ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್: ಟಾಸ್‌ ಗೆದ್ದ ಭಾರತಕ್ಕೆ ಆರಂಭಿಕ ಆಘಾತ

Date:

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ನ್ಯೂಜಿಲೆಂಡ್‌ ವಿರುದ್ಧದ ಮೊದಲ ಟೆಸ್ಟ್‌ ಪಂದ್ಯದ ಎರಡನೇ ದಿನದಂದು ಭಾರತ ಆರಂಭಿಕ ಆಘಾತ ಅನುಭವಿಸಿದೆ. ಟಾಸ್‌ ಗೆದ್ದ ಟೀಂ ಇಂಡಿಯಾ ನಾಯಕ ರೋಹಿತ್‌ ಶರ್ಮಾ ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡರು.

ಭಾರತವು 10 ಓವರ್‌ಗಳಲ್ಲಿಯೇ ಪ್ರಮುಖ ಮೂರು ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೀಡಾಗಿದೆ. ನಾಯಕ ರೋಹಿತ್‌ ಶರ್ಮಾ 2 ರನ್‌ಗೆ ಸೌತಿ ಬೌಲಿಂಗ್‌ನಲ್ಲಿ ಬೌಲ್ಡ್‌ ಆದರೆ, ಪ್ರಮುಖ ಬ್ಯಾಟರ್‌ ವಿರಾಟ್‌ ಕೊಹ್ಲಿ ಹಾಗೂ ಬಡ್ತಿ ಪಡೆದು ಬಂದಿದ್ದ ಸರ್ಫರಾಜ್‌ ಖಾನ್‌ ಶೂನ್ಯ ರನ್‌ಗಳಿಗೆ ಪೆವಿಲಿಯನ್‌ಗೆ ತೆರಳಿದರು.

ಬುಧವಾರದಿಂದ ಆರಂಭವಾಗಬೇಕಿದ್ದ ಈ ಪಂದ್ಯದ ಮೊದಲ ದಿನದಾಟವು ಮಳೆಯಿಂದಾಗಿ ರದ್ದಾಗಿತ್ತು.ಈ ಪಂದ್ಯದಿಂದ ಟೀಮ್ ಇಂಡಿಯಾದ ಯುವ ಆಟಗಾರ ಶುಭ್​ಮನ್ ಗಿಲ್ ಹೊರಗುಳಿದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ತೆಲಂಗಾಣ ಡಿಎಸ್‌ಪಿ ಆಗಿ ಅಧಿಕಾರ ವಹಿಸಿಕೊಂಡ ಕ್ರಿಕೆಟಿಗ ಮೊಹಮ್ಮದ್ ಸಿರಾಜ್‌

ಕತ್ತು ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಶುಭ್​ಮನ್ ಗಿಲ್​ಗೆ ವಿಶ್ರಾಂತಿ ನೀಡಲಾಗಿದ್ದು, ಅವರ ಬದಲಿಗೆ ಮತ್ತೋರ್ವ ಯುವ ದಾಂಡಿಗ ಸರ್ಫರಾಝ್​ ಖಾನ್​ಗೆ ಆಡುವ ಬಳಗದಲ್ಲಿ ಅವಕಾಶ ನೀಡಲಾಗಿದೆ. ಹಾಗೆಯೇ ಬಾಂಗ್ಲಾದೇಶದ ವಿರುದ್ಧ ಕಣಕ್ಕಿಳಿದಿದ್ದ ಆಕಾಶ್ ದೀಪ್ ಬದಲಿಗೆ ಕುಲ್‌ದೀಪ್‌ ಯಾದವ್ ಸ್ಥಾನ ಪಡೆದಿದ್ದಾರೆ. ಫಿಟ್​ನೆಸ್ ಸಮಸ್ಯೆಯ ಕಾರಣ ಈ ಪಂದ್ಯದಿಂದ ನ್ಯೂಜಿಲೆಂಡ್ ತಂಡದ ಸ್ಟಾರ್ ಆಟಗಾರ ಕೇನ್ ವಿಲಿಯಮ್ಸನ್ ಹೊರಗುಳಿದಿದ್ದಾರೆ

ಉಭಯ ತಂಡಗಳ ಆಡುವ 11ರ ಬಳಗ

ಭಾರತ: ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸರ್ಫರಾಝ್ ಖಾನ್, ರಿಷಭ್ ಪಂತ್, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್ ಹಾಗೂ ಕುಲ್ದೀಪ್ ಯಾದವ್.

ನ್ಯೂಜಿಲೆಂಡ್: ಟಾಮ್ ಲ್ಯಾಥಮ್ (ನಾಯಕ), ಡೆವೊನ್ ಕಾನ್ವೇ, ವಿಲ್ ಯಂಗ್, ರಚಿನ್ ರವೀಂದ್ರ, ಡೇರಿಲ್ ಮಿಚೆಲ್, ಟಾಮ್ ಬ್ಲಂಡೆಲ್ (ವಿಕೆಟ್ ಕೀಪರ್), ಗ್ಲೆನ್ ಫಿಲಿಪ್ಸ್, ಮ್ಯಾಟ್ ಹೆನ್ರಿ, ಟಿಮ್ ಸೌಥಿ, ಅಜಾಝ್ ಪಟೇಲ್, ವಿಲಿಯಂ ಒರೋಕ್.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...