ಪಾಕ್ ವಿರುದ್ಧ ಏಕದಿನ ಪಂದ್ಯ: ಮುಖಕ್ಕೆ ಬಡಿದ ಚೆಂಡು; ನ್ಯೂಜಿಲ್ಯಾಂಡ್ ಆಟಗಾರ ರಚಿನ್ ರವೀಂದ್ರಗೆ ಗಂಭೀರ ಗಾಯ

Date:

ಪಾಕಿಸ್ತಾನ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ತಂಡದ ಬ್ಯಾಟ್ಸ್‌ಮನ್ ರಚಿನ್ ರವೀಂದ್ರ ಮೈದಾನದಲ್ಲಿ ಫೀಲ್ಡಿಂಗ್ ವೇಳೆ ಚೆಂಡು ಮುಖಕ್ಕೆ ಬಡಿದು, ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.

37ನೇ ಓವರ್‌ನಲ್ಲಿ ಡೀಪ್ ಸ್ಕ್ವೇರ್ ಲೆಗ್‌ನಲ್ಲಿ ಫೀಲ್ಡಿಂಗ್ ಮಾಡುತ್ತಿದ್ದ ರವೀಂದ್ರ, ಖುಷ್ದಿಲ್ ಶಾ ಮೈಕೆಲ್ ಬ್ರೇಸ್‌ವೆಲ್ ಅವರ ಎಸೆತದಲ್ಲಿ ಸಿಕ್ಸ್ ಬಾರಿಸಲು ಆನ್ ಸೈಡ್ ಕಡೆಗೆ ಸ್ವೀಪ್ ಮಾಡಿ, ಜೋರಾಗಿ ಬ್ಯಾಟ್ ಬೀಸಿದ್ದರು. ತನ್ನತ್ತ ಬಂದ ಚೆಂಡನ್ನು ಕ್ಯಾಚ್ ಆಗಿ ಪರಿವರ್ತಿಸಿಕೊಳ್ಳಲು ನಿಂತಿದ್ದ ರಚಿನ್ ರವೀಂದ್ರ ಅವರ ಮುಖಕ್ಕೆ ನೇರವಾಗಿ ಬಡಿದಿದ್ದರಿಂದ ಗಂಭೀರ ಸ್ವರೂಪದ ಗಾಯವಾಗಿದೆ.

1003370291

ಹೊನಲು ಬೆಳಕಿನಲ್ಲಿ ನಡೆಯುತ್ತಿದ್ದ ಪಂದ್ಯದಲ್ಲಿ ಚೆಂಡನ್ನು ಕ್ಯಾಚ್ ಆಗಿ ಪರಿವರ್ತಿಸಲು ಯತ್ನಿಸಿದಾಗ ಅವರ ಹಣೆಯ ಮೇಲೆ ನೇರವಾಗಿ ಬಡಿದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚೆಂಡು ಬಡಿಯುತ್ತಿದ್ದಂತೆಯೇ ತಪ್ಪಿಸಿಕೊಳ್ಳಲು ಯತ್ನಿಸದರಾದರೂ ಅದು ಸಾಧ್ಯವಾಗಲಿಲ್ಲ.

ಮುಖಕ್ಕೆ ಚೆಂಡು ಬಡಿದ ಬಳಿಕ ನೆಲವನ್ನು ದಿಗ್ಭ್ರಮೆಗೊಂಡು ನೋಡುತ್ತಿದ್ದರು.‌ ಈ ವೇಳೆ ರಕ್ತವು ಅವರ ಮುಖದ ಮೇಲೆ ಹರಿಯುತ್ತಿರುವುದನ್ನು ಗಮನಿಸಿದ ವೈದ್ಯಕೀಯ ಸಿಬ್ಬಂದಿ ಮೈದಾನಕ್ಕೆ ಧಾವಿಸಿದರು.

ಅಂತಿಮವಾಗಿ ಮೈದಾನದಲ್ಲಿದ್ದ ಪಾಕಿಸ್ತಾನ ತಂಡದ ವೈದ್ಯರು ಸಹ ಪ್ರಥಮ ಚಿಕಿತ್ಸೆ ನೀಡಲು ಧಾವಿಸಿದರು. ಕೆಲವು ನಿಮಿಷಗಳ ಚಿಕಿತ್ಸೆ ಪಡೆಯುತ್ತಾ ನೆಲದ ಮೇಲೆ ಮಲಗಿದ ನಂತರ, ರವೀಂದ್ರ ವೈದ್ಯಕೀಯ ಸಿಬ್ಬಂದಿಯ ಸಹಾಯದಿಂದ ಎದ್ದು, ತಲೆಗೆ ಟವಲ್ ಹಿಡಿದು ಮೈದಾನದಿಂದ ಹೊರನಡೆದರು.

ಪಂದ್ಯವನ್ನು ಕಣ್ತುಂಬಿಸಿಕೊಳ್ಳಲೆಂದು ಗದ್ದಾಫಿ ಕ್ರೀಡಾಂಗಣಕ್ಕೆ ಬಂದಿದ್ದ ಕ್ರೀಡಾಭಿಮಾನಿಗಳು ಈ ಘಟನೆಯಿಂದ ತಬ್ಬಿಬ್ಬಾದದಲ್ಲದೇ, ಇಡೀ ಮೈದಾನದಲ್ಲಿ ಮೌನ ಆವರಿಸಿತ್ತು. ರಚಿನ್ ರವೀಂದ್ರ ಎದ್ದು ವೈದ್ಯಕೀಯ ಸಿಬ್ಬಂದಿಯ ಜೊತೆಗೆ ಮೈದಾನದಿಂದ ಹೊರ ನಡೆಯುತ್ತಿದ್ದಂತೆಯೇ ಚಪ್ಪಾಳೆ ತಟ್ಟಿದರು. ಆ ಬಳಿಕ ಅವರನ್ನು ಹೆಚ್ಚಿನ ಚಿಕಿತ್ಸೆ ನೀಡಲು ಆಸ್ಪತ್ರೆಗೆ ಸೇರಿಸಲಾಗಿದೆ.

ಲಾಹೋರಿನ ಗದ್ದಾಫಿ ಕ್ರೀಡಾಂಗಣದಲ್ಲಿ ನಡೆದ ಇಂದಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ್ದ ನ್ಯೂಜಿಲ್ಯಾಂಡ್, ಗ್ಲೆನ್ ಫಿಲಿಪ್ಸ್ ಅವರ ಶತಕದ ನೆರವಿನಿಂದ ಪಾಕಿಸ್ತಾನಕ್ಕೆ 330 ರನ್‌ಗಳ ಗುರಿಯನ್ನು ನೀಡಿತ್ತು. ಈ ಗುರಿಯನ್ನು ತಲುಪಲು ತಲುಪಲು ವಿಫಲವಾದ ಪಾಕ್ ತಂಡವು, 78 ರನ್‌ಗಳ ಅಂತರದಿಂದ ಸೋಲೊಪ್ಪಿಕೊಂಡಿತು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...