ಪಾವೊ ನೂರ್ಮಿ ಅಥ್ಲೆಟಿಕ್ಸ್ ಕೂಟ: ಚಿನ್ನ ಗೆದ್ದ ಭಾರತದ ಜಾವೆಲಿನ್‌ ತಾರೆ ನೀರಜ್ ಚೋಪ್ರಾ

Date:

ಫಿನ್‌ಲ್ಯಾಂಡ್‌ನ ತುರ್ಕುನಲ್ಲಿ ಮಂಗಳವಾರ ನಡೆದ ಪಾವೊ ನೂರ್ಮಿ ಅಥ್ಲೆಟಿಕ್ಸ್ ಕೂಟದಲ್ಲಿ ವಿಶ್ವ ಚಾಂಪಿಯನ್ ಭಾರತದ ಜಾವೆಲಿನ್ ತಾರೆ ನೀರಜ್ ಚೋಪ್ರಾ ತಮ್ಮ ಚೊಚ್ಚಲ ಚಿನ್ನದ ಪದಕವನ್ನು ಗೆದ್ದಿದ್ದಾರೆ.

ಈ ಹಿಂದೆ 2022ರಲ್ಲಿ ಪಾವೊ ನೂರ್ಮಿ ಅಥ್ಲೆಟಿಕ್ಸ್‌ನಲ್ಲಿ ಚೋಪ್ರಾ ಬೆಳ್ಳಿ ಪದಕ ಗೆದ್ದಿದ್ದರು. ಆದರೆ ಈ ವರ್ಷ ನಡೆದ ಭಾರೀ ಪೈಪೋಟಿಯ ಸ್ಪರ್ಧೆಯಲ್ಲಿ ಕೊನೆಯಲ್ಲಿ 85.97 ಮೀಟರ್​ ಎಸೆತದ ಮೂಲಕ ನೀರಜ್ ಚೋಪ್ರಾ ಅಗ್ರಸ್ಥಾನವನ್ನು ಅಲಂಕರಿಸಿದ್ದಾರೆ.

ಆರಂಭದಲ್ಲಿ 83. 62 ಮೀ ಎಸೆದ ನೀರಜ್ ಮುನ್ನಡೆಯಲ್ಲಿದ್ದರು. ಆದರೆ ಎರಡನೇ ಸುತ್ತಿನ ನಂತರ ಫಿನ್‌ಲ್ಯಾಂಡ್‌ನ ಆಲಿವರ್ ಹೆಲಾಂಡರ್ 83.96 ಮೀಟರ್‌ ಎಸೆದು ಮೊದಲ ಸ್ಥಾನಕ್ಕೆ ಏರಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?  ಏಷ್ಯನ್ ಗೇಮ್ಸ್ | ಜಾವೆಲಿನ್‌ನಲ್ಲಿ ಚಿನ್ನಕ್ಕೆ ಗುರಿ ಇಟ್ಟ ನೀರಜ್ ಚೋಪ್ರಾ, ಕಿಶೋರ್ ಜೆನಾಗೆ ಬೆಳ್ಳಿ

ಮೂರನೇ ಪ್ರಯತ್ನದಲ್ಲಿ 85.97 ಮೀಟರ್ ಎಸೆಯುವ ಮೂಲಕ ಚೋಪ್ರಾ ಮುನ್ನಡೆ ಸಾಧಿಸಿದ್ದಾರೆ. ಮೂರನೇ ಪ್ರಯತ್ನದಲ್ಲಿ ಇತರ ಏಳು ಸ್ಪರ್ಧಿಗಳು ಕೂಡಾ ಚೋಪ್ರಾರನ್ನು ಹಿಂದಿಕ್ಕುವುದರಲ್ಲಿ ವಿಫಲರಾದರು.

ಇನ್ನು 84.19 ಮೀಟರ್ ಎಸೆದ ಟೋನಿ ಕೆರಾನೆನ್ ಬೆಳ್ಳಿ ಪದಕ ಪಡೆದಿದ್ದರೆ, 2022ರಲ್ಲಿ ಚಿನ್ನದ ಪದಕಕ್ಕೆ ತನ್ನ ಕೊರಳೊಡ್ಡಿದ್ದ ಒಲಿವರ್ ಹೆಲಾಂಡರ್ 83.96 ಮೀಟರ್ ಎಸೆದು ಮೂರನೇ ಸ್ಥಾನ ಗಳಿಸಿದ್ದಾರೆ.

ಪಾವೊ ನೂರ್ಮಿ ಗೇಮ್ಸ್ ನಂತರ ಮುಂದಿನ ಜುಲೈ 7ರಂದು ಪ್ಯಾರಿಸ್ ಡೈಮಂಡ್ ಲೀಗ್‌ನಲ್ಲಿ ನೀರಜ್ ಚೋಪ್ರಾ ಕಾಣಿಸಿಕೊಳ್ಳಲಿದ್ದಾರೆ.

 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...