ಮಹಿಳೆಯರ ಟಿ20 ವಿಶ್ವಕಪ್: ನ್ಯೂಜಿಲೆಂಡ್‌ ಚೊಚ್ಚಲ ಚಾಂಪಿಯನ್

Date:

ಮಹಿಳಾ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ದಕ್ಷಿಣ ಆಫ್ರಿಕಾವನ್ನು ಮಣಿಸಿ ಚೊಚ್ಚಲ ವಿಶ್ವಕಪ್‌ನ್ನು ಮುಡಿಗೇರಿಸಿಕೊಂಡಿದೆ.

ದುಬೈನ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆದಿದೆ. ಹೈವೋಲ್ಟೇಜ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ 32 ರನ್​ಗಳಿಂದ ದಕ್ಷಿಣ ಆಫ್ರಿಕಾ ತಂಡವನ್ನು ಮಣಿಸಿದೆ. ಈ ಪಂದ್ಯದಲ್ಲಿ ಸೋಲೊಪ್ಪಿಕೊಳ್ಳುವ ಮೂಲಕ ದಕ್ಷಿಣ ಆಫ್ರಿಕಾದ ಮಹಿಳಾ ತಂಡ ಸತತ 2ನೇ ಬಾರಿಗೆ ವಿಶ್ವಕಪ್ ವಂಚಿತವಾಗಿದೆ.

ಕಳೆದ ವಿಶ್ವಕಪ್‌ನಲ್ಲೂ ಪ್ರವೇಶಿಸಿದ್ದ ದಕ್ಷಿಣ ಆಫ್ರಿಕಾ ತಂಡ, ಆಸ್ಟ್ರೇಲಿಯಾ ವಿರುದ್ಧ ಸೋತು ಪ್ರಶಸ್ತಿಯಿಂದ ವಂಚಿತವಾಗಿತ್ತು. ಇದೀಗ ಸತತ ಎರಡನೇ ಬಾರಿಯೂ ಪ್ರಶಸ್ತಿ ಎತ್ತಿ ಹಿಡಿಯುವಲ್ಲಿ ವಿಫಲವಾಗಿದೆ. ಇನ್ನು 2010 ರ ಬಳಿಕ ಇದೇ ಮೊದಲ ಬಾರಿಗೆ ಫೈನಲ್​ಗೇರಿದ್ದ ನ್ಯೂಜಿಲೆಂಡ್ ತಂಡ ಸೋಫಿ ಡಿವೈನ್ ನಾಯಕತ್ವದಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಂಗಳೂರು ಟೆಸ್ಟ್: ಭಾರತದ ವಿರುದ್ಧ ನ್ಯೂಜಿಲೆಂಡ್‌ಗೆ ಸುಲಭ ಗೆಲುವು

ಟಾಸ್ ಸೋತ ನ್ಯೂಜಿಲೆಂಡ್ ಮೊದಲು ಬ್ಯಾಟಿಂಗ್ ಮಾಡಿ ದಕ್ಷಿಣ ಆಫ್ರಿಕಾಕ್ಕೆ 159 ರನ್​ಗಳ ಗುರಿ ನೀಡಿತ್ತು. ಅಮೆಲಿಯಾ ಕೆರ್ 43 ರನ್, ಸುಜಿ ಬೇಟ್ಸ್ 32 ರನ್ ಮತ್ತು ಬ್ರೂಕ್ ಹ್ಯಾಲಿಡೇ 38 ರನ್‌ಗಳನ್ನು ಕಲೆ ಹಾಕಿ ಪ್ರಬಲ ಸವಾಲು ನೀಡಿತ್ತು.

ದಕ್ಷಿಣ ಆಫ್ರಿಕಾ ಬೌಲಿಂಗ್​ ವಿಭಾಗದಲ್ಲಿ ಮ್ಲಾಬಾ ಎರಡು ವಿಕೆಟ್ ಪಡೆದರೆ, ಟ್ರೇಯಾನ್, ಕ್ಲರ್ಕ್ ಮತ್ತು ಖಾಕಾ ತಲಾ ಒಂದು ವಿಕೆಟ್ ಪಡೆದರು.

ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ತಂಡಕ್ಕೆ ಮೊದಲ ವಿಕೆಟ್​ಗೆ ಅತ್ಯುತ್ತಮ ಜೊತೆಯಾಟ ಲಭಿಸಿ 51 ರನ್​ಗಳನ್ನು ಕಲೆಹಾಕಿತು. ಈ ಜೊತೆಯಾಟದ ಬಳಿಕ ತಂಡದಲ್ಲಿ ಪೆವಿಲಿಯನ್ ಪರೇಡ್ ಆರಂಭವಾಯಿತು. ಅನುಭವಿ, ಭರವಸೆಯ ಬ್ಯಾಟರ್‌ಗಳು ನ್ಯೂಜಿಲೆಂಡ್ ತಂಡವನ್ನು ಎದುರಿಸಲು ವಿಫಲರಾದರು. ದಕ್ಷಿಣ ಆಫ್ರಿಕಾ ತಂಡ ನಿಗದಿತ 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 126 ರನ್‌ಗಳಿಗೆ ಸೋಲೊಪ್ಪಿಕೊಂಡಿತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...