ಫ್ಯಾನ್ಸ್‌ಗಳಿಗೆ ಕುತೂಹಲ ಕೆರಳಿಸಿದ ಧೋನಿ ಫೇಸ್‌ಬುಕ್ ಪೋಸ್ಟ್

Date:

ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಎಂಎಸ್‌ ಧೋನಿ ಫೇಸ್‌ಬುಕ್‌ನಲ್ಲಿ ಹೊಸದಾಗಿ ಪೋಸ್ಟ್ ಒಂದನ್ನು ಮಾಡಿದ್ದು ಇದು ಧೋನಿ ಅಭಿಮಾನಿಗಳಲ್ಲಿ ಕುತೂಹಲ ಕೆರಳಿಸಿದೆ. 2024ರ ಐಪಿಎಲ್‌ ಟೂರ್ನಿ ಆರಂಭವಾಗಲು ಇನ್ನು ಕೆಲವೇ ವಾರಗಳು ಬಾಕಿ ಇರುವಾಗ ಧೋನಿ ಒಂದು ಸಣ್ಣ ಪೋಸ್ಟ್ ಹಾಕಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್ ಹೊಸ ಸೀಸನ್ ಇನ್ನು ಎರಡು ವಾರದಲ್ಲಿ ಆರಂಭವಾಗಲಿದ್ದು, ಮಾರ್ಚ್ 4 ರ ಸೋಮವಾರದಂದು ಎಂಎಸ್‌ ಧೋನಿ ಫೇಸ್‌ಬುಕ್‌ನಲ್ಲಿ ಪೋಸ್ಟ್ ಅನ್ನು ಮಾಡಿದ್ದಾರೆ.

ಹೊಸ ಸೀಸನ್‌ಗೆ ಮತ್ತು ನನ್ನ ಹೊಸ ‘ರೋಲ್‌’ಗೆ ಕಾಯಲಾಗುತ್ತಿಲ್ಲ. ನೀವು ಕಾಯುತ್ತಿರಿ! (“Can’t wait for the new season and the new ‘role’. Stay tuned!”) ಎಂದು ಎಂಎಸ್‌ ಧೋನಿ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಧೋನಿ

ಆದರೆ ಐಪಿಎಲ್‌ 2024ರ ಸೀಸನ್‌ ಅನ್ನೇ ಧೋನಿ ಹೊಸ ಸೀಸನ್ ಎಂದು ಉಲ್ಲೇಖಿಸಿದ್ದಾರಾ ಎಂಬುವುದು ಸ್ಪಷ್ಟವಾಗಿಲ್ಲ. ಆದರೂ ಧೋನಿ ‘ಹೊಸ ರೋಲ್’ ಎಂದು ಬರೆದುಕೊಂಡಿರುವುದರಿಂದಾಗಿ ಈ ಪೋಸ್ಟ್ ವೈರಲ್ ಆಗುತ್ತಿದೆ.

ನೆಟ್ಟಿಗರು ಮಾತ್ರ ಕುತೂಹಲಗೊಂಡಿದ್ದಾರೆ. ಕೆಲವರು ಏನೇ ಆದರೂ ಒಳ್ಳೆಯದಾಗಲಿ ಮಹಿ ಎಂದು ಕಾಮೆಂಟ್ ಮಾಡಿದರೆ, ಇನ್ನು ಕೆಲವರು ನಿಮ್ಮನ್ನು ನಾವು 2025 ರ ಐಪಿಎಲ್‌ನಲ್ಲಿ ಭೇಟಿಯಾಗುತ್ತೇವೆ ಎಂದು ಬರೆದುಕೊಂಡಿದ್ದಾರೆ. ಏನೇ ಆದರೂ ನಾವು ನಿಮ್ಮ ಪರವಾಗಿಯೇ ಇರುತ್ತೇವೆ ಎಂದು ಕೆಲವು ಅಭಿಮಾನಿಗಳು ಹೇಳಿದ್ದು, ಬಹುತೇಕ ಅಭಿಮಾನಿಗಳು ಶುಭಾಶಯ ತಿಳಿಸಿದ್ದಾರೆ. ನಿಮ್ಮ ಹೆಲಿಕಾಪ್ಟರ್ ಶಾಟ್‌ ನೋಡಲು ಕಾಯುತ್ತಿದ್ದೇವೆ ಎಂದೂ ಅಭಿಮಾನಿಗಳು ಕಾಮೆಂಟ್ ಮಾಡಿದ್ದಾರೆ.

2023 ರ ಐಪಿಎಲ್ ಬಳಿಕ ಧೋನಿ ಬಳಿಕ ಐಪಿಎಲ್‌ ಟ್ರೋಫಿ ಗೆದ್ದು ನಿವೃತ್ತಿಯಾಗುತ್ತೀರಾ ಎಂದು ಕೇಳಲಾಗಿತ್ತು. ಆ ಸಂದರ್ಭದಲ್ಲಿ ಧೋನಿ ನಿವೃತ್ತಿಯಾದರೆ ಉತ್ತಮವಾಗುತ್ತದೆ ಎಂದು ಹೇಳಿದ್ದರು. ಆದರೆ ನನ್ನ ದೇಹ ಬೆಂಬಲ ನೀಡಿದರೆ ತಾನು ಮುಂದಿನ ಸೀಸನ್‌ನಲ್ಲಿ ಸಿಎಸ್‌ಕೆ ನಾಯಕನ ಸಾಮರ್ಥ್ಯದಲ್ಲಿ ಮತ್ತೆ ಆಗಮಿಸುತ್ತೇನೆ ಎಂದು ಹೇಳಿದ್ದರು.

WhatsApp Image 2025 11 17 at 4.20.34 PM
+ posts

ಪತ್ರಕರ್ತೆ, 2019ರಿಂದ ಪತ್ರಿಕೋದ್ಯಮವೇ ಬದುಕು. ರಾಜಕೀಯ, ಬ್ಯುಜಿನೆಸ್‌ ಸುದ್ದಿಗಳಲ್ಲಿ ಆಸಕ್ತಿ.

ಪೋಸ್ಟ್ ಹಂಚಿಕೊಳ್ಳಿ:

ಮಯೂರಿ ಬೋಳಾರ್
ಮಯೂರಿ ಬೋಳಾರ್
ಪತ್ರಕರ್ತೆ, 2019ರಿಂದ ಪತ್ರಿಕೋದ್ಯಮವೇ ಬದುಕು. ರಾಜಕೀಯ, ಬ್ಯುಜಿನೆಸ್‌ ಸುದ್ದಿಗಳಲ್ಲಿ ಆಸಕ್ತಿ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...