ಮೊಹಮ್ಮದ್ ಶಮಿಗೆ ರಾಷ್ಟ್ರಪತಿಯಿಂದ ಅರ್ಜುನ ಪ್ರಶಸ್ತಿ ಪುರಸ್ಕಾರ

Date:

ಟೀಂ ಇಂಡಿಯಾ ಕ್ರಿಕೆಟಿಗ ಮೊಹಮದ್ ಶಮಿ, ಪ್ಯಾರಾ ಬಿಲ್ಲುಗಾರಿಕೆ ಪಟು ಶೀತಲ್ ದೇವಿ ಸೇರಿದಂತೆ ಹಲವರಿಗೆ ರಾಷ್ಟ್ರಪತಿ ದ್ರೌಪದಿ ಮರ್ಮು ಅವರು ಇಂದು ಅರ್ಜುನ ಪ್ರಶಸ್ತಿ ಸೇರಿದಂತೆ 2023ನೇ ಸಾಲಿನ ಹಲವು ರಾಷ್ಟ್ರೀಯ ಪ್ರಶಸ್ತಿಗಳನ್ನು ವಿತರಿಸಿದರು. ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ವಿತರಿಸಲಾಯಿತು.

ಬ್ಯಾಡ್ಮಿಂಟನ್ ಆಟಗಾರರಾದ ಚಿರಾಗ್‌ ಶೆಟ್ಟಿ, ಸಾತ್ವಿಕ್‌ ರಾಜ್‌ ರಂಕಿಂತ್ ರೆಡ್ಡಿ ಅವರಿಗೆ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಇಬ್ಬರು ಆಟಗಾರರು 2023ನೇ ಏಷ್ಯನ್‌ ಕ್ರೀಡಾಕೂಟದಲ್ಲಿ ಭಾರತಕ್ಕೆ ಚಿನ್ನದ ಪದಕ ಗೆಲ್ಲಿಸಿಕೊಟ್ಟಿದ್ದರು. ಇದರ ಜೊತೆ ಇಂಡೋನೇಷ್ಯಾ ಓಪನ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಡವರ ಭೂಮಿ ಮತ್ತು ನೈಸ್‌ ರಾಜಕಾರಣ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2023 ರ ಏಕದಿನ ವಿಶ್ವಕಪ್​ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ಮೊಹಮದ್ ಶಮಿ ಅವರನ್ನು ಈ ಬಾರಿಯ ಅರ್ಜುನ ಪ್ರಶಸ್ತಿಗೆ ಬಿಸಿಸಿಐ ಶಿಫಾರಸ್ಸು ಮಾಡಿತ್ತು. ಅದರಂತೆ ಇದೀಗ ಟೀಮ್ ಇಂಡಿಯಾ ಆಟಗಾರ ಭಾರತದ 2ನೇ ಅತ್ಯುನ್ನತ ಕ್ರೀಡಾ ಗೌರವಕ್ಕೆ ಪಾತ್ರರಾಗಿದ್ದಾರೆ.

ಈ ಬಾರಿಯ ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾ ಪರ ಮೊಹಮ್ಮದ್ ಶಮಿ ಕೇವಲ 7 ಪಂದ್ಯಗಳನ್ನಾಡಿದ್ದರು. ಈ ವೇಳೆ 10.70ರ ಸರಾಸರಿಲ್ಲಿ ಒಟ್ಟು 24 ವಿಕೆಟ್ ಕಬಳಿಸಿದ್ದರು. ಈ ಮೂಲಕ ಟೂರ್ನಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಆಗಿ ಹೊರಹೊಮ್ಮಿದ್ದರು. ಶಮಿ ಅವರ  ಈ ಅಮೋಘ ಪ್ರದರ್ಶನದಿಂದಾಗಿ ಟೀಮ್ ಇಂಡಿಯಾ ಏಕದಿನ ವಿಶ್ವಕಪ್​ನಲ್ಲಿ ಫೈನಲ್​ಗೇರಿತ್ತು.

ಅರ್ಜುನ ಪ್ರಶಸ್ತಿ ಪಡೆದ ಕ್ರೀಡಾಪಟುಗಳು:

ಓಜಸ್ ಪ್ರವೀಣ್ ಡಿಯೋಟಾಲೆ (ಆರ್ಚರಿ)

ಅದಿತಿ ಗೋಪಿಚಂದ್ ಸ್ವಾಮಿ (ಆರ್ಚರಿ)

ಶ್ರೀಶಂಕರ್ (ಅಥ್ಲೆಟಿಕ್ಸ್)

ಪಾರುಲ್ ಚೌಧರಿ (ಅಥ್ಲೆಟಿಕ್ಸ್)

ಮೊಹಮ್ಮದ್ ಹುಸಾಮುದ್ದೀನ್ (ಬಾಕ್ಸರ್)

ಆರ್ ವೈಶಾಲಿ (ಚೆಸ್)

ಮೊಹಮ್ಮದ್ ಶಮಿ (ಕ್ರಿಕೆಟ್)

ಅನುಷ್ ಅಗರ್ವಾಲ್ (ಇಕ್ವಿಸ್ಟ್ರಿಯನ್)

ದಿವ್ಯಾಕೃತಿ ಸಿಂಗ್ (ಈಕ್ವೆಸ್ಟ್ರಿಯನ್ ಡ್ರೆಸ್ಸೇಜ್)

ದೀಕ್ಷಾ ದಾಗರ್ (ಗಾಲ್ಫ್)

ಕೃಷ್ಣ ಬಹದ್ದೂರ್ ಪಾಠಕ್ (ಹಾಕಿ)

ಸುಶೀಲಾ ಚಾನು (ಹಾಕಿ)

ಪವನ್ ಕುಮಾರ್ (ಕಬಡ್ಡಿ)

ರಿತು ನೇಗಿ (ಕಬಡ್ಡಿ)

ನಸ್ರೀನ್ (ಖೋ-ಖೋ)

ಪಿಂಕಿ (ಲಾನ್ ಬಾಲ್)

ಐಶ್ವರ್ಯ ಪ್ರತಾಪ್ ಸಿಂಗ್ ತೋಮರ್ (ಶೂಟಿಂಗ್)

ಇಶಾ ಸಿಂಗ್ (ಶೂಟಿಂಗ್)

ಹರಿಂದರ್ ಪಾಲ್ ಸಿಂಗ್ (ಸ್ಕ್ವಾಷ್)

ಐಹಿಕಾ ಮುಖರ್ಜಿ (ಟೇಬಲ್ ಟೆನಿಸ್)

ಸುನಿಲ್ ಕುಮಾರ್ (ಕುಸ್ತಿ)

ಆಂಟಿಮ್ ಪಂಘಲ್ (ಕುಸ್ತಿ)

ರೋಶಿಬಿನಾ ದೇವಿ (ವುಶು)

ಶೀತಲ್ ದೇವಿ (ಪ್ಯಾರಾ ಆರ್ಚರಿ)

ಅಜಯ್ ಕುಮಾರ್ (ಅಂಧರ ಕ್ರಿಕೆಟ್)

ಪ್ರಾಚಿ ಯಾದವ್ (ಪ್ಯಾರಾ ಕೆನೋಯಿಂಗ್)

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...