ಕೂದಲೆಳೆ ಅಂತರದಿಂದ ಸಾವಿನಿಂದ ಪಾರಾದ ಕ್ರಿಕೆಟಿಗ ಸೌರವ್‌ ಗಂಗೂಲಿ ಸೋದರ, ಪತ್ನಿ

Date:

ಖ್ಯಾತ ಕ್ರಿಕೆಟಿಗ, ಬಿಸಿಸಿಐನ ಮಾಜಿ ಅಧ್ಯಕ್ಷ ಸೌರವ್ ಗಂಗೂಲಿ ಅವರ ಸಹೋದರ ಹಾಗೂ ಅವರ ಹೆಂಡತಿ ಒಡಿಶಾದ ಪುರಿಯ ಬೀಚ್​ನಲ್ಲಿ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಭಾರತದ ಕ್ರಿಕೆಟ್ ತಂಡದ ಮಾಜಿ ನಾಯಕ ಆಗಿರುವ ಸೌರವ್ ಗಂಗೂಲಿಯವರ ಸಹೋದರ ಸ್ನೇಹಶಿಶ್ ಗಂಗೂಲಿ ಹಾಗೂ ಇವರ ಹೆಂಡತಿ ಅರ್ಪಿತಾ ಅವರೊಂದಿಗೆ ಪ್ರವಾಸಕ್ಕಾಗಿ ಒಡಿಶಾದ ಪುರಿ ಬೀಚ್​ಗೆ ಹೋಗಿದ್ದರು. ಈ ವೇಳೆ ಸಮುದ್ರದಲ್ಲಿ ವಾಟರ್​ ಸ್ಪೋರ್ಟ್ಸ್​​ ಗೇಮ್​ನಲ್ಲಿ ಸ್ಪೀಡ್​ ಬೋಟ್​ ಆಡುವಾಗ, ಅದು ಮುಗುಚಿ ಬಿದ್ದಿದೆ. ನೀರಿನಲ್ಲಿ ಜೀವ ಭಯದಿಂದ ರಕ್ಷಣೆಗಾಗಿ ಇಬ್ಬರು ಮುಳುಗುತ್ತ ಕೂಗುತ್ತಿದ್ದರು. ಆಗ ತಕ್ಷಣ ಈಜು ರಕ್ಷಣ ದಳದವರು ಸಮುದ್ರದಲ್ಲಿ ಸಿಲುಕಿಕೊಂಡಿದ್ದ ಸ್ನೇಹಶಿಶ್ ಹಾಗೂ ಅವರ ಹೆಂಡತಿ ಅರ್ಪಿತಾರನ್ನು ರಕ್ಷಣೆ ಮಾಡಿ ದಡಕ್ಕೆ ಕರೆದುಕೊಂಡು ಬಂದಿದ್ದಾರೆ.

ಘಟನೆಯ ಕುರಿತು ಮಾತನಾಡಿದ ಅರ್ಪಿತಾ ಅವರು, ಬೋಟ್​ನಲ್ಲಿ 10 ಪ್ರವಾಸಿಗರು ತೆರಳುವಂತಹದ್ದು, ಆದರೆ ಹಣದಾಸೆಗೆ ಅದರಲ್ಲಿ ಕೇವಲ 3,4 ಜನರಿಗಾಗಿ ಬೋಟ್ ಅ​ನ್ನು ಸಮುದ್ರಕ್ಕೆ ಇಳಿಸಿದರು. ಗಾಳಿ ಹಾಗೂ ಸಮುದ್ರದ ಅಲೆಗಳ ಹೊಡೆತ ಜೋರಾಗಿದ್ದರಿಂದ ಹಗುರವಾಗಿದ್ದ ಬೋಟ್​ ತಕ್ಷಣ ಮುಗುಚಿ ಬಿದ್ದಿದೆ. ಇದೇ ಕೊನೆಯ ಬೋಟ್ ಆಗಿದೆ ಎಂದು ಸಿಬ್ಬಂದಿ ಹೇಳಿದರು. ಇದಕ್ಕೆ ನಾವು ವಿರೋಧ ವ್ಯಕ್ತಪಡಿಸಿದರೂ ಪರವಾಗಿಲ್ಲ ಬನ್ನಿ ಎಂದಿದ್ದರು. ಹೀಗಾಗಿ ಈ ಬೋಟ್​ನಲ್ಲಿ ನಾವು ತೆರಳಿದ್ದೆವು ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಇಂಗ್ಲೆಂಡ್‌ ಪ್ರವಾಸಕ್ಕೆ ಭಾರತದ ಅಂಡರ್‌ 19 ತಂಡ ಪ್ರಕಟ; ವೈಭವ್ ಸೂರ್ಯವಂಶಿ, ಆಯುಷ್‌ಗೆ ಸ್ಥಾನ

ಸಮಯಕ್ಕೆ ಸರಿಯಾಗಿ ಈಜು ರಕ್ಷಣ ದಳದವರು​ ಬಂದಿಲ್ಲದಿದ್ದರೆ ನಾವು ಜೀವಂತವಾಗಿ ಹೊರಗೆ ಬರುತ್ತಿರಲಿಲ್ಲ. ಈಗಲೂ ನಾನು ಆ ಘಟನೆಯಿಂದ ಹೊರ ಬರಲು ಆಗುತ್ತಿಲ್ಲ. ಇಂತಹ ಘಟನೆಯನ್ನು ನಾನು ಎಂದಿಗೂ ಎದುರಿಸಿರಲಿಲ್ಲ. ಆದರೆ ಒಂದು ವೇಳೆ ಬೋಟ್​ನಲ್ಲಿ ನಿಗದಿತ ಪ್ರವಾಸಿಗರು ಇದ್ದಿದ್ದರೇ ಇಂತಹ ಘಟನೆ ಸಂಭವಿಸುತ್ತಿರಲಿಲ್ಲ. ಪಶ್ಚಿಮ ಬಂಗಾಳಕ್ಕೆ ತೆರಳಿದ ಮೇಲೆ ಒಡಿಶಾ ಸಿಎಂ ಅವರಿಗೆ ಪತ್ರ ಬರೆದು, ಇಂತಹ ಬೋಟ್‌ಗಳನ್ನು ಸ್ಥಗಿತಗೊಳಿಸುವಂತೆ ಮನವಿ ಮಾಡುತ್ತೇನೆ ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...