ಐಪಿಎಲ್ 2025 | ಸಿಎಸ್‌ಕೆ ತಂಡದಿಂದ ರುತುರಾಜ್‌ ನಿರ್ಗಮನ; ಪೂರ್ಣ ಟೂರ್ನಿಗೆ ಧೋನಿ ನಾಯಕ

Date:

ಹಿರಿಯ ಆಟಗಾರ ಮಹೇಂದ್ರ ಸಿಂಗ್ ಧೋನಿ ಮತ್ತೆ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ನಾಯಕರಾಗಿ ವಾಪಸಾತಿ ಮಾಡಿದ್ದಾರೆ.

ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ಹಾಲಿ ನಾಯಕ ರುತುರಾಜ್‌ ಗಾಯಕ್ವಾಡ್‌ ಅವರು ಮೊಣಕೈ ಗಾಯದ ಸಮಸ್ಯೆಗೆ ತುತ್ತಾಗಿದ್ದು, ಇಡೀ ಟೂರ್ನಿಯಿಂದಲೇ ಹೊರಗುಳಿದಿದ್ದಾರೆ. ಹೀಗಾಗಿ ಬಾಕಿ ಉಳಿದಿರುವ 9 ಪಂದ್ಯಗಳಿಗೆ ಎಂ.ಎಸ್‌ ಧೋನಿ ಅವರೇ ನಾಯಕತ್ವ ವಹಿಸಲಿದ್ದಾರೆ ಎಂದು ಮುಖ್ಯ ಕೋಚ್‌ ಸ್ಟೀಫನ್ ಫ್ಲೆಮಿಂಗ್ ಖಚಿತಪಡಿಸಿದ್ದಾರೆ.

ನಾಳೆ (ಏ.11) ಕೋಲ್ಕತ್ತಾ ವಿರುದ್ಧ ಚೆನ್ನೈ ಸೂಪರ್‌ ಕಿಂಗ್ಸ್‌ ತನ್ನ ಸರದಿಯ 6ನೇ ಪಂದ್ಯವನ್ನಾಡಲಿದೆ. ಇತ್ತೀಚೆಗೆ ರಾಜಸ್ಥಾನ್‌ ರಾಯಲ್ಸ್‌ ವಿರುದ್ಧ ನಡೆದ ಪಂದ್ಯದಲ್ಲಿ ತುಷಾರ್‌ ದೇಶ್‌ಪಾಂಡೆ ಅವರ ಬೌಲಿಂಗ್‌ನಲ್ಲಿ ಚೆಂಡು ರುತುರಾಜ್‌ ಅವರ ಬಲ ಮೊಣಕೈಗೆ ಬಲವಾಗಿ ಬಡಿದಿತ್ತು. ಈ ವೇಳೆ ಕೊಂಚ ಬ್ರೇಕ್‌ ತೆಗೆದುಕೊಂಡಿದ್ದ ರುತುರಾಜ್‌ ತಂಡಕ್ಕಾಗಿ ಬ್ಯಾಟಿಂಗ್‌ ಮುಂದುವರಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಐಪಿಎಲ್ 2025 | ಇಂದು ಆರ್‌ಸಿಬಿ – ಮುಂಬೈ ಹಣಾಹಣಿ; ಇಬ್ಬರಲ್ಲಿ ಯಾರು ಬಲಿಷ್ಠರು?

ಆದರೆ ಆ ಪಂದ್ಯದಲ್ಲಿ ಸಿಎಸ್‌ಕೆ ಸೋಲು ಕಂಡಿತು. ಇನ್ನೂ ಏಪ್ರಿಲ್‌ 8ರಂದು ಪಂಜಾಬ್ ಕಿಂಗ್ಸ್‌ ವಿರುದ್ಧದ ಪಂದ್ಯದಲ್ಲಿಯೂ ರುತುರಾಜ್‌ ಬ್ಯಾಟಿಂಗ್‌ ವೈಫಲ್ಯ ಎದುರಿಸಿದ್ದರು. ಇದೀಗ ಮೊಣಕೈ ಗಾಯದ ಸಮಸ್ಯೆ ಉಲ್ಬಣಗೊಂಡಿದ್ದು, ಪ್ರಸ್ತುತ ಐಪಿಎಲ್‌ ಟೂರ್ನಿಯಿಂದಲೇ ಅವರು ಹೊರಗುಳಿಯಲಿದ್ದಾರೆ ಎಂದು ಸಿಎಸ್‌ಕೆ ಮುಖ್ಯ ಕೋಚ್‌ ತಿಳಿಸಿದ್ದಾರೆ.

2023ರ ಆವೃತ್ತಿಯಲ್ಲಿ ಸಿಎಸ್‌ಕೆ ತಂಡ ಎಂ ಎಸ್‌ ಧೋನಿ ನಾಯಕತ್ವದಲ್ಲಿ 5ನೇ ಬಾರಿಗೆ ಚಾಂಪಿಯನ್‌ ಪಟ್ಟ ಗೆದ್ದುಕೊಂಡಿತ್ತು. ಆ ಬಳಿಕ ಧೋನಿ ತಮ್ಮ ನಾಯಕತ್ವಕ್ಕೆ ಗುಡ್‌ಬೈ ಹೇಳಿದ್ದರು. 2024ರ ಆವೃತ್ತಿಯಿಂದ ರುತುರಾಜ್‌ ಗಾಯಕ್ವಾಡ್‌ ಸಿಎಸ್‌ಕೆ ತಂಡದ ನಾಯಕನಾಗಿ ಮುಂದುವರಿಯುತ್ತಿದ್ದಾರೆ. ಪ್ರಸಕ್ತ ಆವೃತ್ತಿಯಲ್ಲಿ 5 ಪಂದ್ಯಗಳನ್ನಾಡಿರುವ ಸಿಎಸ್‌ಕೆ ತಂಡ ಕೇವಲ 1ರಲ್ಲಿ ಮಾತ್ರ ಗೆಲುವು ಸಾಧಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...