ರಣಜಿ ಟ್ರೋಫಿ: ಟೀಂ ಇಂಡಿಯಾದ 7 ಆಟಗಾರರಿದ್ದರೂ 120 ರನ್‌ಗೆ ಮುಂಬೈ ಆಲೌಟ್

Date:

ಇಂದಿನಿಂದ ನಡೆಯುತ್ತಿರುವ ರಣಜಿ ಟ್ರೋಫಿಯ ಮುಂಬೈ ಮತ್ತು ಜಮ್ಮು-ಕಾಶ್ಮೀರ ತಂಡಗಳ ನಡುವಿನ ಪಂದ್ಯದಲ್ಲಿ ಮುಂಬೈ ತಂಡದಲ್ಲಿ ನಾಯಕ ರೋಹಿತ್ ಶರ್ಮಾ ಒಳಗೊಂಡು ಟೀಮ್ ಇಂಡಿಯಾದ ಪರ 7 ಆಟಗಾರರು ಪ್ರತಿನಿಧಿಸಿದ್ದರೂ ಮೊದಲ ಇನಿಂಗ್ಸ್‌ನಲ್ಲಿ 120 ರನ್‌ಗಳಿಗೆ ಆಲೌಟ್‌ ಆಗಿದೆ.

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ ರಣಜಿ ಟೂರ್ನಿಯ ಗ್ರೂಪ್-ಎ ಪಂದ್ಯದಲ್ಲಿ ಮುಂಬೈ ಮತ್ತು ಜಮ್ಮು-ಕಾಶ್ಮೀರ ತಂಡಗಳು ಮುಖಾಮುಖಿಯಾಗಿವೆ. ಮುಂಬೈ ತಂಡದ 11ರ ಬಳಗದಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ 7 ಆಟಗಾರರು ಕಾಣಿಸಿಕೊಂಡಿದ್ದಾರೆ. ಇವರಲ್ಲಿ 6 ಆಟಗಾರರು ಟೀಮ್ ಇಂಡಿಯಾ ಪರ ಕಣಕ್ಕಿಳಿದಿದ್ದರೆ, ಓರ್ವ ಭಾರತ ತಂಡದ ಭಾಗವಾಗಿದ್ದರು.

ಈ ಮೂಲಕ ರಣಜಿ ಟೂರ್ನಿ ಇತಿಹಾಸದಲ್ಲೇ ಭಾರತ ತಂಡವನ್ನು ಪ್ರತಿನಿಧಿಸಿದ 7 ಆಟಗಾರರನ್ನು ಜೊತೆಯಾಗಿ ಕಣಕ್ಕಿಳಿಸಿದ ಕೀರ್ತಿಗೆ ಮುಂಬೈ ತಂಡ ಪಾತ್ರವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಂಬೈ ತಂಡದಲ್ಲಿ ಕಾಣಿಸಿಕೊಂಡ ಟೀಮ್ ಇಂಡಿಯಾ ಆಟಗಾರರು: ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ಅಜಿಂಕ್ಯ ರಹಾನೆ, ಶ್ರೇಯಸ್ ಅಯ್ಯರ್, ಶಿವಂ ದುಬೆ, ಶಾರ್ದೂಲ್ ಠಾಕೂರ್, ತನುಷ್ ಕೋಟ್ಯಾನ್

ಈ ಏಳು ಆಟಗಾರರಲ್ಲಿ ತನುಷ್ ಕೋಟ್ಯಾನ್ ಭಾರತ ತಂಡದ ಪರ ಕಣಕ್ಕಿಳಿದಿಲ್ಲ. ಆದಾಗ್ಯೂ ಅವರು ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಗೆ ಆಯ್ಕೆ ಮಾಡಲಾದ ಭಾರತ ತಂಡದ ಭಾಗವಾಗಿದ್ದರು. ಈ ಮೂಲಕ ಟೀಮ್ ಇಂಡಿಯಾದ ಏಳು ಆಟಗಾರರನ್ನು ಕಣಕ್ಕಿಳಿಸಿ ಮುಂಬೈ ರಣಜಿ ಟೂರ್ನಿಯಲ್ಲಿ ಹೊಸ ಇತಿಹಾಸ ಬರೆದಿದೆ.

ಈ ಸುದ್ದಿ ಓದಿದ್ದೀರಾ? ಕ್ರಿಕೆಟ್ | ಬಿಸಿಸಿಐನ ಕೆಟ್ಟ ರಾಜಕಾರಣದಿಂದ ಮರೆಯಾದ ಮಿಂಚಿನ ಆಟಗಾರರು

ಮುಂಬೈ 11ರ ಬಳಗ: ಯಶಸ್ವಿ ಜೈಸ್ವಾಲ್ , ರೋಹಿತ್ ಶರ್ಮಾ , ಅಜಿಂಕ್ಯ ರಹಾನೆ (ನಾಯಕ) , ಶ್ರೇಯಸ್ ಅಯ್ಯರ್ , ಹಾರ್ದಿಕ್ ತಮೋರ್ ( ವಿಕೆಟ್ ಕೀಪರ್ ) , ಶಿವಂ ದುಬೆ , ಶಾರ್ದೂಲ್ ಠಾಕೂರ್ , ಶಮ್ಸ್ ಮುಲಾನಿ , ತನುಷ್ ಕೋಟ್ಯಾನ್ , ಮೋಹಿತ್ ಅವಸ್ತಿ , ಕರ್ಶ್ ಕೊಠಾರಿ.

ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಮುಂಬೈ ತಂಡವು ಮೊದಲ ಇನಿಂಗ್ಸ್‌ನಲ್ಲಿ ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ವಿಫಲವಾಗಿದೆ. ಜಮ್ಮು ಕಾಶ್ಮೀರ ಬೌಲರ್​​ಗಳ ಕರಾರುವಾಕ್ ದಾಳಿಗೆ ತತ್ತರಿಸಿದ ಮುಂಬೈ 47 ರನ್​ಗಳಿಸುವಷ್ಟರಲ್ಲಿ 7 ವಿಕೆಟ್ ಕಳೆದುಕೊಂಡಿತು.

ರೋಹಿತ್ ಶರ್ಮಾ(3),ಯಶಸ್ವಿ ಜೈಸ್ವಾಲ್(4),ಶಿವಂ ದುಬೆ(0),ಶ್ರೇಯಸ್ ಅಯ್ಯರ್(11) ರನ್‌ ಮಾತ್ರ ಗಳಿಸಿ ವಿಫಲರಾದರು.

ಈ ಹಂತದಲ್ಲಿ ಕಣಕ್ಕಿಳಿದ ಶಾರ್ದೂಲ್ ಠಾಕೂರ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. 57 ಎಸೆತಗಳನ್ನು ಎದುರಿಸಿದ ಶಾರ್ದೂಲ್ 2 ಸಿಕ್ಸ್ ಹಾಗೂ 5 ಫೋರ್​ಗಳೊಂದಿಗೆ 51 ರನ್ ಬಾರಿಸಿದ್ದಾರೆ. ಈ ಮೂಲಕ ಮುಂಬೈ ತಂಡವು ಪ್ರಥಮ ಇನಿಂಗ್ಸ್​ನಲ್ಲಿ 33.2 ಓವರ್‌ಗಳಲ್ಲಿ 120 ರನ್ ಬಾರಿಸಿ ಆಲೌಟ್ ಆಗಿದೆ.

ಜಮ್ಮು ಕಾಶ್ಮೀರ ಪರ 11 ಓವರ್ ಎಸೆದ ಉಮರ್ ನಝೀರ್ 31 ರನ್ ನೀಡಿ 4 ವಿಕೆಟ್ ಪಡೆದರೆ, ಯುದುವೀರ್ ಸಿಂಗ್ 8.2 ಓವರ್​ಗಳಲ್ಲಿ 31 ರನ್​ ನೀಡಿ 4 ವಿಕೆಟ್ ಕಬಳಿಸಿದ್ದಾರೆ.

ಮೊದಲ ಇನಿಂಗ್ಸ್ ಆರಂಭಿಸಿರುವ ಜಮ್ಮು ಮತ್ತು ಕಾಶ್ಮೀರ 40.3 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 171 ರನ್‌ ಗಳಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...