ನಾಡಾದಿಂದ ಬಜರಂಗ್ ಪುನಿಯಾಗೆ ಮತ್ತೆ ಅಮಾನತು ಶಿಕ್ಷೆ

Date:

ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ(ನಾಡಾ) ಒಲಿಂಪಿಕ್‌ ಕಂಚಿನ ಪದಕ ವಿಜೇತ ಕುಸ್ತಿಪಟು ಬಜರಂಗ್‌ ಪುನಿಯಾ ಅವರಿಗೆ ಎರಡನೇ ಬಾರಿ ಅಮಾನತುಗೊಳಿಸಿದೆ. ಆರೋಪದ ಬಗ್ಗೆ ನೋಟಿಸ್ ನೀಡದ ಕಾರಣ ಉದ್ದೀಪನ ಮದ್ದು ತಡೆ ಶಿಸ್ತು ಸಮಿತಿ(ಎಡಿಡಿಪಿ) ಈ ಹಿಂದೆ ಪುನಿಯಾ ಅವರ ಅಮಾನತನ್ನು ಹಿಂಪಡೆದಿತ್ತು.

ಮಾರ್ಚ್‌ 10 ರಂದು ಸೋನಾಪೇಟೆಯಲ್ಲಿ ನಡೆದ ಒಲಿಂಪಿಕ್ಸ್‌ ಪೂರ್ವಭಾವಿ ಆಯ್ಕೆಯಲ್ಲಿ ಮೂತ್ರ ಮಾದರಿ ನೀಡದ ಕಾರಣ ನಾಡಾ ಏ.23 ರಂದು ಟೊಕೊಯೊ ಒಲಿಂಪಿಕ್ಸ್ ಕಂಚಿನ ಪದಕ ವಿಜೇತ ಬಜರಂಗ್‌ ಪುನಿಯಾ ಅವರನ್ನು ಅಮಾನತುಗೊಳಿಸಲಾಗಿತ್ತು. ಅದೇ ರೀತಿ ವಿಶ್ವ ಕುಸ್ತಿ ಆಡಳಿತ ಮಂಡಳಿ ಕೂಡ ಅಮಾನತುನ್ನು ಊರ್ಜಿತಗೊಳಿಸಿತ್ತು.

ನಾಡಾ ತಮಗೆ ನೋಟಿಸ್ ನೀಡುವ ತನಕ ಅಮಾನತನ್ನು ತಡೆಹಿಡಿಯಬೇಕೆಂದು ಮೇ 31ರಂದು ನಾಡಾದ ಎಡಿಡಿಪಿ ಸಮಿತಿಗೆ ಪುನಿಯಾ ಮನವಿ ಮಾಡಿಕೊಂಡಿದ್ದರು. ನಾಡಾ ಇಂದು ನೋಟಿಸ್‌ ಜಾರಿಗೊಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಾಹಿತಿಗಳ ಸ್ವಾಭಿಮಾನ, ಸ್ವಾಯತ್ತತೆ ಮತ್ತು ಸಂಸ್ಕೃತಿ ಸಚಿವರ ತಿಪ್ಪೆ ಸಾರಿಸುವಿಕೆ

“2021ರ ರಾಷ್ಟ್ರೀಯ ಉದ್ದೀಪನ ಮದ್ದು ನಿಯಮಗಳ ವಿಧಿ 2.3ಯನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ನಿಮಗೆ ಔಪಚಾರಿಕ ನೋಟಿಸ್ ನೀಡಲಾಗುತ್ತಿದ್ದು, ನಿಮ್ಮನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸಲಾಗುತ್ತಿದೆ” ಎಂದು ನಾಡಾ ನೋಟಿಸ್‌ನಲ್ಲಿ ತಿಳಿಸಿದೆ.

ವಿಚಾರಣೆಯನ್ನು ವಿನಂತಿಸಲು ಅಥವಾ ಆರೋಪವನ್ನು ಒಪ್ಪಿಕೊಳ್ಳಲು ಬಜರಂಗ್‌ ಅವರಿಗೆ ಜುಲೈ 11ರವರೆಗೂ ಸಮಯಾವಕಾಶ ನೀಡಲಾಗಿದೆ.

“ಉದ್ದೀಪನೆ ಪರೀಕ್ಷೆ ಉದ್ದೇಶಕ್ಕಾಗಿ ಅಗತ್ಯವಾದ ಮೂತ್ರ ಮಾದರಿಗಳನ್ನು ಒದಗಿಸಲು ಸಂಬಂಧಿಸಿದ ಅಧಿಕಾರಿಗಳು ನಿಮ್ಮನ್ನು ಸಂಪರ್ಕಿಸಿದ್ದಾರೆ. ಅಧಿಕಾರಿಗಳು ಹಲವು ಮನವಿಗಳ ನಂತರವೂ ನೀವು ಮೂತ್ರ ಮಾದರಿಗಳನ್ನು ನೀಡಲು ನಿರಾಕರಿಸಿದ್ದೀರಿ. ಮೂತ್ರ ಮಾದರಿಗಾಗಿ ಅವಧಿ ಮೀರಿದ ಕಿಟ್‌ಗಳನ್ನು ನೀಡಲಾಗಿದೆ ಎಂಬ ನಿಮ್ಮ ಆರೋಪಗಳಿಗೂ ಸಂಬಂಧಿಸಿದ ಅಧಿಕಾರಿಗಳು ವಿವರವಾಗಿ ಉತ್ತರ ನೀಡಿದ್ದಾರೆ. ಈ ಎಲ್ಲ ಹಿನ್ನೆಲೆಯಲ್ಲಿ ನಿಮ್ಮ ವಿರುದ್ಧ ನಾಡಾ ಕ್ರಮ ಕೈಗೊಂಡಿದೆ” ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...