ಐಪಿಎಲ್ 2025 | ವೇಗದ ಶತಕ ವೀರ ವೈಭವ್‌ ಸೂರ್ಯವಂಶಿಗೆ ಬಂಪರ್ ಬಹುಮಾನ

Date:

ತನ್ನ ಚೊಚ್ಚಲ ಐಪಿಎಲ್ ಆವೃತ್ತಿಯಲ್ಲಿ ದಾಖಲೆಯ ಸ್ಫೋಟಕ ಶತಕ ಸಿಡಿಸಿದ ವೈಭವ್‌ ಸೂರ್ಯವಂಶಿಗೆ ಬಿಹಾರ ರಾಜ್ಯ ಸರ್ಕಾರ ಬಂಪರ್‌ ಬಹುಮಾನ ಘೋಷಿಸಿದೆ.

ಶತಕ ಬಾರಿಸಿದ ವೈಭವ್‌ ಸೂರ್ಯವಂಶಿಗೆ ಸಿಎಂ ನಿತೀಶ್‌ ಕುಮಾರ್‌ ತಮ್ಮ ನಿವಾಸದಲ್ಲಿ ಸನ್ಮಾನಿಸಿದರು. ಇದೇ ವೇಳೆ ಬಿಹಾರ ರಾಜ್ಯ ಸರ್ಕಾರದಿಂದ 10 ಲಕ್ಷ ರೂ. ಬಹುಮಾನವನ್ನೂ ಘೋಷಿಸಿದರು.

ವೈಭವ್‌ ಸೂರ್ಯವಂಶಿಗೆ ಅಭಿನಂದನೆ ತಿಳಿಸಿ ಮಾತನಾಡಿದ ಅವರು, ಕಿರಿಯ ವಯಸ್ಸಿನಲ್ಲೇ ಅವರ ಪ್ರತಿಭೆ ಮುಂದೆ ಭಾರತೀಯ ಕ್ರಿಕೆಟ್‌ಗೆ ಹೊಸ ಭರವಸೆಯಾಗಿದೆ. ಇಂದು ಇಡೀ ದೇಶವೇ ಅವನ ಬಗ್ಗೆ ಹೆಮ್ಮೆ ಪಡುತ್ತಿದೆ. 2024ರಲ್ಲಿ ನಾನು ವೈಭವ್‌ ಮತ್ತು ಅವರ ತಂದೆಯನ್ನ ಭೇಟಿಯಾಗಿದ್ದೆ, ಆಗಲೇ ನಾನು ಅವರ ಭವಿಷ್ಯ ಉಜ್ವಲವಾಗಿರಲಿದೆ ಎಂದು ಹಾರೈಸಿದ್ದೆ. ಹಾಗೆಯೇ ಇಂದು ಯಶಸ್ಸು ಕಾಣುತ್ತಿದ್ದಾರೆ. ಐಪಿಎಲ್‌ನಲ್ಲಿ ಅವರ ಅತ್ಯುತ್ತಮ ಪ್ರದರ್ಶನದ ಬಳಿಕ ನಾನು ಅವರಿಗೆ ಕರೆ ಮಾಡಿ ಮಾತನಾಡಿದ್ದೆ. ವೈಭವ್ ಭವಿಷ್ಯದಲ್ಲಿ ಭಾರತೀಯ ಕ್ರಿಕೆಟ್‌ ತಂಡದಲ್ಲಿ ಇನ್ನಷ್ಟು ದಾಖಲೆಗಳನ್ನು ನಿರ್ಮಿಸಿ ದೇಶಕ್ಕೆ ಕೀರ್ತಿ ತರಲೆಂದು ಹಾರೈಸುತ್ತೇನೆ ಎಂದು ಶುಭಕೋರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚೊಚ್ಚಲ ಪಂದ್ಯದಲ್ಲೇ ಸಿಕ್ಸರ್ ಸಿಡಿಸುವ ಮೂಲಕ ಐಪಿಎಲ್‌ಗೆ ಪದಾರ್ಪಣೆ ಮಾಡಿದ ವೈಭವ್ ಸೂರ್ಯವಂಶಿ 3ನೇ ಪಂದ್ಯದಲ್ಲೇ ಸ್ಫೋಟಕ ಶತಕ ಸಿಡಿಸಿ ಇತಿಹಾಸ ಸೃಷ್ಟಿಸಿದ್ದಾರೆ. ಗುಜರಾತ್ ಟೈಟಾನ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದು 35 ಎಸೆತಗಳಲ್ಲಿ ಶತಕ ಸಿಡಿಸಿದ್ದಾರೆ. ಈ ಮೂಲಕ ಐಪಿಎಲ್‌ ಇತಿಹಾಸದಲ್ಲಿ ವೇಗದ ಶತಕ ಬಾರಿಸಿದ 2ನೇ ಆಟಗಾರ ಹಾಗೂ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಈ ಸುದ್ದಿ ಓದಿದ್ದೀರಾ? ಐಪಿಎಲ್ 2025 | ಗೆಲುವಿನತ್ತ ಸಮೀಪಿಸಿದ್ದ ರಾಜಸ್ಥಾನ ರಾಯಲ್ಸ್ ಮಣಿಸಿದ ಆ ಒಂದು ಕ್ಯಾಚ್‌

ಐಪಿಎಲ್ ಇತಿಹಾಸದಲ್ಲೇ ಅತಿ ವೇಗದ ಶತಕ ಸಿಡಿಸಿದ ಖ್ಯಾತಿ ಕ್ರಿಸ್ ಗೇಲ್ (30 ಎಸೆತ) ಅವರ ಹೆಸರಿನಲ್ಲಿದೆ. ಇದೀಗ 35 ಎಸೆತಗಳಲ್ಲಿ ಶತಕ ಬಾರಿಸುವ ಮೂಲಕ ವೈಭವ್ ಸೂರ್ಯವಂಶಿ 2ನೇ ಸ್ಥಾನಕ್ಕೆ ಜಿಗಿದಿದ್ದಾರೆ. ಉಳಿದಂತೆ ಯೂಸೂಫ್ ಪಠಾಣ್ (37 ಎಸೆತ), ಡೇವಿಡ್ ಮಿಲ್ಲರ್ (38 ಎಸೆತ), ಟ್ರಾವಿಸ್ ಹೆಡ್ (39 ಎಸೆತ) ಕಡಿಮೆ ಎಸೆತಗಳಲ್ಲಿ ಶತಕ ಸಿಡಿಸಿದ ಟಾಪ್-5 ಆಟಗಾರ ಪಟ್ಟಿಯಲ್ಲಿದ್ದಾರೆ.

ವೈಭವ್ ಈ ಆವೃತ್ತಿಯಲ್ಲಿ ವೇಗದ ಅರ್ಧಶತಕ ಸಿಡಿಸಿದ ದಾಖಲೆ ಬರೆದಿದ್ದಾರೆ. ಜೊತೆಗೆ ಅತೀ ಕಿರಿಯ ವಯಸ್ಸಿಗೆ ಈ ಸಾಧನೆ ಮಾಡಿದ ಮೊದಲಿಗನಾಗಿದ್ದಾರೆ. ಇಡೀ ಐಪಿಎಲ್‌ನಲ್ಲೇ ಅತೀ ವೇಗದ ಅರ್ಧಶತಕ ಸಿಡಿಸಿದ ದಾಖಲೆ ಯಶಸ್ವಿ ಜೈಸ್ವಾಲ್ ಹೆಸರಲ್ಲಿದೆ. 2023ರ ಆವೃತ್ತಿಯಲ್ಲಿ ಜೈಸ್ವಾಲ್ ಕೆಕೆಆರ್ ವಿರುದ್ಧ ಕೇವಲ 13 ಎಸೆತಗಳಲ್ಲಿಅರ್ಧ ಶತಕ ಬಾರಿಸಿದ್ದರು. 2018ರಲ್ಲಿ ಕೆ.ಎಲ್ ರಾಹುಲ್, 2022ರಲ್ಲಿ ಪ್ಯಾಟ್ ಕಮ್ಮಿನ್ಸ್ (ಅಂದು ಕೆಕೆಆರ್) ಮುಂಬೈ ವಿರುದ್ಧ 14 ಎಸೆತಗಳಲ್ಲಿ ಅರ್ಧಶತಕ ಬಾರಿಸಿ ಕ್ರಮವಾಗಿ 2, 3ನೇ ಸ್ಥಾನಗಳಲ್ಲಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...