ಒಲಿಂಪಿಕ್ಸ್‌ ಬಳಿಕ ವಿಶ್ವ ಅಥ್ಲೆಟಿಕ್ಸ್ ಕೂಟದಲ್ಲೂ ಚಿನ್ನದ ಕೊರತೆ ನೀಗಿಸಿದ ನೀರಜ್ ಚೋಪ್ರಾ

Date:

  • ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌: ಚಿನ್ನದ ಪದಕ ಗೆದ್ದ ಮೊದಲ ಭಾರತೀಯ ನೀರಜ್ ಚೋಪ್ರಾ
  • ಎರಡನೇ ಸ್ಥಾನ ಪಡೆದು ಬೆಳ್ಳಿ ಪದಕ ಗೆದ್ದ ಪಾಕ್‌ನ ಅರ್ಷದ್ ನದೀಮ್

ಹಂಗೇರಿಯ ಬುಡಾಪೆಸ್ಟ್‌ನಲ್ಲಿ ಭಾನುವಾರ ನಡೆದ 2023ನೇ ಸಾಲಿನ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಜಾವೆಲಿನ್​ ಎಸೆತಗಾರ ನೀರಜ್ ಚೋಪ್ರಾ ಅವರು ಚಿನ್ನದ ಪದಕ ಗೆಲ್ಲುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿದ್ದಾರೆ.

ಫೈನಲ್ ಪಂದ್ಯದಲ್ಲಿ ನೀರಜ್ ಚೋಪ್ರಾ ಅವರು 88.17 ಮೀಟರ್ ದೂರ ಭರ್ಜಿ ಎಸೆಯುವ ಮೂಲಕ ವಿಶ್ವ ಅಥ್ಲೆಟಿಕ್ಸ್​ ಚಾಂಪಿಯನ್​ಶಿಪ್​ನಲ್ಲಿ ಚಿನ್ನದ ಪದಕ ಗೆದ್ದ ಮೊದಲ ಭಾರತೀಯ ಎಂಬ ದಾಖಲೆ ನಿರ್ಮಿಸಿದ್ದಾರೆ. ಒಲಿಂಪಿಕ್ಸ್‌ ಬಳಿಕ ವಿಶ್ವ ಅಥ್ಲೆಟಿಕ್ಸ್ ಕೂಟದಲ್ಲೂ ಭಾರತಕ್ಕೆ ಕಾಡುತ್ತಿದ್ದ ಚಿನ್ನದ ಕೊರತೆಯನ್ನು ನೀರಜ್ ಚೋಪ್ರಾ ನೀಗಿಸಿದ್ದಾರೆ.

ಮೊದಲ ಸುತ್ತಿನಲ್ಲೇ ನಿಗದಿತ ಗೆರೆ ತಾಗಿದ್ದರಿಂದ ‘ಫೌಲ್’ ಮಾಡಿದ್ದ ನೀರಜ್ ಚೋಪ್ರಾ, 2ನೇ ಸುತ್ತಿನಲ್ಲಿ 88.17 ಮೀಟರ್ ದೂರಕ್ಕೆ ಎಸೆಯುವ ಮೂಲಕ ಅಗ್ರಸ್ಥಾನದೊಂದಿಗೆ ಚಿನ್ನದ ಪದಕ ಗಳಿಸುವಲ್ಲಿ ಯಶಸ್ವಿಯಾದರು. ಆ ಮೂಲಕ 40 ವರ್ಷದಿಂದ ನಡೆಯುತ್ತಿರುವ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ ಕೂಟದಲ್ಲಿ ಮೊದಲ ಬಾರಿಗೆ ಚಿನ್ನದ ಪದಕ ಗಳಿಸಿದ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನೀರಜ್ ಚೋಪ್ರಾ ಸಾಧನೆಗೆ ದೇಶಾದ್ಯಂತ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ.

ಪಾಕಿಸ್ತಾನದ ಅರ್ಷದ್ ನದೀಮ್ ಅವರು 87.82 ಮೀಟರ್ ಎಸೆಯುವ ಮೂಲಕ ಎರಡನೇ ಸ್ಥಾನ ಪಡೆದು ಬೆಳ್ಳಿ ಪದಕ ಗೆದ್ದರೆ, ಚೆಕ್‌ ಗಣರಾಜ್ಯದ ಜಾಕುಬ್‌ ವೆಡ್ಲೆಜ್‌ 86.67 ಮೀ. ದೂರ ಎಸೆದು ಕಂಚಿನ ಪದಕ ತಮ್ಮದಾಗಿಸಿಕೊಂಡರು.

ಶುಕ್ರವಾರ ನಡೆದಿದ್ದ ಜಾವೆಲಿನ್ ಥ್ರೋ ಸ್ಪರ್ಧೆಯ ಅರ್ಹತಾ ಸುತ್ತಿನಲ್ಲಿ ನೀರಜ್ ಚೋಪ್ರಾ ಅವರು ಮೊದಲ ಪ್ರತಯತ್ನದಲ್ಲೇ 88.77 ಮೀಟರ್ ಎಸೆಯುವ ಮೂಲಕ ವಿಶ್ವ ಅತ್ಲೆಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ ತಮ್ಮ ಅಭಿಯಾನ ಆರಂಭಿಸಿದ್ದರು. ಅಲ್ಲದೇ, 2024ರಲ್ಲಿ ಪ್ಯಾರಿಸ್‌ನಲ್ಲಿ ನಡೆಯಲಿರುವ ಒಲಿಂಪಿಕ್ಸ್‌ ಕೂಟಕ್ಕೂ ಅರ್ಹತೆ ಪಡೆದಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...