3ನೇ ಟೆಸ್ಟ್‌ | ಶತಕ ವಂಚಿತ ಶುಭಮನ್ ಗಿಲ್: ಟೀಮ್ ಇಂಡಿಯಾಕ್ಕೆ 28 ರನ್ ಮುನ್ನಡೆ

Date:

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಮೂರನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಮೊದಲ ಇನ್ನಿಂಗ್ಸ್‌ನಲ್ಲಿ ಆರಂಭಿಕ ಆಘಾತ ಅನುಭವಿಸಿತ್ತು. ಈ ವೇಳೆ ಮಧ್ಯಮ ಕ್ರಮಾಂಕದಲ್ಲಿ ಉತ್ತಮ ಬ್ಯಾಟಿಂಗ್ ನಡೆಸಿ ಆಪದ್ಬಾಂಧವನಾದ ಶುಭಮನ್ ಗಿಲ್ ಅವರ ಸಮಯೋಚಿತ ಬ್ಯಾಟಿಂಗ್ ಪ್ರದರ್ಶನದಿಂದ ಮೊದಲ ಇನ್ನಿಂಗ್ಸ್‌ನಲ್ಲಿ 28 ರನ್‌ಗಳ ಮುನ್ನಡೆ ಸಾಧಿಸುವಲ್ಲಿ ಯಶಸ್ವಿಯಾಗಿದೆ.

ನ್ಯೂಝಿಲೆಂಡ್ ವಿರುದ್ಧದ ಮೂರನೆಯ ಟೆಸ್ಟ್ ಪಂದ್ಯದಲ್ಲಿ ಭಾರತವು 263 ರನ್‌ಗಳಿಗೆ ಆಲೌಟ್ ಆಗಿದ್ದು, 28 ರನ್‌ಗಳ ಮುನ್ನಡೆ ಸಾಧಿಸಿದೆ. ಸಮಯೋಚಿತ ಬ್ಯಾಟಿಂಗ್ ಪ್ರದರ್ಶನ ನೀಡಿದ್ದ ಶುಭಮನ್ ಗಿಲ್ ಅವರು, 90 ರನ್ ಗಳಿಸಿದ್ದ ವೇಳೆ ಇಜಾಝ್ ಪಟೇಲ್ ಅವರ ಓವರ್‌ನಲ್ಲಿ ಮಿಚೆಲ್‌ಗೆ ಕ್ಯಾಚಿತ್ತು ನಿರ್ಗಮಿಸುವ ಮೂಲಕ ಶತಕ ವಂಚಿತರಾದರು.

ಮೊದಲ ಇನ್ನಿಂಗ್ಸ್ ಆರಂಭಿಸಿದ್ದ ಟೀಮ್ ಇಂಡಿಯಾದ ಬ್ಯಾಟಿಂಗ್ ವಿಭಾಗವು ಆರಂಭದಲ್ಲಿ ಕೈಕೊಟ್ಟಿದ್ದರಿಂದ ಮೊದಲ ದಿನದಾಟಕ್ಕೆ ಪ್ರಮುಖ ನಾಲ್ಕು ವಿಕೆಟ್‌ಗಳನ್ನು ಕಳೆದುಕೊಂಡು ಕೇವಲ 86 ರನ್ ಗಳಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎರಡನೆ ದಿನದಾಟಕ್ಕಾಗಿ ಕ್ರೀಸ್ ಕಾಯ್ದಿರಿಸಿಕೊಂಡಿದ್ದ ಶುಭಮನ್ ಗಿಲ್ ಹಾಗೂ ರಿಷಭ್ ಪಂತ್ 5ನೇ ವಿಕೆಟ್‌ಗೆ 96 ರನ್‌ಗಳ ಜೊತೆಯಾಟ ನಡೆಸುವಲ್ಲಿ ಯಶಸ್ವಿಯಾದರು. ಟೆಸ್ಟ್ ಕ್ರಿಕೆಟ್‌ನಲ್ಲೂ ಆಕ್ರಮಣಕಾರಿ ಬ್ಯಾಟಿಂಗ್ ಪ್ರದರ್ಶಿಸಿದ ರಿಷಭ್ ಪಂತ್, ಕೇವಲ 59 ಎಸೆತಗಳನ್ನು ಎದುರಿಸಿ ಎಂಟು ಬೌಂಡರಿ ಹಾಗೂ ಎರಡು ಸಿಕ್ಸರ್‌ಗಳ ನೆರವಿನಿಂದ 60 ರನ್ ಕಲೆ ಹಾಕಿದರು. ಬಳಿಕ ಐಶ್ ಸೋಧಿ ಎಸೆತದಲ್ಲಿ ಎಲ್‌ಬಿಡಬ್ಲ್ಯೂ ಬಲೆಗೆ ಬಿದ್ದರು.

ರಕ್ಷಣಾತ್ಮಕ ಬ್ಯಾಟಿಂಗ್ ಪ್ರದರ್ಶಿಸಿದ ಬಲಗೈ ಬ್ಯಾಟರ್ ಶುಭಮನ್ ಗಿಲ್, 146 ಎಸೆತಗಳಲ್ಲಿ ಏಳು ಬೌಂಡರಿ ಹಾಗೂ ಒಂದು ಸಿಕ್ಸರ್ ನೆರವಿನಿಂದ 90 ರನ್ ಗಳಿಸಿದ್ದ ವೇಳೆ ಇಜಾಝ್ ಪಟೇಲ್ ಅವರಿಗೆ ವಿಕೆಟ್ ಒಪ್ಪಿಸುವ ಮೂಲಕ ಶತಕ ವಂಚಿತರಾದರು. ಕೊನೆಯಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದ ವಾಷಿಂಗ್ಟನ್ ಸುಂದರ್, 2 ಸಿಕ್ಸ್‌, 4 ಬೌಂಡರಿಯ ನೆರವಿನಿಂದ 38 ರನ್ ಗಳಿಸಿ, ಔಟಾಗದೇ ಉಳಿದರು.

ಇದನ್ನು ಓದಿದ್ದೀರಾ? ‘ವಕ್ಫ್‌ ಆಸ್ತಿ ಅಲ್ಲಾಹನದ್ದು, ಮರಳಿ ಪಡೆಯಲು ಕಾಂಪ್ರಮೈಸ್‌ ಬೇಡ’ ಎಂದಿದ್ದ ಬೊಮ್ಮಾಯಿ; ಇಲ್ಲಿದೆ ದಾಖಲೆ

ಆರಂಭಿಕ ಆಘಾತದಿಂದ ಚೇತರಿಸಿಕೊಂಡ ಟೀಮ್ ಇಂಡಿಯಾ ಮೊದಲ ಇನ್ನಿಂಗ್ಸ್‌ನಲ್ಲಿ 263 ರನ್‌ಗಳಿಗೆ ಆಲೌಟ್ ಆಗಿದ್ದು, 28 ರನ್‌ಗಳ ಮುನ್ನಡೆ ಸಾಧಿಸಿದೆ. ನ್ಯೂಝಿಲ್ಯಾಂಡ್ ಪರವಾಗಿ ಬೌಲಿಂಗ್‌ನಲ್ಲಿ ಮಿಂಚಿದ ಇಜಾಝ್ ಪಟೇಲ್, 103 ರನ್‌ಗೆ 5 ವಿಕೆಟ್ ಕಿತ್ತು ಮಿಂಚಿದರು.

ಎರಡನೇ ಇನ್ನಿಂಗ್ಸ್ ಆರಂಭಿಸಿರುವ ನ್ಯೂಝಿಲ್ಯಾಂಡ್, ಟೀಮ್ ಇಂಡಿಯಾ ಬೌಲರ್ ಆಕಾಶ್ ದೀಪ್ ಎಸೆದ ಮೊದಲ ಓವರ್‌ನಲ್ಲೆ ನಾಯಕ ಟಾಮ್ ಲಾಥಮ್ ಅವರ ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...