‘ಪಾಕಿಸ್ತಾನ ಆಟಗಾರನ ವಿರುದ್ಧ ಗೆದ್ದದ್ದು ಹೇಗೆನಿಸಿತು’ ಎಂಬ ಪ್ರಶ್ನೆಗೆ ಖಡಕ್ ಉತ್ತರ ಕೊಟ್ಟ ನೀರಜ್ ಚೋಪ್ರಾ ತಾಯಿ

Date:

  • ಸೋಷಿಯಲ್ ಮೀಡಿಯಾಗಳಲ್ಲಿ ವೈರಲಾಗುತ್ತಿರುವ ನೀರಜ್ ತಾಯಿ ಸರೋದ್ ದೇವಿಯವರ ವಿಡಿಯೋ
  • ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ ಗೆದ್ದು ಇತಿಹಾಸ ನಿರ್ಮಿಸಿದ್ದ ನೀರಜ್ ಚೋಪ್ರಾ

ಹಂಗೇರಿಯ ಬುಡಾಪೆಸ್ಟ್‌ನಲ್ಲಿ ನಡೆದ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನ ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ನೀರಜ್ ಚೋಪ್ರಾ ಚಿನ್ನದ ಪದಕವನ್ನು ಜಯಿಸುವ ಮೂಲಕ ಮೊತ್ತ ಮೊದಲ ಭಾರತೀಯ ಎಂಬ ದಾಖಲೆ ಬರೆದಿದ್ದರು.

ಪುರುಷರ ಜಾವೆಲಿನ್​ ಥ್ರೋ ಫೈನಲ್​ನಲ್ಲಿ 88.17 ಮೀಟರ್ ದೂರ ಭರ್ಜಿ ಎಸೆದು ಸ್ವರ್ಣ ಪದಕವನ್ನು ತಮ್ಮದಾಗಿಸಿಕೊಂಡು ದಾಖಲೆ ಬರೆದಿದ್ದರು.

ಈ ನಡುವೆ ಮಗನ ಸಾಧನೆಯ ಹಿನ್ನೆಲೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದಾಗ ಪತ್ರಕರ್ತನೋರ್ವ ಕೇಳಿದ್ದ ಪ್ರಶ್ನೆಗೆ ನೀರಜ್ ಚೋಪ್ರಾ ಅವರ ತಾಯಿ, ಸರೋಜ್ ದೇವಿ ನೀಡಿರುವ ಉತ್ತರವೊಂದು ಸದ್ಯ ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗುತ್ತಿದ್ದು, ಸದ್ದು ಮಾಡುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಾಕಿಸ್ತಾನದ ಅಥ್ಲೀಟ್ ಅರ್ಷದ್ ವಿರುದ್ಧ ತಮ್ಮ ಮಗನ ವಿಜಯದ ಬಗ್ಗೆ ತಾವೆಷ್ಟು ಭಾವುಕರಾಗಿದ್ದೀರಿ? ಎಂದು ಪತ್ರಕರ್ತ ಕೇಳಿದಾಗ, “ನೋಡಿ, ಎಲ್ಲರೂ ಮೈದಾನದಲ್ಲಿ ಆಡಲು ಬಂದಿದ್ದಾರೆ. ಆಟಗಾರ ಎಂದರೆ ಆತ ಆಟಗಾರನಷ್ಟೇ. ಒಬ್ಬರು ಅಥವಾ ಇನ್ನೊಬ್ಬರು ಖಂಡಿತವಾಗಿಯೂ ಗೆಲ್ಲುತ್ತಾರೆ. ಹಾಗಾಗಿ, ಅಲ್ಲಿ ಪಾಕಿಸ್ತಾನ ಅಥವಾ ಹರಿಯಾಣದವರು ಎಂಬ ಪ್ರಶ್ನೆಯೇ ಇಲ್ಲ. ನೀರಜ್ ಗೆದ್ದಿರುವುದು ಬಹಳ ಸಂತೋಷವಿದೆ. ಪಾಕಿಸ್ತಾನದ ಆಟಗಾರ(ಅರ್ಷದ್ ನದೀಮ್) ಗೆದ್ದಿದ್ದರೂ ಕೂಡ ಅಷ್ಟೇ ಸಂತೋಷ ಇರುತ್ತಿತ್ತು” ಎಂದು ಹೇಳಿದ್ದಾರೆ.

ಸದ್ಯ ಅವರ ಉತ್ತರ ಸೋಷಿಯಲ್ ಮೀಡಿಯಾಗಳಲ್ಲಿ ವೈರಲಾಗುತ್ತಿದ್ದು, “ನೀರಜ್ ಚೋಪ್ರಾ ಚಿನ್ನ ಗೆದ್ದಿರುವುದು ಒಂದು ಸಾಧನೆಯಾದರೆ, ಅವರ ಕುಟುಂಬವೇ ಚಿನ್ನದಂತೆ ಇದೆ ನನಗೆ ಭಾಸವಾಗುತ್ತಿದೆ” ಎಂದು ರೋಶನ್ ರೈ ಎಂಬವರು ವಿಡಿಯೋ ಹಂಚಿಕೊಂಡು ಬರೆದುಕೊಂಡಿದ್ದಾರೆ.

‘ಗೋದಿ ಮೀಡಿಯಾದ ಪತ್ರಕರ್ತ, ನೀರಜ್ ತಾಯಿಯ ಬಾಯಿಂದ ಪಾಕಿಸ್ತಾನದ ಹೆಸರನ್ನು ಎತ್ತಿ ದ್ವೇಷ ಹರಡಲು ಕೈ ಹಾಕಿದ್ದಾನೆ. ಆದರೆ ಅವರು ಪ್ರೀತಿಯನ್ನು ಧಾರೆ ಎರೆದಿದ್ದಾರೆ. ಇದಕ್ಕಿಂತ ಸ್ಪಷ್ಟವಾದ ಉತ್ತರ ಇನ್ನೇನು ಬೇಕಿದೆ ಹೇಳಿ’ ಎಂದು ನೆಟ್ಟಿಗರೊಬ್ಬರು ಈ ವಿಡಿಯೋಗೆ ಕಮೆಂಟ್ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...