ಮತ್ತೊಮ್ಮೆ ಅಚ್ಚರಿ ಮೂಡಿಸಿದ ನೆದರ್‌ಲ್ಯಾಂಡ್ಸ್‌: ಸರ್ವಾಂಗೀಣ ಆಟಕ್ಕೆ ಮಂಡಿಯೂರಿದ ಬಾಂಗ್ಲಾ

Date:

ಐಸಿಸಿ ಏಕದಿನ ವಿಶ್ವಕಪ್‌ನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು ಸೋಲಿಸಿ ಸುದ್ದಿಯಾಗಿದ್ದ ನೆದರ್‌ಲ್ಯಾಂಡ್ಸ್‌ ತಂಡ, ಇಂದು(ಶನಿವಾರ) ಬಾಂಗ್ಲಾದೇಶವನ್ನು ಸೋಲಿಸುವ ಮೂಲಕ ಮತ್ತೊಮ್ಮೆ ಅಚ್ಚರಿ ಮೂಡಿಸಿದೆ.

ಕೋಲ್ಕತ್ತಾದ ಈಡನ್ ಗಾರ್ಡನ್‌ ಮೈದಾನದಲ್ಲಿ ಶನಿವಾರ ನಡೆದ ಏಕದಿನ ವಿಶ್ವಕಪ್‌ನ 28ನೇ ಪಂದ್ಯದಲ್ಲಿ ಬಾಂಗ್ಲಾದೇಶ ತಂಡದ ವಿರುದ್ಧ ನೆದರ್‌ಲ್ಯಾಂಡ್ಸ್‌ ತಂಡ 87 ರನ್‌ಗಳ ಭರ್ಜರಿ ಜಯ ಗಳಿಸಿದೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ್ದ ನೆದರ್‌ಲ್ಯಾಂಡ್ಸ್‌ ತಂಡ ನಾಯಕ ಸ್ಕಾಟ್ ಎಡ್ವರ್ಡ್ಸ್ ಅವರ ನಿರ್ಣಾಯಕ ಅರ್ಧಶತಕದ ನೆರವಿನಿಂದ ನಿಗದಿತ 50 ಓವರ್‌ಗಳಲ್ಲಿ 229 ರನ್‌ ಗಳಿಗೆ ಆಲೌಟ್ ಆಗುವ ಮೂಲಕ, ಬಾಂಗ್ಲಾದೇಶ ತಂಡಕ್ಕೆ 230 ರನ್‌ಗಳ ಸುಲಭ ಗುರಿ ನೀಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದರೆ ಈ ಸಾಧಾರಣ ಗುರಿಯನ್ನು ತಲುಪುವಲ್ಲಿ ಎಡವಿದ ಶಾಕಿಬುಲ್ ಹಸನ್ ನೇತೃತ್ವದ ಬಾಂಗ್ಲಾದೇಶ, 42.2 ಓವರ್‌ಗಳಲ್ಲಿ 142 ರನ್‌ ಗಳಿಸುವಷ್ಟರಲ್ಲಿ ಆಲೌಟ್ ಆಯಿತು.

ಬಾಂಗ್ಲಾದೇಶದ ಪರ ಬ್ಯಾಟಿಂಗ್ ಆರಂಭಿಸಿದ್ದ ಲಿಟ್ಟನ್ ದಾಸ್ ಹಾಗೂ ತಂಝೀದ್ ಹಸನ್ ಉತ್ತಮ ಆರಂಭ ನೀಡುವಲ್ಲಿ ವಿಫಲರಾದರು. ಮೊದಲನೇ ವಿಕೆಟ್ 19 ರನ್‌ ಗಳಿಸುವಷ್ಟರಲ್ಲಿ ಕಳೆದುಕೊಂಡಿತು. ಆ ಬಳಿಕ ಕ್ರೀಸ್‌ಗೆ ಬಂದ ಹಸನ್ ಮೀರಾಝ್ ಸ್ವಲ್ಪ ಆಟವಾಡಿದರಾದರೂ 35 ರನ್ ಗಳಿಸಿ ಔಟಾದರು. ಇದು ಬಾಂಗ್ಲಾ ಪರ ಬ್ಯಾಟರ್‌ನಿಂದ ದಾಖಲಾದ ಅತಿ ಹೊಚ್ಚು ರನ್. ಉಳಿದಂತೆ ಯಾರೂ ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ನಿಲ್ಲಲಿಲ್ಲ.

ಬೌಲಿಂಗ್‌ನಲ್ಲಿ ನೆದರ್‌ಲ್ಯಾಂಡ್ಸ್‌ ತಂಡದ ಪರ ಪೌಲ್ ವ್ಯಾನ್ ಮೀಕೆರೆನ್ ರನ್ 23ಕ್ಕೆ 4 ವಿಕೆಟ್ ಪಡೆದು ಮಿಂಚಿದರು. ಬಾಸ್ ಡಿ ಲೀಡ್ 25ಕ್ಕೆ 2, ಆರ್ಯನ್ ದತ್ತ್, ವ್ಯಾನ್ ಬೀಕ್, ಕಾಲಿನ್ ಆಕ್ರೊಮೆನ್ ತಲಾ ಒಂದೊಂದು ವಿಕೆಟ್ ಪಡೆದರು.

ಬೌಲಿಂಗ್‌ನಲ್ಲಿ ನೆದರ್‌ಲ್ಯಾಂಡ್ಸ್‌ ತಂಡದ ಪರ 7.2 ಓವರ್ ಎಸೆದು 4 ವಿಕೆಟ್ ಪಡೆದು ಮಿಂಚಿದ  ಪೌಲ್ ವ್ಯಾನ್ ಮೀಕೆರೆನ್ ಅರ್ಹವಾಗಿಯೇ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ನೆದರ್‌ಲ್ಯಾಂಡ್ಸ್‌ ತಂಡಕ್ಕೆ ಆಸರೆಯಾಗಿದ್ದ ನಾಯಕ ಸ್ಕಾಟ್ ಎಡ್ವರ್ಡ್ಸ್
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ್ದ ನೆದರ್‌ಲ್ಯಾಂಡ್ಸ್‌ ತಂಡ ಆರಂಭದಲ್ಲೇ ಕುಸಿತ ಕಂಡಿತ್ತು. ಆ ನಂತರ ನೆದರ್‌ಲ್ಯಾಂಡ್ಸ್‌ ನಾಯಕ ಸ್ಕಾಟ್ ಎಡ್ವರ್ಡ್ಸ್ ಕುಸಿದಿದ್ದ ತಂಡಕ್ಕೆ ಆಸರೆಯಾದರು. 89 ಎಸೆತಗಳಿಂದ 6 ಬೌಂಡರಿ ಮೂಲಕ 68 ರನ್ ಬಾರಿಸಿದರು. ಇನ್ನು ಬಾಸ್ ಡಿ ಲೀಡ್ 32 ಎಸೆತಗಳಲ್ಲಿ 2 ಬೌಂಡರಿ ಸಹಾಯದಿಂದ 17 ರನ್ ಗಳಿಸಿದ್ದರು. ಕೊನೆಗೆ ನಿಗದಿತ 50 ಓವರ್‌ಗಳಲ್ಲಿ 229 ರನ್‌ಗಳಿಗೆ ಸರ್ವಪತನ ಕಂಡಿತ್ತು.

ಬೌಲಿಂಗ್‌ನಲ್ಲಿ ಬಾಂಗ್ಲಾದೇಶ ತಂಡದ ಪರ ಮುಸ್ತಾಫಿಝುರ್ ರೆಹಮಾನ್ 10 ಓವರ್‌ಗಳಲ್ಲಿ 36 ರನ್ ನೀಡಿ 2 ವಿಕೆಟ್ ಪಡೆದರೆ, ಶರೀಫುಲ್ ಇಸ್ಲಾಂ 10 ಓವರ್‌ಗಳಲ್ಲಿ 51 ರನ್ ನೀಡಿ 2 ವಿಕೆಟ್ ಕಬಳಿಸಿದರು.
ತಸ್ಕಿನ್ ಅಹ್ಮದ್ 9 ಓವರ್‌ಗಳಲ್ಲಿ 43 ರನ್ ನೀಡಿ 2 ವಿಕೆಟ್ ಪಡೆದರೆ, ಉಳಿದಂತೆ ಶಕೀಬ್ ಅಲ್ ಹಸನ್ 10 ಓವರ್‌ಗಳಲ್ಲಿ 37 ರನ್ ನೀಡಿ 1 ವಿಕೆಟ್ ಮತ್ತು ಮಹೇದಿ ಹಸನ್ 7 ಓವರ್‌ಗಳಲ್ಲಿ 40 ರನ್ ನೀಡಿ 2 ವಿಕೆಟ್ ಪಡೆದಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...