ವಿಮಾನ ನಿಲ್ದಾಣದಲ್ಲಿ ಮಾಯಾಂಕ್ ಅಗರ್ವಾಲ್ ದಿಢೀರ್ ಅಸ್ವಸ್ಥ: ಐಸಿಯುನಲ್ಲಿ ಚಿಕಿತ್ಸೆ

Date:

ಟೀಂ ಇಂಡಿಯಾ ಆಟಗಾರ ಹಾಗೂ ಕರ್ನಾಟಕ ರಣಜಿ ತಂಡದ ನಾಯಕ ಮಾಯಾಂಕ್ ಅಗರ್‌ವಾಲ್ ದಿಢೀರ್ ತ್ರಿಪುರಾದ ಅಗರ್ತಲ ವಿಮಾನ ನಿಲ್ದಾಣದಲ್ಲಿ ದಿಢೀರ್ ಅಸ್ವಸ್ಥಗೊಂಡ ಕಾರಣ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅಗರ್ತಲಾದಿಂದ ಸೂರತ್‌ಗೆ ಹೊರಡುತ್ತಿದ್ದ ವಿಮಾನದಲ್ಲಿ ಕರ್ನಾಟಕ ರಣಜಿ ತಂಡದ ನಾಯಕ ಮಾಯಾಂಕ್ ಅಗರ್‌ವಾಲ್ ತಿಳಿಯದೆ ರಾಸಾಯನಿಕಯುಕ್ತ ದ್ರವ್ಯ ಸೇವಿಸಿದ ಕಾರಣ ಅವರ ಬಾಯಿ ಹಾಗೂ ಗಂಟಲು ಹಾನಿಯಾಗಿದೆ ಎನ್ನಲಾಗಿದೆ.

ಈ ಹಿನ್ನೆಲೆಯಲ್ಲಿ ಅಗರ್‌ವಾಲ್‌ ಅವರನ್ನು ಅಗರ್ತಲಾದ ಐಎಲ್‌ಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಚಾತುರ್ಯದಿಂದ ರಾಸಾಯನಿಕಯುಕ್ತ ದ್ರವ್ಯ ಸೇವಿಸಿದ್ದೆ ಘಟನೆಗೆ ಕಾರಣ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರಾಮ ನೆಲೆ ನಿಂತರೂ ನಿಲ್ಲದ ನಾಟಕ

ಚಿಕಿತ್ಸೆ ನೀಡುತ್ತಿರುವ ವೈದ್ಯರ ಪ್ರಕಾರ ಮಾಯಾಂಕ್‌ ಅಗರ್‌ವಾಲ್‌ ಅವರು ಅಪಾಯದಿಂದ ಪಾರಾಗಿದ್ದಾರೆ. ಕ್ರಿಕೆಟ್ ಆಟಗಾರನ ಆರೋಗ್ಯದ ಬಗ್ಗೆ ವೈದ್ಯರು ಹೆಚ್ಚಿನ ಮಾಹಿತಿ ನೀಡದಿದ್ದರೂ ಹೆಚ್ಚಿನ ಅಪಾಯವಿಲ್ಲ ಎಂದು ತಿಳಿಸಿದ್ದಾರೆ.

2023-24ರ ರಣಜಿ ಋತುವಿನ ಕರ್ನಾಟಕ ನಾಯಕರಾಗಿರುವ ಮಾಯಾಂಕ್ ಅಗರ್‌ವಾಲ್ ತ್ರಿಪುರ ವಿರುದ್ಧ ಪಂದ್ಯವಿದ್ದ ಕಾರಣ ಅಗರ್ತಲಾಕ್ಕೆ ಆಗಮಿಸಿದ್ದರು. ನಿನ್ನೆ ಮುಕ್ತಾಯಗೊಂಡ ಪಂದ್ಯದಲ್ಲಿ ಕರ್ನಾಟಕ 29 ರನ್‌ಗಳಿಂದ ಜಯಗಳಿಸಿತ್ತು.

ಸೂರತ್‌ನಲ್ಲಿ ರೈಲ್ವೆಸ್‌ ವಿರುದ್ಧ ಮುಂದಿನ ಪಂದ್ಯವಾಡುವ ಸಲುವಾಗಿ ಅಗರ್ತಲ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು.

32 ವರ್ಷದ ಮಾಯಾಂಕ್ ಭಾರತದ ಪರ 21 ಟೆಸ್ಟ್‌ ಪಂದ್ಯಗಳನ್ನಾಡಿದ್ದು 41ರ ಸರಾಸರಿಯಂತೆ 1488 ರನ್‌ ಗಳಿಸಿದ್ದಾರೆ. ಇದರಲ್ಲಿ 6 ಅರ್ಧ ಶತಕಗಳು ಹಾಗೂ 2 ಶತಕಗಳಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...