ಏಕದಿನ ವಿಶ್ವಕಪ್ | ರೋಚಕ ಹಣಾಹಣಿಯಲ್ಲಿ 5 ರನ್‌ಗಳಿಂದ ಗೆದ್ದು ಬೀಗಿದ ಆಸ್ಟ್ರೇಲಿಯಾ

Date:

ಧರ್ಮಶಾಲಾದಲ್ಲಿ ಇಂದು ವಿಶ್ವಕಪ್ ಕ್ರಿಕೆಟ್ ಕೂಟದ 27ನೇ ಪಂದ್ಯದಲ್ಲಿ ನ್ಯೂಝಿಲ್ಯಾಂಡ್‌ ತಂಡ ಆಸ್ಟ್ರೇಲಿಯಾ ವಿರುದ್ಧ ಕೊನೆಯ ಎಸೆತದ ತನಕ ಹೋರಾಟ ನಡೆಸಿದರೂ, ಕೇವಲ 5 ರನ್‌ಗಳಿಂದ ಸೋಲೊಪ್ಪಿಕೊಂಡಿತು.

ಗೆಲ್ಲಲು 389 ರನ್‌ಗಳ ಬೃಹತ್ ಗುರಿ ಪಡೆದಿದ್ದ ಕೀವೀಸ್, 50 ಓವರ್‌ಗಳಲ್ಲಿ 9 ವಿಕೆಟ್ ಕಳೆದುಕೊಂಡು 383 ರನ್‌ ಗಳಿಸಿ, ಕೇವಲ 5 ರನ್‌ಗಳಿಂದ ಸೋಲೊಪ್ಪಿಕೊಂಡಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟಿದ್ದ ಪ್ಯಾಟ್ ಕಮ್ಮಿನ್ಸ್ ನೇತೃತ್ವದ ಆಸೀಸ್, ನಿಗದಿತ 49.2 ಓವರ್‌ಗಳಲ್ಲಿ ಎಲ್ಲ ವಿಕೆಟ್ ಕಳೆದುಕೊಂಡು 388 ರನ್ ದಾಖಲಿಸಿತ್ತು.

ನ್ಯೂಝಿಲ್ಯಾಂಡ್ ಪರ ಇನ್ನಿಂಗ್ಸ್ ಆರಂಭಿಸಿದ್ದ ಡೆವೊನ್ ಕಾನ್ವೆ ಹಾಗೂ ವಿಲ್ ಯಂಗ್ ಮೊದಲ ವಿಕೆಟ್‌ಗೆ 61 ರನ್‌ಗಳ ಜೊತೆಯಾಟ ನಡೆಸಿ, ಉತ್ತಮ ಆರಂಭ ಒದಗಿಸಿದ್ದರು.

ಬಳಿಕ ಕ್ರೀಸ್‌ಗೆ ಆಗಮಿಸಿದ ರಚಿನ್ ರವೀಂದ್ರ ತಾಳ್ಮೆಯ ಆಟವಾಡಿ ಇನ್ನಿಂಗ್ಸ್ ಕಟ್ಟಿದರು. 89 ಎಸೆತಗಳನ್ನು ಎದುರಿಸಿ, 9 ಬೌಂಡರಿ ಹಾಗೂ 5 ಸಿಕ್ಸ್‌ನ ನೆರವಿನಿಂದ 116 ರನ್ ಗಳಿಸಿ, ಔಟಾದರು.

ಕೊನೆಯಲ್ಲಿ ನ್ಯೂಝಿಲ್ಯಾಂಡ್ ಪರವಾಗಿ ಸ್ಫೋಟಕ ಬ್ಯಾಟಿಂಗ್ ನಡೆಸಿದ ಜಿಮ್ಮಿ ನೀಶಮ್, 39 ಎಸೆತಗಳಲ್ಲಿ 58 ರನ್ ಗಳಿಸಿ, ರನೌಟಾದರು.

ಕೊನೆಯ ಎರಡು ಎಸೆತಗಳಲ್ಲಿ ಗೆಲುವಿಗೆ 7 ರನ್ ಬೇಕಿದ್ದಾಗ, ಸ್ಟ್ರೈಕ್ ಕಾಯ್ದುಕೊಳ್ಳಲು ಜಿಮ್ಮಿ ನೀಶಮ್ ಯತ್ನಿಸಿದರು. ಬೌಂಡರಿ ಗೆರೆಯಿಂದ ಲ್ಯಾಬೂಶೈನ್ ಎಸೆದ ಥ್ರೋವನ್ನು ಆಸೀಸ್ ವಿಕೆಟ್ ಕೀಪರ್ ಇಂಗ್ಲಿಸ್ ಹಾರಿಕೊಂಡು ರನೌಟ್ ಮಾಡಿದ್ದರಿಂದ, ನ್ಯೂಝಿಲ್ಯಾಂಡ್ ಗೆಲುವಿನ ಆಸೆ ಕಮರಿತು. ಕೊನೆಯಲ್ಲಿ ನ್ಯೂಝಿಲ್ಯಾಂಡ್ 5 ರನ್‌ಗಳಿಂದ ಸೋಲೊಪ್ಪಿಕೊಳ್ಳಬೇಕಾಯಿತು.

ಆಸೀಸ್ ಪರ ಬೌಲಿಂಗ್‌ನಲ್ಲಿ ಆಡಂ ಝಾಂಪಾ 74ಕ್ಕೆ 3, ಜೋಶ್ ಹ್ಯಾಝಲ್‌ವುಡ್ 70ಕ್ಕೆ 2, ಕಮ್ಮಿನ್ಸ್‌ 66ಕ್ಕೆ 2 ಹಾಗೂ ಮ್ಯಾಕ್ಸ್‌ವೆಲ್ 62ಕ್ಕೆ 1 ವಿಕೆಟ್ ಪಡೆದುಕೊಂಡರು. ಧರ್ಮಶಾಲಾದ ಮೈದಾನದಲ್ಲಿ ನಡೆದ ಇಂದಿನ ಪಂದ್ಯದಲ್ಲಿ ಎರಡೂ ಇನ್ನಿಂಗ್ಸ್‌ನಿಂದಾಗಿ 771 ರನ್‌ಗಳು ದಾಖಲಾಗುವ ಮೂಲಕ, ರನ್‌ಗಳ ಹೊಳೆಯೇ ಹರಿಯಿತು.

ಆಸ್ಟ್ರೇಲಿಯಾ ಪರ ವಿಶ್ವಕಪ್‌ನ ಮೊದಲ ಪಂದ್ಯವನ್ನಾಡಿದ್ದ ಟ್ರಾವಿಸ್ ಹೆಡ್, ಶತಕ ಬಾರಿಸುವ ಮೂಲಕ ಬ್ಯಾಟಿಂಗ್‌ನಲ್ಲಿ ಮಿಂಚಿದ್ದರು. 67 ಎಸೆತಗಳನ್ನು ಎದುರಿಸಿದ ಹೆಡ್ 10 ಬೌಂಡರಿಗಳು ಮತ್ತು 7 ಸಿಕ್ಸರ್‌ಗಳೊಂದಿಗೆ 109 ರನ್ ಗಳಿಸಿದ್ದರು. ಈ ಹಿನ್ನೆಲೆಯಲ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...