ಬಾಂಗ್ಲಾ ವಿರುದ್ಧದ ಟೆಸ್ಟ್: ಮೊದಲ ಇನಿಂಗ್ಸ್‌ನಲ್ಲಿ 376 ಪೇರಿಸಿದ ಭಾರತ, ಪ್ರವಾಸಿಗರಿಗೆ ಆರಂಭಿಕ ಆಘಾತ

Date:

ಬಾಂಗ್ಲಾದೇಶ ವಿರುದ್ಧ ರನ್ ಗಳಿಸಲು ಪರದಾಡಿದ ಭಾರತ ತಂಡಕ್ಕೆ ರವಿಚಂದ್ರನ್ ಅಶ್ವಿನ್ ಶತಕ (113) ಹಾಗೂ ರವೀಂದ್ರ ಜಡೇಜಾ (86) ಅರ್ಧಶತಕದ ನೆರವಿನಿಂದ ಟೀಂ ಇಂಡಿಯಾ 376 ರನ್‌ಗಳಿಗೆ ಮೊದಲ ಇನಿಂಗ್ಸ್ ಸಮಾಪ್ತಿಗೊಳಿಸಿದೆ.

6 ವಿಕೆಟ್ ನಷ್ಟಕ್ಕೆ 339 ರನ್‌ಗಳೊಂದಿಗೆ ಎರಡನೇ ದಿನದಾಟ ಶುರುಮಾಡಿದ ಭಾರತ 91.2 ಓವರ್‌ಗಳಲ್ಲಿ ಆಲೌಟ್‌ ಆಯಿತು. ಟೀಂ ಇಂಡಿಯಾದ 376 ರನ್‌ ಮೊತ್ತಕ್ಕೆ ರವಿಚಂದ್ರನ್ ಅಶ್ವಿನ್ ಶತಕ (113), ರವೀಂದ್ರ ಜಡೇಜಾ (86) ಹಾಗೂ ಯಶಸ್ವಿ ಜೈಸ್ವಾಲ್‌ (56) ಪ್ರಮುಖ ಕಾರಣಕರ್ತರಾದರು.

ಚೆನ್ನೈನ ಎಂ ಚಿದಂಬರಂ ಕ್ರಿಕೆಟ್ ಮೈದಾನದಲ್ಲಿ ನಡೆದ ಪ್ರಥಮ ಟೆಸ್ಟ್‌ನಲ್ಲಿ ಟಾಸ್ ಗೆದ್ದ ಬಾಂಗ್ಲಾ ಬೌಲಿಂಗ್ ಆಯ್ಕೆ ಮಾಡಿಕೊಂಡಿತು.  ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಯಶಸ್ವಿ ಜೈಸ್ವಾಲ್ ಉತ್ತಮ ಪ್ರದರ್ಶನ ನೀಡಿದರು. ಸತತ ವಿಕೆಟ್ ಪತನವಾದ ಕಾರಣ ನಿಧಾನಗತಿ ಹಾಗೂ ರಕ್ಷಣಾತ್ಮಕ ಆಟದ ಮೂಲಕ ಆಕರ್ಷಕ ಅರ್ಧಶತಕ ಸಿಡಿಸಿ ಗಮನ ಸೆಳೆದರು. ಆದರೆ ಘಟಾನುಘಟಿ ಬ್ಯಾಟರ್ಗಳು ಕೈಕೊಟ್ಟರು. ರೋಹಿತ್ ಶರ್ಮಾ 6, ಶುಭ್‌ಮನ್‌ ಗಿಲ್ 0, ವಿರಾಟ್ ಕೊಹ್ಲಿ 6, ಕೆಎಲ್ ರಾಹುಲ್ 16 ರನ್ ಗಳಿಸಿ ಭಾರಿ ನಿರಾಸೆ ಮೂಡಿಸಿದರು. ರಿಷಭ್ ಪಂತ್(39) ಕೆಲಹೊತ್ತು ಹೋರಾಡಿ ಗಮನ ಸೆಳೆದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಪ್ಯಾರಾಲಿಂಪಿಕ್ಸ್: ದಾಖಲೆಯ 29 ಪದಕಗಳನ್ನು ಗೆದ್ದ ಭಾರತ

ಬಾಂಗ್ಲಾ ಬೌಲರ್‌ಗಳ ಉತ್ತಮ ಪ್ರದರ್ಶನ

ಇತ್ತೀಚೆಗೆ ಪಾಕಿಸ್ತಾನ ವಿರುದ್ಧ ಐತಿಹಾಸಿಕ ಸರಣಿ ಗೆದ್ದು ದಾಖಲೆ ಬರೆದ ಬಾಂಗ್ಲಾದೇಶ ಭಾರತದ ವಿರುದ್ಧವೂ ಉತ್ತಮ ಪ್ರದರ್ಶನ ನೀಡುತ್ತಿದೆ. ವೇಗಿ ಹಸನ್ ಮೊಹಮ್ಮದ್ ಬೊಂಬಾಬ್ ಬೌಲಿಂಗ್‌ ಪ್ರಮುಖ ಬ್ಯಾಟರ್‌ಗಳು ಬೇಗನೇ ಪೆವಿಲಿಯನ್ ಸೇರಿದರು. ರೋಹಿತ್, ಗಿಲ್, ಕೊಹ್ಲಿ, ಪಂತ್ ಅವರನ್ನು ಬೇಗನೇ ಔಟಾದರು. 18 ಓವರ್ಗಳಲ್ಲಿ 58 ರನ್ ಬಿಟ್ಟುಕೊಟ್ಟು 4 ವಿಕೆಟ್ ಉರುಳಿಸಿದರು. ಇದರ ಪರಿಣಾಮ ಭಾರತ ಕೇವಲ 144 ರನ್ಗಳಿಗೆ ಪ್ರಮುಖ 6 ವಿಕೆಟ್‌ಗಳ ಕಳೆದುಕೊಂಡಿತು. ನಹಿದ್ ರಾಣಾ, ಮೆಹದಿ ಹಸನ್ ಮಿರಾಜ್ ಕೂಡ ತಲಾ 1 ವಿಕೆಟ್ ಪಡೆದು ಸಾಥ್ ನೀಡಿದರು.

ಭಾರತಕ್ಕೆ ಜಡ್ಡು– ಅಶ್ವಿನ್ ಆಸರೆ

144 ರನ್‌ಗಳಿಗೆ 6 ವಿಕೆಟ್ ಕಳೆದುಕೊಂಡು ಅಪಾಯದಲ್ಲಿದ್ದ ಭಾರತ ತಂಡಕ್ಕೆ ಆಸರೆಯಾಗಿದ್ದು ರವೀಂದ್ರ ಜಡೇಜಾ ಮತ್ತು ರವಿಚಂದ್ರನ್ ಅಶ್ವಿನ್. ಈ ಹಂತದಲ್ಲಿ ಜೊತೆಯಾದ ಜೋಡಿ 200 ರನ್‌ಗಳ ಸಮೀಪ ರನ್ ಕಲೆ ಹಾಕಿತು. 7ನೇ ವಿಕೆಟ್‌ಗೆ 227 ಎಸೆತಗಳಲ್ಲಿ 199 ರನ್‌ಗಳ ಜೊತೆಯಾಟವಾಡಿತು. ಇದು ಭಾರತ ತಂಡವನ್ನು 300 ರನ್‌ಗಳ ಗಡಿ ದಾಟುವಂತೆ ಮಾಡಿತು. ಬಾಂಗ್ಲಾದೇಶ ಬೌಲರ್‌ಗಳ ಎದುರು ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದ ಅಶ್ವಿನ್ 6ನೇ ಶತಕವನ್ನೂ ಪೂರೈಸಿದರು.

ಬಾಂಗ್ಲಾ ಪರ ಹಸನ್ ಮಹಮೂದ್ 83/5, ತಸ್ಕಿನ್ ಅಹ್ಮದ್ 55/3 ಹಾಗೂ ನಹಿದ್‌ ರಾಣಾ, ಮೀರಜ್‌ ತಲಾ ಒಂದೊಂದು ವಿಕೆಟ್ ಉರುಳಿಸಿ ಭಾರತದ ಪತನಕ್ಕೆ ಕಾರಣರಾದರು.

ಎರಡನೇ ಇನಿಂಗ್ಸ್‌ ಆರಂಭಿಸಿರುವ ಬಾಂಗ್ಲಾದೇಶ ಇತ್ತೀಚಿನ ವರದಿಗಳಂತೆ 8.2 ಓವರ್‌ಗಳಲ್ಲಿ 22 ರನ್‌ ಗಳಿಸಿ 3 ವಿಕೆಟ್ ಕಳೆದುಕೊಂಡು ಆರಂಭಿಕ ಆಘಾತ ಅನುಭವಿಸಿದೆ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...