ಪ್ರೀ ಕ್ವಾರ್ಟರ್‌ಫೈನಲ್‌ ಹಂತಕ್ಕೇರಿದ ಭಾರತದ ಮಣಿಕಾ ಬಾತ್ರಾ; ಒಲಿಂಪಿಕ್ಸ್‌ನಲ್ಲಿ ಇತಿಹಾಸ ಸೃಷ್ಟಿ

Date:

ಪ್ಯಾರಿಸ್ ಒಲಿಂಪಿಕ್ಸ್‌ 2024ರ ಟೇಬಲ್‌ ಟೆನಿಸ್‌ ಪಂದ್ಯಾವಳಿಯಲ್ಲಿ ಪ್ರೀ ಕ್ವಾರ್ಟರ್‌ಫೈನಲ್‌ ಹಂತಕ್ಕೇರಿದ ಭಾರತದ ಟೆಬಲ್‌ ಟೆನಿಸ್‌ ಆಟಗಾರ್ತಿ 29 ವರ್ಷದ ಮಣಿಕಾ ಬಾತ್ರಾ ಒಲಿಂಪಿಕ್ಸ್‌ನಲ್ಲಿ ಭಾರತದ ಪರವಾಗಿ ಇತಿಹಾಸ ಸೃಷ್ಟಿಸಿದ್ದಾರೆ.

ಮಣಿಕಾ ಬಾತ್ರಾ ಅವರು 37 ನಿಮಿಷಗಳಲ್ಲಿ ಫ್ರಾನ್ಸ್‌ನ ಎದುರಾಳಿ ಪ್ರಿತಿಕಾ ಪವಾಡೆ ಅವರನ್ನು 11-9, 11-6, 11-9, 11-7 ಅಂತರದಲ್ಲಿ ಪರಾಭವಗೊಳಿಸಿದರು.

ಮಣಿಕಾ ಬಾತ್ರಾ ತನ್ನ ಮುಂದಿನ ಪಂದ್ಯದಲ್ಲಿ ಹಾಂಕಾಂಗ್‌ನ ಝು ಚೆಂಗ್ಜು ಮತ್ತು ಜಪಾನ್‌ನ ಮಿಯು ಹಿರಾನೊ ಸ್ಪರ್ಧಿಗಳನ್ನು ಎದುರಿಸಲಿದ್ದಾರೆ. ಮಣಿಕಾ ಬಾತ್ರಾ ಅವರು ಒಲಿಂಪಿಕ್ಸ್‌ನಲ್ಲಿ ಟೇಬಲ್ ಟೆನಿಸ್ ಸ್ಪರ್ಧೆಯ ಪ್ರೀ ಕ್ವಾರ್ಟರ್‌ಫೈನಲ್‌ಗೆ ತಲುಪಿದ ಮೊದಲ ಭಾರತೀಯ ಕ್ರೀಡಾಪಟುವಾಗುವ (ಪುರುಷ ಅಥವಾ ಮಹಿಳೆ) ಮೂಲಕ ಇತಿಹಾಸ ಬರೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಂದ್ಯದ ಎರಡನೇ ಆಟ ನಿಕಟ ಸ್ಪರ್ಧೆಯಿದ್ದರೂ ಬಾತ್ರಾ ಅವರು ಉತ್ತಮ ಪ್ರದರ್ಶನ ನೀಡುವ ಮೂಲಕ ಪ್ರಾಬಲ್ಯ ಸಾಧಿಸಿದರು ನಾಲ್ಕು ಗೇಮ್‌ಗಳಲ್ಲಿಯೂ ಮುನ್ನಡೆ ಸಾಧಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಆಗ ಬರ, ಈಗ ನೆರೆ- ಸಂತ್ರಸ್ತರತ್ತ ಧಾವಿಸಲಿ ಸರ್ಕಾರ

ಕಾಮನ್‌ವೆಲ್ತ್ ಗೇಮ್ಸ್ ಮತ್ತು ಏಷ್ಯನ್ ಗೇಮ್ಸ್‌ನಲ್ಲಿ ಪದಕಗಳನ್ನು ಗೆದ್ದಿರುವ ಮಣಿಕಾ ಬಾತ್ರಾ, ಫ್ರಾನ್ಸ್ ಎದುರಾಳಿ ಪ್ರಿತಿಕಾ ಪವಾಡೆ ಅವರಿಗೆ ಅಂಕಗಳನ್ನು ಹೆಚ್ಚಿಸಿಕೊಳ್ಳಲು ಬಿಡಲಿಲ್ಲ ಪ್ರತಿ ಗೇಮ್‌ನಲ್ಲಿ ಉತ್ತಮವಾಗಿ ಆಟವಾಡಿ ಅಂತಿಮವಾಗಿ ಗೆಲುವನ್ನು ತಮ್ಮದಾಗಿಸಿಕೊಂಡರು.

ಮಣಿಕಾ ಬಾತ್ರಾ ವಿರುದ್ಧ ಸ್ಪರ್ಧೆಯಲ್ಲಿ ಸೋತ ಫ್ರಾನ್ಸ್‌ನ ಎಡಗೈ ಆಟಗಾರ್ತಿ 19 ವರ್ಷದ ಪ್ರಿತಿಕಾ ಪವಾಡೆ ಮೂಲತಃ ಭಾರತದ ಪಾಂಡಿಚರಿ ಮೂಲದವರು. ಇವರ ಪೋಷಕರು 2003ರಲ್ಲಿ ಉದ್ಯೋಗದ ನಿಮಿತ್ತ ಫ್ರಾನ್ಸ್‌ಗೆ ತೆರಳಿದ್ದರು. ಪ್ಯಾರಿಸ್‌ನಲ್ಲಿ ಜನಿಸಿದ ಪ್ರಿತಿಕಾ ಟೇಬಲ್‌ ಟೆನಿಸ್‌ನಲ್ಲಿ ಆಸಕ್ತಿ ಬೆಳಸಿಕೊಂಡು ಕಳೆದ 2 ಒಲಿಂಪಿಕ್ಸ್‌ಗಳಿಂದ ಫ್ರಾನ್ಸ್‌ ಪರವಾಗಿ ದೇಶವನ್ನು ಪ್ರತಿನಿಧಿಸುತ್ತಿದ್ದಾರೆ.

ಮಣಿಕಾ ಬಾತ್ರಾ ಆಟದ ನಂತರ, ಭಾರತದ ಅಗ್ರ ಶ್ರೇಯಾಂಕದ ಟೇಬಲ್‌ ಟೆನಿಸ್ ಆಟಗಾರ್ತಿ ಶ್ರೀಜಾ ಅಕುಲಾ ಅವರು ಬುಧವಾರ(ಜುಲೈ 31) ಸಿಂಗಾಪುರದ ಜೆಂಗ್‌ ಜಿಯಾನ್ ವಿರುದ್ಧ ಪ್ರೀ ಕ್ವಾರ್ಟರ್‌ಫೈನಲ್‌ ಪಂದ್ಯವನ್ನಾಡಲಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...