ಚಾಂಪಿಯನ್ಸ್ ಟ್ರೋಫಿ | ‘ಸೋತ ಆಫ್ರಿಕಾ’: ಫೈನಲ್‌ಗೆ ನ್ಯೂಜಿಲ್ಯಾಂಡ್

Date:

ಪಾಕಿಸ್ತಾನದ ಲಾಹೋರ್ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಇಂದು ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ ದಕ್ಷಿಣ ಆಫ್ರಿಕಾ ಸೋಲೊಪ್ಪಿಕೊಂಡಿದೆ. ಈ ಗೆಲುವಿನೊಂದಿಗೆ ಕೀವೀಸ್ ತಂಡವು ಫೈನಲ್‌ಗೆ ಲಗ್ಗೆ ಇಟ್ಟಿದ್ದು, ಪ್ರಶಸ್ತಿಗಾಗಿ ಟೀಮ್ ಇಂಡಿಯಾವನ್ನು ಮಾ.9ರಂದು ಎದುರಿಸಲಿದೆ.

ಮೊದಲು ಬ್ಯಾಟಿಂಗ್ ನಡೆಸಿದ್ದ ಮಿಚೆಲ್ ಸ್ಯಾಂಟ್ನರ್ ನೇತೃತ್ವದ ನ್ಯೂಜಿಲ್ಯಾಂಡ್ ತಂಡವು ರಚಿನ್‌ ರವೀಂದ್ರ ಹಾಗೂ ಕೇನ್ ವಿಲಿಯಮ್ಸ‌ನ್ ಅವರ ಶತಕದ ನೆರವಿನಿಂದ ನಿಗದಿತ 50 ಓವರ್‌ಗಳಲ್ಲಿ 362 ರನ್ ಗಳಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

363 ರನ್‌ಗಳ ಬೃಹತ್ ಮೊತ್ತವನ್ನು ತಲುಪಲು ಎಡವಿದ ತೆಂಬಾ ಬಾವುಮಾ ನೇತೃತ್ವದ ದಕ್ಷಿಣ ಆಫ್ರಿಕಾ ತಂಡವು, 50 ಓವರ್‌ಗಳಲ್ಲಿ 312 ರನ್‌ಗಳನ್ನು ಮಾಡಲಷ್ಟೇ ಶಕ್ತವಾಯಿತು. ಆ ಮೂಲಕ ‌50 ರನ್‌ಗಳಿಂದ ಸೋಲೊಪ್ಪಿಕೊಂಡಿದ್ದಲ್ಲದೇ, ಪ್ರಶಸ್ತಿಯ ಸುತ್ತನ್ನು ತಲುಪಲು ವಿಫಲವಾಯಿತು.

ದಕ್ಷಿಣ ಆಫ್ರಿಕಾ ಪರವಾಗಿ ಬ್ಯಾಟಿಂಗ್‌ನಲ್ಲಿ ಡೇವಿಡ್ ಮಿಲ್ಲರ್ ಶತಕ ಬಾರಿಸಿ(100 ರನ್) ಕೊನೆಯ ತನಕ ಹೋರಾಟ ನಡೆಸಿದರಾದರೂ, ಬೃಹತ್ ಗುರಿಯನ್ನು ತಲುಪಲು ಸಾಧ್ಯವಾಗಲಿಲ್ಲ. ನಿಗದಿತ 50 ಓವರ್‌ಗಳಲ್ಲಿ 9 ವಿಕೆಟ್ ಕಳೆದುಕೊಂಡು 312 ರನ್‌ ಗಳಿಸಿತು.

ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಫೈನಲ್‌ ಪಂದ್ಯವು ದುಬೈಯ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಮಾ.9ರಂದು‌ ಟೀಮ್ ಇಂಡಿಯಾ ಹಾಗೂ ನ್ಯೂಜಿಲ್ಯಾಂಡ್ ನಡುವೆ ನಡೆಯಲಿದೆ. ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ತಂಡವನ್ನು ರೋಹಿತ್ ಶರ್ಮಾ ಬಳಗವು ಸೋಲಿಸಿತ್ತು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...