ನಿತೀಶ್ ಕುಮಾರ್‌ ರೆಡ್ಡಿ ಚೊಚ್ಚಲ ಶತಕ: ಕುಂಬ್ಳೆ, ಸಚಿನ್‌ ದಾಖಲೆ ಸರಿಗಟ್ಟಿದ ಯುವ ಆಟಗಾರ

Date:

ಯುವ ಆಟಗಾರ ನಿತೀಶ್ ಕುಮಾರ್ ರೆಡ್ಡಿ ಬಾಕ್ಸಿಂಗ್‌ ಡೇ ಟೆಸ್ಟ್ ಪಂದ್ಯದಲ್ಲಿ ಚೊಚ್ಚಲ ಶತಕ ದಾಖಲಿಸಿದರು. ತಮ್ಮ ನಾಲ್ಕನೇ ಟೆಸ್ಟ್ ಪಂದ್ಯವಾಡುತ್ತಿರುವ 21 ವರ್ಷದ ನಿತೀಶ್‌ ಮತ್ತೊಬ್ಬ ಯುವ ಆಟಗಾರ ವಾಷಿಂಗ್ಟನ್‌ ಸುಂದರ್‌ ಜೊತೆಗೂಡಿ ಟೀಂ ಇಂಡಿಯಾವವನ್ನು ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಬಾಕ್ಸರ್‌ – ಗವಾಸ್ಕರ್‌ ಟ್ರೋಫಿಯಲ್ಲಿ 8ನೇ ವಿಕೆಟ್‌ಗೆ 127 ರನ್‌ಗಳ ಜೊತೆಯಾಟದ ಮೂಲಕ ಫಾಲೋ ಆನ್‌ನಿಂದ ಪಾರು ಮಾಡಿದರು.

176 ಚೆಂಡುಗಳಲ್ಲಿ ನಿತೀಶ್ ಕುಮಾರ್‌ ರೆಡ್ಡಿ 10 ಬೌಂಡರಿ ಒಂದು ಸಿಕ್ಸರ್‌ನೊಂದಿಗೆ ಅಜೇಯ 105 ರನ್‌ ಬಾರಿಸಿದ್ದಾರೆ. 8ನೇ ಕ್ರಮಾಂಕದ ಆಟಗಾರ ಆಸೀಸ್‌ ಪಿಚ್‌ನಲ್ಲಿ ಶತಕ ಬಾರಿಸಿರುವುದು ಕೂಡ ದಾಖಲೆಯಾಗಿದೆ. ಈ ಮೊದಲು ಅನಿಲ್‌ ಕುಂಬ್ಳೆ 2008ರಲ್ಲಿ 87 ರನ್‌ ಪೇರಿಸಿದ್ದು ಇಲ್ಲಿಯವರೆಗಿನ ಅತ್ಯುತ್ತಮ ವೈಯಕ್ತಿಕ ಮೊತ್ತವಾಗಿತ್ತು.

8ನೇ ವಿಕೆಟ್‌ ಜೊತೆಯಾಟದಲ್ಲೂ 127 ರನ್‌ ಕಲೆ ಹಾಕಿರುವುದು ಆಸ್ಟ್ರೇಲಿಯಾದಲ್ಲಿನ ಎರಡನೇ ಅತ್ಯುತ್ತಮ ಮೊತ್ತವಾಗಿದೆ. ಸಚಿನ್‌ ತೆಂಡೂಲ್ಕರ್ ಹಾಗೂ ಹರ್‌ಭಜನ್‌ ಸಿಂಗ್‌ 2008ರಲ್ಲಿ 129 ರನ್‌ ದಾಖಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಾಗೆಯೇ ಆಸೀಸ್‌ ಪಿಚ್‌ನಲ್ಲಿ ಶತಕ ಬಾರಿಸಿದ ಮೂರನೇ ಯುವ ಆಟಗಾರ ಎಂಬ ಹೆಚ್ಚಳಿಗೆ ನಿತೀಶ್‌ ಕುಮಾರ್‌ ರೆಡ್ಡಿ ಅವರದಾಗಿದೆ. ಸಚಿನ್‌ 1992ರಲ್ಲಿ 18ನೇ ವಯಸ್ಸಿಗೆ ಶತಕ ಬಾರಿಸಿದ್ದರೆ, ರಿಷಬ್‌ ಪಂತ್‌ 2019ರಲ್ಲಿ 21 ವರ್ಷ 92 ದಿನಗಳಲ್ಲಿ 100 ದಾಖಲಿಸಿದ್ದರು. ನಿತೀಶ್ 21 ವರ್ಷ 216 ದಿನಗಳಲ್ಲಿ ಆಸ್ಟ್ರೇಲಿಯಾ ಪಿಚ್‌ನಲ್ಲಿ ಶತಕ ದಾಖಲಿಸಿದ್ದಾರೆ.

ಮಂದ ಬೆಂಕಿನ ಕಾರಣದಿಂದ ಮೂರನೇ ದಿನದಾಟ ಮುಕ್ತಾಯಗೊಂಡಿದ್ದು, ಟೀಂ ಇಂಡಿಯಾ ಮೊದಲ ಇನಿಂಗ್ಸ್‌ನಲ್ಲಿ 116 ಓವರ್‌ಗಳಲ್ಲಿ 9 ವಿಕೆಟ್‌ ನಷ್ಟಕ್ಕೆ 358 ರನ್‌ ಕಲೆ ಹಾಗಿದ್ದು. ಆಸೀಸ್‌ ಮೊದಲ ಇನಿಂಗ್ಸ್‌ನ 474 ರನ್‌ಗಳನ್ನು ಸರಿಗಟ್ಟಲು 116 ರನ್‌ ಅಗತ್ಯವಿದೆ.

ಈ ಸುದ್ದಿ ಓದಿದ್ದೀರಾ? ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಪ್ರಕಟ: ಫೈನಲ್‌ಗೆ ಭಾರತ – ಪಾಕ್‌ ಜೊತೆಯಾದರೆ ಎರಡು ಸ್ಥಳ ನಿಗದಿ!

ನಿತೀಶ್‌ ಅವರೊಂದಿಗೆ ರಕ್ಷಣಾತ್ಮಕ ಆಟವಾಡಿದ ವಾಷಿಂಗ್ಟನ್ ಸುಂದರ್, 162 ಎಸೆತಗಳಲ್ಲಿ ಒಂದು ಬೌಂಡರಿ ನೆರವಿನಿಂದ 50 ರನ್ ಗಳಿಸಿದರು.

ಎರಡನೇ ದಿನ 5 ವಿಕೆಟ್ ನಷ್ಟಕ್ಕೆ 164 ರನ್ ಗಳಿಸಿ, ಫಾಲೋ ಆನ್ ಭೀತಿಗೆ ಒಳಗಾಗಿದ್ದ ಟೀಂ ಇಂಡಿಯಾ ಇಂದು ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಹಾಗೂ ಆಲ್ ರೌಂಡರ್ ರವೀಂದ್ರ ಜಡೇಜಾರನ್ನು ಬಹುಬೇಗನೆ ಕಳೆದುಕೊಂಡಿತು.

ಆದರೆ ಈ ಸಂದರ್ಭದಲ್ಲಿ ಅಪಾಯದಿಂದ ಪಾರು ಮಾಡಿದವರು ಆಲ್‌ರೌಂಡರ್‌ಗಳಾದ ನಿತೀಶ್ ಕುಮಾರ್ ರೆಡ್ಡಿ ಹಾಗೂ ವಾಷಿಂಗ್ಟನ್ ಸುಂದರ್.

ಆಸ್ಟ್ರೇಲಿಯ ತಂಡದ ಸ್ಕಾಟ್ ಬೋಲಂಡ್, ಪ್ಯಾಟ್ ಕಮಿನ್ಸ್ ತಲಾ 3 ವಿಕೆಟ್ ಕಬಳಿಸಿದರೆ ಹಾಗೂ ನಥಾನ್ ಲಿಯೋನ್ 2 ವಿಕೆಟ್ ಪಡೆದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...