ಐಪಿಎಲ್ 2025 | ಧೋನಿ ಔಟ್‌ ಇಲ್ಲದಿದ್ದರೂ ವಿವಾದಾತ್ಮಕ ತೀರ್ಪು ನೀಡಿದ ಅಂಪೈರ್

Date:

ಇಂಡಿಯನ್ ಪ್ರೀಮಿಯರ್ ಲೀಗ್​ನ 25ನೇ ಪಂದ್ಯದಲ್ಲಿ ಮೂರನೇ ಅಂಪೈರ್ ನೀಡಿದ ತೀರ್ಪು ಇದೀಗ ವಿವಾದಕ್ಕೀಡಾಗಿದೆ. ಚೆನ್ನೈನ ಚೆಪಾಕ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಕೆಕೆಆರ್ ತಂಡ ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ನಿರೀಕ್ಷಿತ ಆರಂಭ ಪಡೆದಿರಲಿಲ್ಲ.

ಸಿಎಸ್​ಕೆ ತಂಡವು 72 ರನ್​ ಕಲೆಹಾಕುವಷ್ಟರಲ್ಲಿ 7 ವಿಕೆಟ್ ಕಳೆದುಕೊಂಡಿತು. ಈ ಹಂತದಲ್ಲಿ ಕಣಕ್ಕಿಳಿದ ಮಹೇಂದ್ರ ಸಿಂಗ್ ಧೋನಿ, ಸುನಿಲ್ ನರೈನ್ ಎಸೆತದಲ್ಲಿ ಎಲ್​ಬಿ ಆದರು. ಇತ್ತ ಧೋನಿ ಎಲ್​ಬಿ ಆಗುತ್ತಿದ್ದಂತೆ ಕೆಕೆಆರ್ ಆಟಗಾರರು ಮನವಿ ಮಾಡಿದರು.
ಈ ಮನವಿಗೆ ಫೀಲ್ಡ್ ಅಂಪೈರ್ ಔಟ್ ಎಂದು ತೀರ್ಪು ನೀಡಿದ್ದಾರೆ. ಇದರ ಬೆನ್ನಲ್ಲೇ ಮಹೇಂದ್ರ ಸಿಂಗ್ ಧೋನಿ ರಿವ್ಯೂ ತೆಗೆದುಕೊಂಡಿದ್ದಾರೆ. ರಿವ್ಯೂ ವೇಳೆ ಚೆಂಡು ಧೋನಿಯ ಬ್ಯಾಟ್ ಸವರಿ ಸಾಗುತ್ತಿರುವುದು ಸ್ಪಷ್ಟವಾಗಿ ಗೋಚರಿಸಿದೆ. ಇದರಿಂದ ಅಲ್ಟ್ರಾಎಡ್ಜ್​ ಮೀಟರ್​ನಲ್ಲೂ ಸ್ಪೈಕ್​ಗಳು ಕಾಣಿಸಿಕೊಂಡಿದೆ.

ಆದರೆ ಇದನ್ನು ಸರಿಯಾಗಿ ಪರಿಶೀಲಿಸದೇ ಮೂರನೇ ಅಂಪೈರ್ ಧೋನಿಯನ್ನು ಎಲ್​ಬಿಡಬ್ಲ್ಯೂ ಎಂದು ಔಟ್ ನೀಡಿದ್ದಾರೆ. ಇತ್ತ ನಿರಾಸೆಯಿಂದಲೇ ಮಹೇಂದ್ರ ಸಿಂಗ್ ಧೋನಿ (1) ಪೆವಿಲಿಯನ್ ಕಡೆ ಹೆಜ್ಜೆ ಹಾಕಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಐಪಿಎಲ್ 2025 | ನಿವೃತ್ತಿ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಧೋನಿ

ಮಹೇಂದ್ರ ಸಿಂಗ್ ಧೋನಿ ನಾಟೌಟ್ ಆಗಿದ್ದರೂ ಔಟ್ ತೀರ್ಪು ನೀಡಿರುವ ಅಂಪೈರ್ ನಿರ್ಧಾರದ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಆಕ್ರೋಶಗಳು ವ್ಯಕ್ತವಾಗಿದೆ. ಅದರಲ್ಲೂ ಧೋನಿ ಬ್ಯಾಟ್​ಗೆ ಚೆಂಡು ತಾಗಿರುವ ಭಾವಚಿತ್ರಗಳನ್ನು ಧೋನಿ ಅಭಿಮಾನಿಗಳು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡು, ಅಂಪೈರ್ ನಿರ್ಧಾರವನ್ನು ಪ್ರಶ್ನಿಸುತ್ತಿದ್ದಾರೆ.

ಈ ಫೋಟೋಗಳು ಹಾಗೂ ವಿಡಿಯೋವನ್ನು ಪರಿಶೀಲಿಸಿದರೆ, ಮೇಲ್ನೋಟಕ್ಕೆ ನಾಟೌಟ್ ಎಂದು ಗೊತ್ತಾಗುತ್ತಿದ್ದರೂ, ಮೂರನೇ ಅಂಪೈರ್ ಔಟ್ ನೀಡಿದ್ದೇಕೆ ಎಂಬುದೇ ಈಗ ಪ್ರಶ್ನೆಯಾಗಿ ಉಳಿದಿದೆ.

ಧೋನಿಯ ಈ ವಿಕೆಟ್​ನೊಂದಿಗೆ ಇಡೀ ಪಂದ್ಯದ ಮೇಲೆ ಹಿಡಿತ ಸಾಧಿಸಿದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 20 ಓವರ್​ಗಳಲ್ಲಿ 103 ರನ್​​ಗಳಿಗೆ ನಿಯಂತ್ರಿಸುವಲ್ಲಿ ಯಶಸ್ವಿಯಾದರು. 104 ರನ್​ಗಳ ಸುಲಭ ಗುರಿಯನ್ನು ಬೆನ್ನತ್ತಿದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು 10.1 ಓವರ್​ಗಳಲ್ಲಿ 107 ರನ್ ಬಾರಿಸಿ 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

Dhoni out controvercy 1
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...