ನ್ಯೂಜಿಲೆಂಡ್‌ ಎದುರು ಏಕದಿನ ಸರಣಿ ಸೋತ ಪಾಕ್‌; ಟಿ20 ನಂತರ ಮುಂದುವರೆದ ಕಳಪೆ ಪ್ರದರ್ಶನ

Date:

ಪಾಕಿಸ್ತಾನ ಕ್ರಿಕೆಟ್‌ ತಂಡ ನ್ಯೂಜಿಲೆಂಡ್‌ ಪ್ರವಾಸದಲ್ಲಿ ತನ್ನ ಕಳಪೆ ಪ್ರದರ್ಶನವನ್ನು ಮುಂದುವರಿಸಿದ್ದು, ಟಿ20 ಸರಣಿ ಸೋಲಿನ ನಂತರ ಏಕದಿನ ಟೂರ್ನಮೆಂಟ್‌ನಲ್ಲೂ ಪರಾಭವಗೊಂಡಿದೆ.

ಹ್ಯಾಮಿಲ್ಟನ್‌ನ ಸೆಡ್ಡೋನ್‌ ಕ್ರೀಡಾಂಗಣದಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಕಿವೀಸ್‌ ತಂಡದ ವಿರುದ್ಧ 84 ರನ್‌ಗಳ ಅಂತರದಲ್ಲಿ ಸೋಲು ಅನುಭವಿಸಿದೆ. 293 ರನ್‌ಗಳ ಸವಾಲನ್ನು ಬೆನ್ನಟ್ಟಿದ ಪಾಕ್‌ ತಂಡ 208 ರನ್‌ಗಳಿಗೆ ಸರ್ವಪತನ ಕಂಡಿತು. ಮಧ್ಯಮ ಕ್ರಮಾಂಕದ ಆಟಗಾರ ಫಾಹಿಮ್‌ ಅಶ್ರಫ್ (73) ಹಾಗೂ ಬೌಲರ್‌ ನಸೀಂ ಶಾ (51) ಅರ್ಧ ಶತಕ ಗಳಿಸುವ ಮೂಲಕ ಒಂದಿಷ್ಟು ಪ್ರತಿರೋಧ ನೀಡಿದರು. ಉಳಿದ ಆಟಗಾರರು 20ರ ಗಡಿ ದಾಟಲು ವಿಫಲರಾದರು.

ನ್ಯೂಜಿಲೆಂಡ್‌ ವೇಗಿ ಬೆನ್‌ ಸಿಯರ್ಸ್‌ 59/5, ಜೆಕಬ್‌ ಡುಫಿ 35/3 ವಿಕೆಟ್‌ ಪಡೆಯುವ ಮೂಲಕ ಪಾಕ್‌ ತಂಡದ ಬ್ಯಾಟರ್‌ಗಳನ್ನು ಪೆವಿಲಿಯನ್‌ಗೆ ಕಳಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ಈ ಮೂಲಕ ಕಿವೀಸ್ ತಂಡ ಮೂರು ಪಂದ್ಯಗಳ ಏಕಪಂದ್ಯಗಳ ಸರಣಿಯಲ್ಲಿ 2-0 ಅಂತರದಿಂದ ಸರಣಿಯನ್ನು ಗೆದ್ದುಕೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಐಪಿಎಲ್ 2025 | ಅಂದು ಪುಟ್ಟ ಹುಡುಗ; ಇಂದು ಗುರುವನ್ನೇ ಮೀರಿಸಿದ ಶಿಷ್ಯ

ಪಾಕ್‌ ತಂಡದ ನಾಯಕ ಮೊಹಮ್ಮದ್‌ ರಿಜ್ವಾನ್‌ ಟಾಸ್‌ ಗೆದ್ದು ಬೌಲಿಂಗ್‌ ಆಯ್ಕೆ ಮಾಡಿಕೊಂಡರೂ ನ್ಯೂಜಿಲೆಂಡ್‌ ತಂಡವನ್ನು ಕಡಿಮೆ ರನ್‌ಗಳಿಗೆ ನಿಯಂತ್ರಿಸಲು ಸಾಧ್ಯವಾಗಲಿಲ್ಲ. ಕಿವೀಸ್‌ ವಿಕೆಟ್‌ ಕೀಪರ್‌ ಮಿಷಲ್‌ ಹೇ ಅಜೇಯ 99 ಬಾರಿಸಿ ಒಂದು ರನ್‌ನಿಂದ ಶತಕ ತಪ್ಪಿಸಿಕೊಂಡರೂ ತಂಡ ಉತ್ತಮ ಮೊತ್ತ ಗಳಿಸಲು ನೆರವಾದರು.

ಇನ್ನುಳಿದಂತೆ ಉದಯೋನ್ಮುಖ ಆಟಗಾರ ಮೊಹಮ್ಮದ್‌ ಅಬ್ಬಾಸ್(41), ನಿಕ್‌ ಕೆಲ್ಲಿ (31),ಹೇನ್ರಿ ನಿಕೊಲೊಸ್‌(22)ರನ್‌ ಬಾರಿಸುವ ಮೂಲಕ ನ್ಯೂಜಿಲೆಂಡ್‌ 50 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ 292 ರನ್‌ ಪೇರಿಸಲು ನೆರವಾದರು. ಪಾಕ್‌ ಪರ ಮುಖೀಮ್‌, ವಾಸೀಮ್‌ ತಲಾ 2 ವಿಕೆಟ್, ಫಾಹಿಮ್, ಜಾವೇದ್‌ ಹಾಗೂ ಹ್ಯಾರಸ್‌ ತಲಾ ಒಂದೊಂದು ವಿಕೆಟ್‌ ಪಡೆದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...