ಒಲಿಂಪಿಕ್ಸ್‌: ಟಿ20 ಸೇರ್ಪಡೆಗೆ ಅನುಮತಿ ನೀಡಿದ ಐಒಸಿ

Date:

ಇನ್ನು ಮುಂದೆ  ವಿಶ್ವದ ಕ್ರೀಡಾ ಹಬ್ಬವಾದ ಒಲಿಂಪಿಕ್ಸ್‌ ಕ್ರೀಡಾಕೂಟದಲ್ಲಿ ಎರಡು ಚಿನ್ನ ಗೆಲ್ಲಲು ಭಾರತಕ್ಕೆ ಮತ್ತೊಂದು ಅವಕಾಶ ದೊರೆಯುವ ಸಾಧ್ಯತೆಯಿದೆ.

2028ರ ಲಾಸ್ ಏಂಜಲೀಸ್ ಒಲಿಂಪಿಕ್ಸ್‌ ಕ್ರೀಡಾಕೂಟದಲ್ಲಿ ಟಿ20 ಕ್ರಿಕೆಟ್ ಆಟವನ್ನು ಸೇರ್ಪಡೆ ಮಾಡಬೇಕು ಎಂಬ ಸಲಹೆಯನ್ನು ಅಂತಾರಾಷ್ಟ್ರೀಯ ಒಲಿಂಪಿಕ್ಸ್ ಸಮಿತಿ(ಐಒಸಿ) ಸ್ವೀಕರಿಸಿದೆ. ಈ ಮೂಲಕ ಕ್ರಿಕೆಟ್ ಆಟವು ವಿಶ್ವದ ಅತಿದೊಡ್ಡ ಕ್ರೀಡಾಕೂಟದಲ್ಲಿ ಭಾಗಿಯಾಗಲು ವೇದಿಕೆ ಸಜ್ಜಾಗಿದೆ.

ಪುರುಷರ ಹಾಗೂ ಮಹಿಳೆಯರ ಟಿ20 ಕ್ರಿಕೆಟ್ ಸೇರ್ಪಡೆಗೊಳಿಸಲು ಅಕ್ಟೋಬರ್ 15 ರಂದು ನಿಗದಿಯಾಗಿರುವ ತನ್ನ ಅಧಿವೇಶನದಲ್ಲಿ ಐಒಸಿ ಕಾರ್ಯಕಾರಿ ಮಂಡಳಿಯು ತನ್ನ ಮತಗಳನ್ನು ಚಲಾಯಿಸಲಿದ್ದು, ಕ್ರಿಕೆಟ್ ಬಹುತೇಕ ಸೇರ್ಪಡೆಗೊಳ್ಳುವ ಸಾಧ್ಯತೆ ಹೆಚ್ಚಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಏಕದಿನ ವಿಶ್ವಕಪ್ 2023 | ಪಾಕ್ ಪಂದ್ಯದಲ್ಲಿ ಶುಭಮನ್ ಆಡುವ ಬಗ್ಗೆ ಲೇಟೆಸ್ಟ್ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

ಕ್ರಿಕೆಟ್ ಹೊರತಾಗಿ ಬೇಸ್‌ಬಾಲ್, ಫ್ಲ್ಯಾಗ್ ಫುಟ್‌ಬಾಲ್, ಲ್ಯಾಕ್ರೋಸ್ ಮತ್ತು ಸ್ಕ್ವಾಷ್ ಕ್ರೀಡೆಗಳನ್ನು ಸೇರ್ಪಡೆಗೊಳಿಸಲು ಐಒಸಿ ಅನುಮತಿ ನೀಡಿದೆ. ಇವೆಲ್ಲ ಕ್ರೀಡೆಗಳ ಸೇರ್ಪಡೆಯ ತೀರ್ಮಾನ ಅಕ್ಟೋಬರ್‌ 16ರಂದು ಪ್ರಕಟಗೊಳ್ಳಲಿದೆ.

“ಕ್ರಿಕೆಟ್‌ನ ಜನಪ್ರಿಯತೆಯನ್ನು ನಾವು ನೋಡಿದ್ದೇವೆ. ಟಿ20 ಹಾಗೂ ಏಕದಿನ ವಿಶ್ವಕಪ್ ಈಗಾಗಲೇ ದೊಡ್ಡ ಯಶಸ್ಸನ್ನು ಹೊಂದಿದೆ. ಮೊದಲ ಐದು ಹೊಸ ಕ್ರೀಡೆಗಳನ್ನು ಪರಿಚಯಿಸಲು ಲಾಸ್ ಏಂಜಲೀಸ್ ಸಂಘಟನಾ ಸಮಿತಿ ನಿರ್ಧಾರಗಳನ್ನು ತೆಗೆದುಕೊಳ್ಳಲಿದೆ” ಎಂದು ಐಒಸಿಯ ಕ್ರೀಡಾ ನಿರ್ದೇಶಕ ಕಿಟ್ ಮೆಕ್‌ಕಾನ್ನೆಲ್ ಎರಡು ದಿನಗಳ ಕಾರ್ಯಕಾರಿ ಮಂಡಳಿಯ ಸಭೆಯ ಮುಕ್ತಾಯದ ನಂತರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...