ಮೈದಾನದ ಮಣ್ಣು ಸವಿದ ಭಾವನಾತ್ಮಕ ಅನುಭವದ ಬಗ್ಗೆ ರೋಹಿತ್ ಶರ್ಮಾ ಮಾತು

Date:

ಟೀಂ ಇಂಡಿಯಾ 17 ವರ್ಷದ ನಂತರ ಟಿ20 ವಿಶ್ವಕಪ್‌ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ. ವಿಶ್ವಕಪ್‌ ಗೆಲುವಿನ ನಂತರ ಭಾರತದ ಆಟಗಾರರು ಕಣ್ಣೀರು, ಪರಸ್ಪರ ಆಲಿಂಗನ, ಆಕಾಶಕ್ಕೆ ಎಸೆಯುವಿಕೆ ಸೇರಿದ ಖುಷಿಯ ಕ್ಷಣಗಳನ್ನುಸೇರಿ ತಮ್ಮ ಭಾವನಾತ್ಮಕ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು. ಇದೇ ಸಂದರ್ಭದಲ್ಲಿ ನಾಯಕ ರೋಹಿತ್‌ ಶರ್ಮಾ ಭಾರತ ಗೆಲುವು ಸಾಧಿಸಿದ ನಂತರ ಬರ್ಬೊಡೊಸ್ ಮೈದಾನದ ಮಣ್ಣನ್ನು ಕೂಡ ಸವಿದರು. ಇವೆಲ್ಲವೂ ಕ್ಯಾಮರಾದಲ್ಲಿ ಸೆರೆಯಾಯಿತು.

ಬಿಸಿಸಿಐಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ರೋಹಿತ್ ಶರ್ಮಾ, “ಇದ್ಯಾವುದನ್ನು ಮೊದಲೇ ಅಂದುಕೊಂಡಿರಲಿಲ್ಲ. ನಾನು ಆ ಕ್ಷಣವನ್ನು ಅನುಭವಿಸುತ್ತಿದೆ. ನಮಗೆ ವಿಶ್ವಕಪ್‌ ಟ್ರೋಫಿ ನೀಡಿದ ಕಾರಣಕ್ಕಾಗಿ ಪಿಚ್‌ನ ಮಣ್ಣನ್ನು ಸವಿದೆ. ಈ ನಿರ್ದಿಷ್ಟ ಮೈದಾನ ಹಾಗೂ ಪಿಚ್‌ಅನ್ನು ನಾನು ನನ್ನ ಜೀವನದಲ್ಲಿ ಸದಾ ನೆನಪಿಸಿಕೊಳ್ಳುತ್ತೇನೆ” ಎಂದು ತಿಳಿಸಿದ್ದಾರೆ.

“ಈ ಕ್ಷಣಗಳು ತುಂಬ ಮುಖ್ಯವಾಗಿತ್ತು. ಆದ ಕಾರಣ ನಾನು ಈ ಪಿಚ್‌ನ ಚೂರು ಮಣ್ಣನ್ನು ಸೇವಿಸಲು ಬಯಸಿದ್ದೆ. ನಮ್ಮೆಲ್ಲರ ಕನಸುಗಳು ನನಸಾಗುವ ಸ್ಥಳದಲ್ಲಿ ನಾನೇದರೂ ಮಾಡಲು ಬಯಸಿದ್ದೆ. ಹಾಗಾಗಿ ಮಣ್ಣು ಸೇವನೆಯ ಹಿಂದಿನ ಭಾವನೆ ಅದಾಗಿತ್ತು” ಎಂದು ರೋಹಿತ್‌ ಮಣ್ಣು ಸವಿದ ಕ್ಷಣದ ಬಗ್ಗೆ ವಿವರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಟಿ20 ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ 125 ಕೋಟಿ ರೂ. ಬಹುಮಾನ ಘೋಷಿಸಿದ ಬಿಸಿಸಿಐ

“ಇದನ್ನು ನಂಬಲು ಸಾಧ್ಯವಾಗುತ್ತಿಲ್ಲ. ಕನಸಿನಂತೆ ಭಾಸವಾಗುತ್ತಿದೆ. ವಿಶ್ವಕಪ್‌ ಗೆದ್ದರೂ ಸಹ ಗೆದ್ದಿಲ್ಲವೇ ಎಂದು ಅನಿಸುತ್ತಿದೆ. ರಾತ್ರಿಯಿಡೀ ನಾವು ಸಹ ಆಟಗಾರರೊಂದಿಗೆ ಸಂಭ್ರಮಿಸಿದೆವು. ನನಗೆ ನಿದ್ರಿಸಲು ಸಾಧ್ಯವಾಗಿರಲಿಲ್ಲ. ಆದರೂ ಪರವಾಗಿಲ್ಲ. ತವರಿಗೆ ಹೋಗಿ ನಿದ್ರಿಸಲು ಬೇಕಾದಷ್ಟು ಸಮಯವಿದೆ” ಎಂದು ಹೇಳಿದರು.

“ದೀರ್ಘ ಸಮಯದಿಂದ ಟ್ರೋಫಿ ಗೆಲ್ಲುವ ಬಗ್ಗೆ ಕನಸು ಕಂಡಿದ್ದೆವು. ಒಂದು ತಂಡವಾಗಿ ಅದಕ್ಕಾಗಿ ಕಠಿಣ ಪರಿಶ್ರಮ ವಹಿಸಿದ್ದೆವು. ತುಂಬಾ ಕಷ್ಟಪಟ್ಟು ಕೊನೆಗೆ ಟ್ರೋಫಿ ಗೆದ್ದಾಗ ತುಂಬಾ ಸಂತೋಷವಾಗುತ್ತಿದೆ. ನಾವೀಗ ನಿರಾಳಗೊಂಡಿದ್ದೇವೆ. ವಿಶ್ವಕಪ್‌ ಗೆಲುವಿನ ಹಿಂದೆ ತಂಡದ ಹಲವಾರು ವರ್ಷಗಳ ಪರಿಶ್ರಮವಿದೆ” ಎಂದು ಈ ಗೆಲುವು ಅತ್ಯಂತ ವಿಶೇಷ ಎಂದು ರೋಹಿತ್‌ ಶರ್ಮಾ ಬಣ್ಣಿಸಿದ್ದಾರೆ.

ಸರ್ಬಿಯಾದ ಟೆನಿಸ್‌ ಆಟಗಾರ ನೊವಾಕ್‌ ಜೊಕೊವಿಕ್ ಕೂಡ 2011ರ ವಿಂಬಲ್ಡನ್‌ ಫೈನಲ್‌ನಲ್ಲಿ ರಫೆಲ್ ನಡಾಲ್‌ ಅವರನ್ನು ಮಣಿಸಿದ ನಂತರ ಟೆನಿಸ್‌ ಮೈದಾನದಲ್ಲಿ ಹುಲ್ಲನ್ನು ಸವಿದಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...