ಐಪಿಎಲ್ | ಸೋಲಿನಿಂದ ಆರಂಭಿಸಿ, ಸೋಲಿನಿಂದಲೇ ಅಭಿಯಾನ ಅಂತ್ಯಗೊಳಿಸಿದ ಮುಂಬೈ ಇಂಡಿಯನ್ಸ್‌

Date:

ನೂತನ ನಾಯಕ ಹಾರ್ದಿಕ್ ಪಾಂಡ್ಯಾ ನೇತೃತ್ವದಲ್ಲಿ 2024ರ ಐಪಿಎಲ್‌ನ ಅಭಿಯಾನ ಆರಂಭಿಸಿದ್ದ ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್, ಸೋಲಿನಿಂದ ಅಭಿಯಾನ ಆರಂಭಿಸಿ, ಸೋಲಿನಿಂದಲೇ ಅಂತ್ಯಗೊಳಿಸಿದೆ.

ಲಕ್ನೋ ಸೂಪರ್‌ ಜೈಂಟ್ಸ್‌ ವಿರುದ್ಧ ಮುಂಬೈಯ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಲೀಗ್‌ನ ತಮ್ಮ ಪಾಲಿನ ಕೊನೆಯ ಪಂದ್ಯದಲ್ಲಿ 18 ರನ್‌ಗಳಿಂದ ಸೋತಿದೆ. ಆ ಮೂಲಕ ಲೀಗ್‌ನಲ್ಲಿ ಒಟ್ಟು ಆಡಿದ 14 ಪಂದ್ಯದಲ್ಲಿ 10 ರಲ್ಲಿ ಸೋತಿದ್ದು, ಕೇವಲ ನಾಲ್ಕರಲ್ಲಿ ಗೆಲುವು ಸಾಧಿಸಿದೆ. ಅಲ್ಲದೇ, ಅಂಕಪಟ್ಟಿಯನ್ನು 10ನೇ ಹಾಗೂ ಕೊನೆಯ ಸ್ಥಾನದೊಂದಿಗೆ ಐಪಿಎಲ್ ಅಭಿಯಾನ ಅಂತ್ಯಗೊಳಿಸಿದೆ.

ಕಳೆದ ಮಾರ್ಚ್ 24ರಂದು ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಗುಜರಾತ್‌ ವಿರುದ್ಧ ಮೊದಲ ಪಂದ್ಯವನ್ನಾಡುವ ಮೂಲಕ ಮುಂಬೈ ಇಂಡಿಯನ್ಸ್‌, 2024ರ ಅಭಿಯಾನ ಆರಂಭಿಸಿತ್ತು. ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌, 6 ರನ್‌ಗಳಿಂದ ಸೋಲು ಅನುಭವಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ್ದ ಲಕ್ನೋ ತಂಡವು, ನಿಕೊಲಸ್ ಪೂರನ್ ಅವರ ಸ್ಫೋಟಕ ಅರ್ಧಶತಕದ(75, 29 ಎಸೆತ,8 ಸಿಕ್ಸರ್, 5 ಬೌಂಡರಿ) ಹಾಗೂ ನಾಯಕ ಕೆ ಎಲ್ ರಾಹುಲ್ ಅವರ ಅರ್ಧಶತಕ(55 ರನ್, 41 ಎಸೆತ)ದ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು 214 ರನ್ ಗಳಿಸಿತ್ತು.

ಈ ಗುರಿಯನ್ನು ಬೆನ್ನತ್ತಿದ ಹಾರ್ದಿಕ್ ಪಾಂಡ್ಯಾ ನೇತೃತ್ವದ ಮುಂಬೈ ಇಂಡಿಯನ್ಸ್, ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು 196 ರನ್ ಗಳಿಸಲಷ್ಟೇ ಶಕ್ತವಾಯಿತು. ಆ ಮೂಲಕ 18 ರನ್‌ಗಳಿಂದ ಲಕ್ನೋ ವಿರುದ್ಧ ಸೋಲೊಪ್ಪಿಕೊಂಡಿತು.

ಮುಂಬೈ ಪರವಾಗಿ ಆರಂಭಿಕ ಆಟಗಾರ ರೋಹಿತ್ ಶರ್ಮಾ 68 ರನ್ ಹಾಗೂ ಕೊನೆಯಲ್ಲಿ ನಮನ್ ಧೀರ್ 62 ರನ್ ಗಳಿಸಿ, ಮಿಂಚಿದರು. ಲಕ್ನೋ ಪರ ಬೌಲಿಂಗ್‌ನಲ್ಲಿ ರವಿ ಬಿಷ್ಣೋಯ್ ಹಾಗೂ ನವೀನುಲ್ ಹಕ್ ಎರಡು ವಿಕೆಟ್ ಗಳಿಸಿದರೆ, ಕೃನಾಲ್ ಪಾಂಡ್ಯಾ ಹಾಗೂ ಮೊಹ್ಸಿನ್ ಖಾನ್ ತಲಾ ಒಂದೊಂದು ವಿಕೆಟ್ ಗಳಿಸುವಲ್ಲಿ ಯಶಸ್ವಿಯಾದರು.

6ನೇ ಸ್ಥಾನದಲ್ಲಿ ಉಳಿದುಕೊಂಡ ಲಕ್ನೋ

ಪ್ಲೇ ಆಫ್‌ ರೇಸ್‌ನಲ್ಲಿದ್ದ ಲಕ್ನೋ ತಂಡವು, ಡೆಲ್ಲಿ ವಿರುದ್ಧದ ಕಳೆದ ಪಂದ್ಯದಲ್ಲಿ ಸೋತಿದ್ದರಿಂದ ಬಹುತೇಕ ಪ್ಲೇ ಆಫ್‌ ರೇಸ್‌ನಿಂದ ದೂರವಾಗಿತ್ತು. ಮುಂಬೈ ವಿರುದ್ಧದ ಕೊನೆಯ ಪಂದ್ಯದಲ್ಲಿ 18 ರನ್‌ಗಳಿಂದ ಗೆಲ್ಲುವ ಮೂಲಕ ಅಂಕಪಟ್ಟಿಯಲ್ಲಿ 6ನೇ ಸ್ಥಾನದಲ್ಲಿ ಉಳಿದುಕೊಂಡಿದೆ. ಆ ಮೂಲಕ 14 ಪಂದ್ಯಗಳಲ್ಲಿ 7 ಗೆಲುವು, 7 ಸೋಲಿನೊಂದಿಗೆ ಅಭಿಯಾನ ಅಂತ್ಯಗೊಳಿಸಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...