ನಿತೀಶ್ – ವಾಷಿಂಗ್ಟನ್‌ ಶತಕದ ಜೊತೆಯಾಟ: ಟೀಂ ಇಂಡಿಯಾ ಫಾಲೋ ಆನ್‌ನಿಂದ ಪಾರು

Date:

ಟೀಂ ಇಂಡಿಯಾ ಯುವ ಆಟಗಾರರಾದ ನಿತೀಶ್ ಕುಮಾರ್ ರೆಡ್ಡಿ ಹಾಗೂ ವಾಷಿಂಗ್ಟನ್‌ ಸುಂದರ್‌ ಅವರ 8ನೇ ವಿಕೆಟ್‌ಗೆ ಶತಕದ ಜೊತೆಯಾಟದಿಂದ ಟೀಂ ಇಂಡಿಯಾ ಬಾರ್ಡರ್‌ – ಗವಾಸ್ಕರ್ ಟ್ರೋಫಿಯ ಬಾಕ್ಸಿಂಗ್‌ ಡೇ ಟೆಸ್ಟ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಫಾಲೋ ಆನ್‌ನಿಂದ ಪಾರಾಗಿದೆ.

ಮೆಲ್ಬೋರ್ನ್‌ನ ಎಂಸಿಜಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ನಾಲ್ಕನೇ ಟೆಸ್ಟ್‌ನ ಮೂರನೆ ದಿನದಾಟದಲ್ಲಿ ನಿತೀಶ್ ಕುಮಾರ್ ರೆಡ್ಡಿ ಹಾಗೂ ವಾಷಿಂಗ್ಟನ್ ಸುಂದರ್ ಉತ್ತಮ ಆಟವಾಡಿ ಮುರಿಯದ 8ನೇ ವಿಕೆಟ್‌ ನಷ್ಟಕ್ಕೆ 193 ಎಸೆತಗಳಲ್ಲಿ 105 ರನ್‌ ಕಲೆ ಹಾಕಿದರು.

ಆಕ್ರಮಣಕಾರಿ ಬ್ಯಾಟಿಂಗ್ ಪ್ರದರ್ಶಿಸಿದ ನಿತೀಶ್ , 119 ಚೆಂಡುಗಳಲ್ಲಿ 8 ಬೌಂಡರಿ ಹಾಗೂ ಒಂದು ಸಿಕ್ಸರ್ ನೆರವಿನಿಂದ ಅಜೇಯ 85 ರನ್ ಗಳಿಸಿ, ಶತಕದತ್ತ ದಾಪುಗಾಲು ಹಾಕಿದ್ದಾರೆ. ಇವರೊಂದಿಗೆ ರಕ್ಷಣಾತ್ಮಕ ಆಟವಾಡಿದ ವಾಷಿಂಗ್ಟನ್ ಸುಂದರ್, 115 ಎಸೆತಗಳಲ್ಲಿ ಒಂದು ಬೌಂಡರಿ ನೆರವಿನಿಂದ ಅಜೇಯ 40 ರನ್ ಗಳಿಸಿ ಅಜೇಯರಾಗಿ ಉಳಿದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಪ್ರಕಟ: ಫೈನಲ್‌ಗೆ ಭಾರತ – ಪಾಕ್‌ ಜೊತೆಯಾದರೆ ಎರಡು ಸ್ಥಳ ನಿಗದಿ!

ಭಾರತವು ಟೀ ವಿರಾಮದ ವೇಳೆಗೆ 98 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 326 ರನ್‌ ಗಳಿಸಿದೆ. ಆಸೀಸ್‌ನ ಮೊದಲ ಇನಿಂಗ್ಸ್‌ ಸರಿಗಟ್ಟಲು 148 ರನ್‌ ಗಳಿಸಬೇಕಿದೆ. ಎರಡನೇ ದಿನ 5 ವಿಕೆಟ್ ನಷ್ಟಕ್ಕೆ 164 ರನ್ ಗಳಿಸಿ, ಫಾಲೋ ಆನ್ ಭೀತಿಗೆ ಒಳಗಾಗಿದ್ದ ಟೀಂ ಇಂಡಿಯಾ ಇಂದು ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಹಾಗೂ ಆಲ್ ರೌಂಡರ್ ರವೀಂದ್ರ ಜಡೇಜಾರನ್ನು ಬಹುಬೇಗನೆ ಕಳೆದುಕೊಂಡಿತು.

ಆದರೆ ಈ ಸಂದರ್ಭದಲ್ಲಿ ಅಪಾಯದಿಂದ ಪಾರು ಮಾಡಿದವರು ಆಲ್‌ರೌಂಡರ್‌ಗಳಾದ ನಿತೀಶ್ ಕುಮಾರ್ ರೆಡ್ಡಿ (ಅಜೇಯ 85) ಹಾಗೂ ವಾಷಿಂಗ್ಟನ್ ಸುಂದರ್.

ಆಸ್ಟ್ರೇಲಿಯ ತಂಡದ ಪರ ಕೇವಲ 49 ರನ್ ನೀಡಿ ಮೂರು ಪ್ರಮುಖ ವಿಕೆಟ್ ಗಳನ್ನು ಕಿತ್ತ ಸ್ಕಾಟ್ ಬೋಲಂಡ್ ಯಶಸ್ವಿ ಬೌಲರ್ ಆದರು.ಉಳಿದಂತೆ ಪ್ಯಾಟ್ ಕಮಿನ್ಸ್ 2 ವಿಕೆಟ್ ಹಾಗೂ ನಥಾನ್ ಲಿಯೋನ್ ಒಂದು ವಿಕೆಟ್ ಪಡೆದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...