ಏಷ್ಯನ್ ಚಾಂಪಿಯನ್‌ಶಿಪ್‌ | 10 ಮೀಟರ್ ಏರ್ ಪಿಸ್ತೂಲ್‌ನಲ್ಲಿ ಕಂಚು ಗೆದ್ದ ಮನು ಭಾಕರ್

Date:

ಕಝಾಕಿಸ್ತಾನದ ಶಿಮ್ಕೆಂಟ್‌ನಲ್ಲಿ ನಡೆದ ಏಷ್ಯನ್ ಶೂಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಒಲಿಂಪಿಕ್ ಪದಕ ವಿಜೇತೆ ಮನು ಭಾಕರ್ ಕಂಚಿನ ಪದಕ ಗೆದ್ದಿದ್ದಾರೆ. ಒಲಿಂಪಿಕ್‌ನಲ್ಲಿ ಮನು ಭಾಕರ್ ಎರಡು ಪದಕವನ್ನು ಗೆದ್ದಿದ್ದರು.

ಫೈನಲ್ ಪಂದ್ಯಕ್ಕೂ ಮುನ್ನ ಆಗಸ್ಟ್ 19ರ ಮಂಗಳವಾರ ನಡೆದ ಪಂದ್ಯದಲ್ಲಿ ಮನು ಭಾಕರ್ ತಮ್ಮ ಜೀವನದ ಒಂಬತ್ತನೇ ಪದಕವನ್ನು ಪಡೆದಿದ್ದಾರೆ. ಅವರ ಸಹಚರರಾದ ಸುರುಚಿ ಸಿಂಗ್ ಮತ್ತು ಪಾಲಕ್ ಫೈನಲ್ ತಲುಪುವಲ್ಲಿ ವಿಫಲವಾದರು.

ಇದನ್ನು ಓದಿದ್ದೀರಾ? ಭೀಕರ ಅಪಘಾತ; ಒಲಿಂಪಿಕ್ ಪದಕ ವಿಜೇತೆ ಮನು ಭಾಕರ್ ಅಜ್ಜಿ, ಚಿಕ್ಕಪ್ಪ ಸಾವು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭಾಕರ್, ಸುರುಚಿ ಮತ್ತು ಪಾಲಕ್ ತ್ರಿವಳಿ ತಂಡವು ಒಟ್ಟು 1730 ಅಂಕಗಳೊಂದಿಗೆ ಸ್ಫರ್ಧೆಯಲ್ಲಿ ಮೂರನೇ ಸ್ಥಾನ ಗಳಿಸಿತು. ಏಷ್ಯನ್ ಚಾಂಪಿಯನ್‌ಶಿಪ್‌ನಲ್ಲಿ ಚೀನಾದ ಕ್ವಿಯಾಂಕೆ ಮಾ 243.2 ಅಂಕಗಳೊಂದಿಗೆ ಚಿನ್ನದ ಪದಕವನ್ನು ಗೆದ್ದರೆ, ಕೊರಿಯಾದ ಜಿಯಿನ್ ಯಾಂಗ್ ಅವರು 241.6 ಅಂಕಗಳೊಂದಿಗೆ ಬೆಳ್ಳಿ ಪಡೆದರು.

ಭಾಕರ್ ಅರ್ಹತಾ ಸುತ್ತಿನಲ್ಲಿ 584 ಅಂಕಗಳೊಂದಿಗೆ ಮೂರನೇ ಸ್ಥಾನ ಪಡೆದ ನಂತರ ಫೈನಲ್ ಪ್ರವೇಶಿಸಿದರು. ಈ ವರ್ಷ ಮೂರು ವಿಶ್ವಕಪ್ ಚಿನ್ನದ ಪದಕಗಳನ್ನು ಗೆದ್ದು ಏಷ್ಯನ್ ಚಾಂಪಿಯನ್‌ಶಿಪ್‌ಗೆ ಪ್ರವೇಶಿಸಿದ್ದ ಸುರುಚಿ, 574 ಅಂಕಗಳೊಂದಿಗೆ 12 ನೇ ಸ್ಥಾನ ಪಡೆದು ಫೈನಲ್‌ನಿಂದ ಹೊರಗುಳಿದರು. ಪಾಲಕ್ 573 ಅಂಕಗಳೊಂದಿಗೆ 17 ನೇ ಸ್ಥಾನ ಪಡೆದರು.

ಕಳೆದ ವರ್ಷ ಪ್ಯಾರಿಸ್ ಒಲಿಂಪಿಕ್ಸ್‌ನ ಎರಡು ಪದಕ ಗೆದ್ದ ಬಳಿಕ ಭಾಕರ್ ಸ್ಥಿರತೆ ಕಾಯ್ದುಕೊಂಡಿದ್ದಾರೆ. ಏಪ್ರಿಲ್‌ನಲ್ಲಿ ನಡೆದ ವಿಶ್ವಕಪ್‌ನ ಲಿಮಾ ಲೆಗ್‌ನಲ್ಲಿ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಭಾಕರ್ ಬೆಳ್ಳಿ ಗೆದ್ದರು. ಜೂನ್‌ನಲ್ಲಿ ನಡೆದ ಮ್ಯೂನಿಚ್ ವಿಶ್ವಕಪ್‌ನಲ್ಲಿ ಭಾಕರ್ ಆರನೇ ಸ್ಥಾನ ಪಡೆದಿದ್ದು, ಪದಕ ಕೈ ತಪ್ಪಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...