ಸ್ಟೇಡಿಯಂನಲ್ಲೇ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮಾಲೀಕರ ಮೇಲೆ ದಾಳಿ

Date:

ಇಂಡಿಯನ್ ಸೂಪರ್ ಲೀಗ್ 2024-2025ರ (ಐಸಿಎಲ್) ಫೈನಲ್ ಪಂದ್ಯದ ವೇಳೆ ಮೋಹನ್ ಬಗಾನ್ ಸೂಪರ್ ಜೈಂಟ್ಸ್‌ (ಎಂಜಿಎಸ್‌ಜಿ) ತಂಡದ ಕೆಲ ಅಭಿಮಾನಿಗಳು ಬೆಂಗಳೂರು ಎಫ್​ಸಿ ತಂಡದ ಮಾಲೀಕ ಪಾರ್ಥ್ ಜಿಂದಾಲ್ ಮೇಲೆ ದಾಳಿ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಏಪ್ರಿಲ್ 12 ರಂದು ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ನಡೆದ ಐಎಸ್‌ಎಲ್ ಫೈನಲ್‌ನಲ್ಲಿ ಮೋಹನ್ ಬಗಾನ್ ಸೂಪರ್ ಜೈಂಟ್ಸ್​ ಹಾಗೂ ಬೆಂಗಳೂರು ಎಫ್‌ಸಿ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯವನ್ನು ವೀಕ್ಷಿಸಲು ಪಾರ್ಥ್ ಜಿಂದಾಲ್ ಕೂಡ ಸ್ಟೇಡಿಯಂನಲ್ಲಿ ಹಾಜರಿದ್ದರು. ಈ ವೇಳೆ ಮೋಹನ್ ಬಗಾನ್ ಸೂಪರ್ ಜೈಂಟ್ಸ್‌ ತಂಡದ ಅಭಿಮಾನಿಗಳು ತಮ್ಮ ಮಾಲೀಕರ ಮೇಲೆ ಪಟಾಕಿಗಳೊಂದಿಗೆ ನಡೆಸಿದ್ದಾರೆ ಎಂದು ಬೆಂಗಳೂರು ಎಫ್‌ಸಿ (ಬಿಎಫ್‌ಸಿ) ಆರೋಪಿಸಿದೆ.

ಪಾರ್ಥ್ ಜಿಂದಾಲ್ ಐಪಿಎಲ್​ನ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸಹ ಮಾಲೀಕರು ಹೌದು. ಹಾಗೆಯೇ ಇಂಡಿಯನ್ ಸೂಪರ್ ಲೀಗ್ ಫುಟ್​ಬಾಲ್​ ಟೂರ್ನಿಯಲ್ಲಿ ಬೆಂಗಳೂರು ಎಫ್​ಸಿ ತಂಡದ ಮಾಲೀಕತ್ವವನ್ನು ಹೊಂದಿದ್ದಾರೆ. ಹೀಗಾಗಿ ಬೆಂಗಳೂರು ತಂಡದ ಫೈನಲ್ ಪಂದ್ಯವನ್ನು ವೀಕ್ಷಿಸಲು ಪಾರ್ಥ್ ಜಿಂದಾಲ್ ​ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಹಾಜರಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಐಪಿಎಲ್ 2025 | ಧೋನಿ ಔಟ್‌ ಇಲ್ಲದಿದ್ದರೂ ವಿವಾದಾತ್ಮಕ ತೀರ್ಪು ನೀಡಿದ ಅಂಪೈರ್

ಈ ವೇಳೆ ಮೋಹನ್ ಬಗಾನ್ ಅಭಿಮಾನಿಗಳ ಒಂದು ಗುಂಪು ಪಾರ್ಥ್ ಅವರ ಮೇಲೆ ಉದ್ದೇಶಪೂರ್ವಕವಾಗಿ ಪಟಾಕಿಗಳೊಂದಿಗೆ ದಾಳಿ ನಡೆಸಿದ್ದಾರೆ. ಅಲ್ಲದೆ ಬೆಂಗಳೂರು ಎಫ್​ಸಿ ಬೆಂಬಲಿಗರ ಮೇಲೂ ಪಟಾಕಿಗಳನ್ನು ಎಸೆದಿದ್ದಾರೆ. ಇದರಿಂದಾಗಿ ಬಿಎಫ್‌ಸಿ ಅಭಿಮಾನಿಯ ಕಣ್ಣಿಗೆ ಗಾಯವಾಗಿದೆ ಎಂದು ಬಿಎಫ್​ಸಿ ಆರೋಪಿಸಿದೆ. ಘಟನೆ ವೇಳೆ ಪಾರ್ಥ್ ಅವರಗೂ ಗಾಯವಾಗಿದೆ.

ಮೋಹನ್ ಬಗಾನ್ ಸೂಪರ್ ಜೈಂಟ್ಸ್ ತಂಡವು ಐಪಿಎಲ್​ನ ಲಖನೌ ಸೂಪರ್ ಜೈಂಟ್ಸ್ ತಂಡದ ಮಾಲೀಕರಾದ ಸಂಜೀವ್ ಗೊಯೆಂಕಾ ಅವರ ಒಡೆತನದಲ್ಲಿದೆ. ಇದೀಗ ಮೋಹನ್ ಬಗಾನ್ ಸೂಪರ್ ಜೈಂಟ್ಸ್ ತಂಡದ ಅಭಿಮಾನಿಗಳ ಈ ದಾಳಿಯನ್ನು ಗಂಭೀರವಾಗಿ ಪರಿಗಣಿಸಬೇಕೆಂದು ಬಿಎಫ್‌ಸಿ ತನ್ನ ಸಾಮಾಜಿಕ ಮಾಧ್ಯಮದಲ್ಲಿ ಹೇಳಿಕೆ ನೀಡಿದೆ.

ಈ ವಿಷಯದಲ್ಲಿ ಬಿಎಫ್‌ಸಿ ಅಖಿಲ ಭಾರತ ಫುಟ್‌ಬಾಲ್ ಫೆಡರೇಶನ್ (ಎಐಎಫ್‌ಎಫ್) ಮತ್ತು ಐಎಸ್‌ಎಲ್ ಸಂಘಟಕರಾದ ಎಫ್‌ಎಸ್‌ಡಿಎಲ್‌ಗೆ ಔಪಚಾರಿಕ ದೂರು ನೀಡಿದೆ. ಈ ಘಟನೆಯನ್ನು ಗಂಭೀರವಾಗಿ ತನಿಖೆ ಮಾಡಿ ಭವಿಷ್ಯದಲ್ಲಿ ಕ್ರೀಡಾಂಗಣದಲ್ಲಿ ಅಭಿಮಾನಿಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಬೇಕು ಎಂದು ಕ್ಲಬ್ ಒತ್ತಾಯಿಸಿದೆ.

ಫುಟ್​ಬಾಲ್ ಪ್ರಿಯರಿಗೆ ಕ್ರೀಡಾಂಗಣಗಳು ಸುರಕ್ಷಿತ ಸ್ಥಳಗಳಾಗಿರಬೇಕು. ಇಂತಹ ಘಟನೆಗಳಿಗೆ ಫುಟ್‌ಬಾಲ್ ಅಥವಾ ಯಾವುದೇ ಕ್ರೀಡೆಯಲ್ಲಿ ಸ್ಥಾನವಿಲ್ಲ ಎಂದು ಬೆಂಗಳೂರು ಫುಟ್​ಬಾಲ್ ಕ್ಲಬ್ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...