ತರ ಕೇರಳ ಜಿಲ್ಲೆಗಳಾದ ಮಲಪ್ಪುರಂ ಹಾಗೂ ಕೋಯಿಕ್ಕೋಡ್ ಜಿಲ್ಲೆಗಳು ಫುಟ್‌ಬಾಲ್ ಹುಚ್ಚಿಗೆ ಹೆಸರುವಾಸಿಯಾಗಿವೆ. ಕಳೆದ ವಿಶ್ವಕಪ್ ಸಂದರ್ಭದಲ್ಲಿ ಕೋಯಿಕ್ಕೋಡ್‌ನ ನದಿಯ ಬಳಿ ಬೃಹತ್ ಗಾತ್ರದ ಜನಪ್ರಿಯ ಫುಟ್‌ಬಾಲ್ ಆಟಗಾರರ ಕಟೌಟ್‌ಗಳನ್ನು ನಿಲ್ಲಿಸಿದ್ದದ್ದು ಫೀಫಾ ಗಮನವನ್ನೂ ಸೆಳೆದಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...