ಪ್ಯಾರಿಸ್ ಡೈಮಂಡ್ ಲೀಗ್‌ನಿಂದ ಹೊರಗುಳಿದ ಒಲಿಂಪಿಕ್ಸ್‌ ಚಾಂಪಿಯನ್ ನೀರಜ್ ಚೋಪ್ರಾ 

Date:

ಒಲಿಂಪಿಕ್ಸ್‌ ಮತ್ತು ವರ್ಲ್ಡ್‌ ಚಾಂಪಿಯನ್ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಅವರು ಜುಲೈ 7ರಂದು ನಡೆಯಲಿರುವ ಪ್ಯಾರಿಸ್ ಡೈಮಂಡ್ ಲೀಗ್‌ನಿಂದ ಹೊರಗುಳಿಯಲಿದ್ದಾರೆ. ಪ್ಯಾರಿಸ್ ಡೈಮಂಡ್ ಲೀಗ್‌ನ ವೆಬ್‌ಸೈಟ್‌ನಲ್ಲಿ ‘ಐದು ಒಲಿಂಪಿಕ್ ಚಾಂಪಿಯನ್‌ಗಳು, ಆರು ವರ್ಲ್ಡ್‌ ಚಾಂಪಿಯನ್‌ಗಳು ಮತ್ತು ಚಾರ್ಲೆಟಿಯಲ್ಲಿ ಹನ್ನೆರಡು ಯುರೋಪಿಯನ್ ಚಾಂಪಿಯನ್‌ಗಳು’ ಎಂಬ ಶೀರ್ಷಿಕೆಯಡಿ ಪ್ರಕಟಿಸಿರುವ ಪಟ್ಟಿಯಲ್ಲಿ ನೀರಜ್ ಹೆಸರನ್ನು ಉಲ್ಲೇಖಿಸಲಾಗಿಲ್ಲ.

ಪ್ರಕಟಣೆಯಲ್ಲಿ ಐದು ಟೋಕಿಯೊ ಒಲಿಂಪಿಕ್ಸ್ ಚಾಂಪಿಯನ್‌ಗಳನ್ನು ಹೆಸರಿಸಲಾಗಿದೆ; ಫೇಯ್ತ್ ಕಿಪ್ಯೆಗೊನ್, ಮೊಂಡೋ ಡುಪ್ಲಾಂಟಿಸ್ (ಪೋಲ್ ವಾಲ್ಟ್), ಮಲೈಕಾ ಮಿಹಾಂಬೊ (ಲಾಂಗ್ ಜಂಪ್), ವ್ಯಾಲರಿ ಅಲ್ಮನ್ (ಡಿಸ್ಕಸ್), ಮತ್ತು ವೊಜ್ಸಿಕ್ ನೋವಿಕಿ (ಹ್ಯಾಮರ್ ಥ್ರೋ) – ಈ ಐವರು ಡೈಮಂಡ್ ಲೀಗ್‌ನಲ್ಲಿ ಭಾಗವಹಿಸಲಿದ್ದಾರೆ. ನೀರಜ್ ಅವರು ಲೀಗ್‌ನಿಂದ ಹೊರಗುಳಿದಿದ್ದಾರೆ.

‘ಓಸ್ಟ್ರಾವಾ ಗೋಲ್ಡನ್ ಸ್ಪೈಕ್ ಮೀಟ್’ನಲ್ಲಿ ಪದಕ ಗೆಲ್ಲುವ ಅವಕಾಶ ಕಳೆದುಕೊಂಡ ನೀರಜ್, ಪಾವೊ ನೂರ್ಮಿ ಗೇಮ್ಸ್‌ನಲ್ಲಿ ಸ್ಪರ್ಧಿಸಿದ್ದರು. ಇನ್ನು, ಅವರ ಮುಂದಿನ ದೊಡ್ಡ ಸ್ಪರ್ಧೆ ಜುಲೈನಲ್ಲಿ ನಡೆಯಲಿರುವ ಒಲಿಂಪಿಕ್ಸ್ ಆಗಿರಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೇ ತಿಂಗಳಲ್ಲಿ ಭುವನೇಶ್ವರದಲ್ಲಿ ನಡೆದ ಸಂವಾದ ಕಾರ್ಯಕ್ರಮದ ವೇಳೆ ಪ್ಯಾರಿಸ್ ಡೈಮಂಡ್ ಲೀಗ್‌ನಲ್ಲಿ ಭಾಗವಹಿಸುವುದಾಗಿ ನೀಜರ್ ಖಚಿತಪಡಿಸಿದ್ದರು. ತರಬೇತಿ ಸಮಯದಲ್ಲಿ ಅವರ ತೊಡೆ ಭಾಗದಲ್ಲಿ ನೋವು ಕಾಣಿಸಿಕೊಂಡ ಕಾರಣ ಅವರು ಓಸ್ಟ್ರಾವಾ ಕ್ರೀಡಾಕೂಟದಲ್ಲಿ ಭಾಗವಹಿಸಲಿಲ್ಲ.

ಸದ್ಯ, ಜುಲೈ 26ರಿಂದ ಫ್ಯಾರಿಸ್‌ನಲ್ಲಿಯೇ ನಡೆಯಲಿರುವ ಒಲಂಪಿಕ್ಸ್‌ನಲ್ಲಿ ಭಾಗವಹಿಸಲು ನೀರಜ್ ಸಿದ್ದತೆ ನಡೆಸುತ್ತಿದ್ದಾರೆ. ಅದಕ್ಕೂ ಮುನ್ನ ಯಾವುದೇ ಸಮಸ್ಯೆಯನ್ನು ಎದುರಿಸಲು ಸಿದ್ದರಿಲ್ಲವೆಂದು ಹೇಳಲಾಗುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...