ಏಕದಿನ ವಿಶ್ವಕಪ್ | ಇಂಗ್ಲೆಂಡ್ ಬಿಗಿ ಬೌಲಿಂಗ್‌ಗೆ ತತ್ತರಿಸಿದ ಟೀಂ ಇಂಡಿಯಾಗೆ ಆರಂಭಿಕ ಆಘಾತ

Date:

ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಸತತ ಐದು ಪಂದ್ಯಗಳನ್ನು ಗೆದ್ದು ಉತ್ತಮ ಫಾರ್ಮ್‌ನಲ್ಲಿದ್ದ ಟೀಮ್ ಇಂಡಿಯಾ, ಇಂದು ಇಂಗ್ಲೆಂಡ್‌ ವಿರುದ್ಧ ಲಕ್ನೋದ ಏಕನಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 6ನೇ ಪಂದ್ಯದಲ್ಲಿ ಆರಂಭಿಕ ಆಘಾತ ಅನುಭವಿಸಿದೆ.

ಇಂಗ್ಲೆಂಡ್ ವಿರುದ್ಧದ ಇಂದಿನ ಪಂದ್ಯದಲ್ಲಿ ಟಾಸ್ ಸೋತ ರೋಹಿತ್ ಪಡೆ, ಮೊದಲು ಬ್ಯಾಟಿಂಗ್‌ ನಡೆಸುತ್ತಿದೆ. ಜೋಸ್ ಬಟ್ಲರ್ ನೇತೃತ್ವದ ಆಂಗ್ಲ ಪಡೆ ಬಿಗಿ ಬೌಲಿಂಗ್ ಮಾಡುತ್ತಿದ್ದು, 50 ರನ್ ಗಳಿಸುವಷ್ಟರಲ್ಲೇ ಪ್ರಮುಖ ಮೂರು ವಿಕೆಟ್‌ಗಳನ್ನು ಕಿತ್ತು, ಆರಂಭಿಕ ಆಘಾತ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಾಯಕ ರೋಹಿತ್ ಶರ್ಮಾರೊಂದಿಗೆ ಬ್ಯಾಟಿಂಗ್ ಆರಂಭಿಸಿದ್ದ ಯುವ ಬ್ಯಾಟರ್ ಶುಭಮನ್‌ ಗಿಲ್ 13 ಎಸೆತಗಳನ್ನು ಎದುರಿಸಿ ಒಂದು ಬೌಂಡರಿಯ ನೆರವಿನೊಂದಿಗೆ ಕೇವಲ 9 ರನ್ ಗಳಿಸಿದ್ದಾಗ ವೋಕ್ಸ್ ಎಸೆತದಲ್ಲಿ ಕ್ಲೀನ್ ಬೌಲ್ಡ್ ಆದರು.

ಆ ಬಳಿಕ ರೋಹಿತ್ ಶರ್ಮಾಗೆ ಜೊತೆಯಾದ, ಉತ್ತಮ ಫಾರ್ಮ್‌ನಲ್ಲಿದ್ದ ಬ್ಯಾಟರ್ ವಿರಾಟ್ ಕೊಹ್ಲಿ 9 ಎಸೆತಗಳನ್ನು ಎದುರಿಸಿ, ವಿಲ್ಲಿ ಎಸೆತದಲ್ಲಿ ದೊಡ್ಡ ಹೊಡೆತಕ್ಕೆ ಯತ್ನಿಸಿ, ಸ್ಟೋಕ್ಸ್‌ಗೆ ಕ್ಯಾಚಿತ್ತು ಶೂನ್ಯದೊಂದಿಗೆ ನಿರ್ಗಮಿಸಿದರು. ಆ ಮೂಲಕ ಈ ಬಾರಿಯ ವಿಶ್ವಕಪ್ ಟೂರ್ನಿಯಲ್ಲಿ ಮೊದಲ ಬಾರಿಗೆ ವಿರಾಟ್ ಕೊಹ್ಲಿ ಶೂನ್ಯಕ್ಕೆ ಔಟಾಗಿದ್ದಾರೆ.

ಬಳಿಕ ಬಂದ ಶ್ರೇಯಸ್ ಅಯ್ಯರ್, ಹಾಲಿ ಚಾಂಪಿಯನ್‌ಗಳ ಬಿಗು ಬೌಲಿಂಗ್‌ಗೆ ರನ್ ಗಳಿಸಲು ಪರದಾಡಿದರು. ಕೊನೆಯಲ್ಲಿ 16 ಎಸೆತಗಳನ್ನು ಎದುರಿಸಿ ಕೇವಲ 4 ರನ್ ಗಳಿಸಿದ್ದಾಗ, ವೋಕ್ಸ್‌ ಎಸೆತದಲ್ಲಿ ವುಡ್‌ಗೆ ಕ್ಯಾಚಿತ್ತು ಪೆವಿಲಿಯನ್‌ಗೆ ಹಿಂದಿರುಗಿದರು.

ಸದ್ಯ 20 ಓವರ್‌ಗಳು ಮುಗಿದಿದ್ದು, ಟೀಮ್ ಇಂಡಿಯಾ ಬ್ಯಾಟರ್‌ಗಳು ರನ್ ಗಳಿಸಲು ಪರದಾಡುತ್ತಿದ್ದಾರೆ.

ಸದ್ಯ ಕ್ರೀಸ್‌ನಲ್ಲಿ ನಾಯಕ ರೋಹಿತ್ ಶರ್ಮಾ 44 ರನ್ ಗಳಿಸಿ ಕ್ರೀಸ್‌ನಲ್ಲಿದ್ದರೆ, 16 ರನ್ ಗಳಿಸಿ ಕನ್ನಡಿಗ ಕೆ ಎಲ್ ರಾಹುಲ್ ಸಾಥ್ ನೀಡುತ್ತಿದ್ದಾರೆ. ಈ ಜೊತೆಯಾಟ ಮುಂದುವರಿದರೆ ದೊಡ್ಡ ಮೊತ್ತದ ಗುರಿಯನ್ನು ನಿರೀಕ್ಷಿಸಬಹುದು. 20 ಓವರ್ ಮುಕ್ತಾಯಕ್ಕೆ ಟೀಮ್ ಇಂಡಿಯಾ 3 ವಿಕೆಟ್ ಕಳೆದುಕೊಂಡು, 73 ರನ್ ಗಳಿಸಿದೆ.

ಕಳೆದ 5 ಪಂದ್ಯಗಳಲ್ಲೂ ಚೇಸ್ ಮಾಡಿ, ಟೀಮ್ ಇಂಡಿಯಾ ಎಲ್ಲವನ್ನೂ ಗೆದ್ದುಕೊಂಡಿತ್ತು. ಇಂದು ಮೊದಲು ಬ್ಯಾಟಿಂಗ್ ಆರಂಭಿಸಿರುವ ಟೀಂ ಇಂಡಿಯಾ, ಸತತ ಸೋಲಿನಿಂದ ಕಂಗೆಟ್ಟು, ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿರುವ ಇಂಗ್ಲೆಂಡ್ ವಿರುದ್ಧ ಗೆಲುವಿಗಾಗಿ ಬೃಹತ್ ರನ್ ಪೇರಿಸಬೇಕಿದೆ.

ಈ ಪಂದ್ಯದೊಂದಿಗೆ ರೋಹಿತ್‌ ಶರ್ಮಾ ನಾಯಕನಾಗಿ 100ನೇ ಪಂದ್ಯವಾಡುತ್ತಿದ್ದಾರೆ. ಏಕದಿನ ವಿಶ್ವಕಪ್​ ಇತಿಹಾಸ ಗಮನಿಸಿದರೆ ಕಳೆದ 20 ವರ್ಷಗಳಿಂದ ಇಂಗ್ಲೆಂಡ್​ ವಿರುದ್ಧ ಭಾರತ ಗೆದ್ದೇ ಇಲ್ಲ. ವಿಶ್ವಕಪ್‌ ಇತಿಹಾಸದಲ್ಲಿ ಎರಡೂ ತಂಡಗಳು ಒಟ್ಟು 8 ಬಾರಿ ಪರಸ್ಪರ ಎದುರಾಗಿವೆ. ಎಲ್ಲ ಪಂದ್ಯಗಳಲ್ಲೂ ಇಂಗ್ಲೆಂಡ್​ ತಂಡವೇ ಮೇಲುಗೈ ಸಾಧಿಸಿರುವುದು ವಿಶೇಷ. ಭಾರತ 3ರಲ್ಲಿ ಗೆದ್ದಿದ್ದರೆ, 4ರಲ್ಲಿ ಇಂಗ್ಲೆಂಡ್ ತಂಡ ಜಯಿಸಿತ್ತು. 1 ಪಂದ್ಯ ಟೈನಲ್ಲಿ ಅಂತ್ಯಗೊಂಡಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...