ಪಾಂಡ್ಯ ಸಹೋದರರಿಗೆ ಕೋಟ್ಯಂತರ ರೂ. ವಂಚನೆ: ಮಲ ಸಹೋದರನ ಬಂಧನ

Date:

ಟೀಂ ಇಂಡಿಯಾ ಕ್ರಿಕೆಟಿಗರಾದ ಹಾರ್ದಿಕ್ ಪಾಂಡ್ಯ ಹಾಗೂ ಕೃನಾಲ್‌ ಪಾಂಡ್ಯಾ ಅವರಿಗೆ ಉದ್ಯಮದಲ್ಲಿ ಕೋಟ್ಯಂತರ ರೂ. ವಂಚಿಸಿದ ಮಲ ಸಹೋದರ ವೈಭವ್‌ ಪಾಂಡ್ಯನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.

ಪೊಲೀಸರ ವರದಿಯ ಪ್ರಕಾರ ವೈಭವ್‌ ಪಾಂಡ್ಯ ಪಾಲುದಾರಿಕೆ ಉದ್ಯಮದ 4.3 ಕೋಟಿ ರೂ. ಹಣವನ್ನು ಬೇರೆ ಕಡೆ ಹೂಡಿದ್ದ. ಇದರಿಂದ ಹಾರ್ದಿಕ್ ಪಾಂಡ್ಯ ಹಾಗೂ ಕೃನಾಲ್ ಪಾಂಡ್ಯಗೆ ಸಾಕಷ್ಟು ನಷ್ಟ ಉಂಟಾಗಿತ್ತು. ವೈಭವ್‌ನನ್ನು ಏಪ್ರಿಲ್ 10ರಂದು ಬಂಧಿಸಿ ವಂಚನೆ ಹಾಗೂ ನಕಲಿ ಸಹಿ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ.

ಮೂವರು ಸಹೋದರರಾದ ಹಾರ್ದಿಕ್, ಕೃನಾಲ್ ಹಾಗೂ ವೈಭವ್ 2021ರಲ್ಲಿ ಪಾಲಿಮರ್ ಉದ್ಯಮವನ್ನು ಆರಂಭಿಸಿದ್ದರು. ಪಾಲುದಾರಿಕೆ ಒಪ್ಪಂದದಂತೆ ಹಾರ್ದಿಕ್, ಕೃನಾಲ್ ಬಂಡವಾಳದ ಶೇ.40 ರಷ್ಟು ಹೂಡಿದ್ದರೆ ವೈಭವ್‌ ಶೇ.20 ರಷ್ಟನ್ನು ತೊಡಗಿಸಿದ್ದರು. ಲಾಭವು ಕೂಡ ಹೂಡಿಕೆ ಹಣದಂತೆಗೆ ಬರಬೇಕೆಂದು ಒಪ್ಪಂದವಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕಾಂಗ್ರೆಸ್ ಪ್ರಣಾಳಿಕೆ- ಸುಳ್ಳು ಸುಳ್ಳೇ ಮುಸ್ಲಿಮ್ ಲೀಗ್ ಮೊಹರು ಹಾಕಿದ ಮೋದಿ

ಆದರೆ ವೈಭವ್ ಒಪ್ಪಂದವನ್ನು ಮುರಿದು ಲಾಭದ ಹಣವನ್ನು ಪಾಂಡ್ಯ ಸಹೋದರರಿಗೆ ತಿಳಿಯದಂತೆ ಬೇರೊಂದು ಕಂಪನಿಯಲ್ಲಿ ತೊಡಗಿಸಿದ್ದರು. ಇದರಿಂದ ಪಾಂಡ್ಯ ಸಹೋದರರಿಗೆ 4.3 ಕೋಟಿ ರೂ.ಗೂ ಹೆಚ್ಚು ನಷ್ಟ ಉಂಟಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಸದ್ಯ ನಡೆಯುತ್ತಿರುವ ಐಪಿಎಲ್‌ನಲ್ಲಿ ಹಾರ್ದಿಕ್ ಪಾಂಡ್ಯ ಮುಂಬೈ ಇಂಡಿಯನ್ಸ್ ತಂಡದ ನಾಯಕನಾಗಿದ್ದರೆ, ಕೃನಾಲ್ ಪಾಂಡ್ಯ ಲಖನೌ ಸೂಪರ್ ಜೈಂಟ್ಸ್ ತಂಡದ ಆಟಗಾರರಾಗಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...